ರಾಯಚೂರು | ಒಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್

Date:

Advertisements

ವೈದ್ಯರನ್ನು ನಂಬಿ ಜೀವ ಕಾಪಾಡಿಕೊಳ್ಳಲು ಆಸ್ಪತ್ರೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕು. ಹಾಗಾಗಿ ಒಪೆಕ್‌ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ, ಕರ್ತವ್ಯ ಏನೆಂಬುದನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಯಚೂರು ನಗರದ ಒಪೆಕ್ ಆಸ್ಪತ್ರೆಯಲ್ಲಿ ಜನವರಿ 24ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಆಸ್ಪತ್ರೆಯ ವೈದ್ಯರು, ತಜ್ಞ ವೈದ್ಯರು ಮತ್ತು ಸಿಬ್ಬಂದಿ ನಿಗದಿಪಡಿಸಿದ ಅವಧಿವರೆಗೆ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ನೀಡಬೇಕು. ಆಸ್ಪತ್ರೆ ವೇಳೆಯಲ್ಲಿ ಖಾಸಗಿ ಸೇವೆ ಒದಗಿಸುವುದು ಕಂಡುಬಂದರೆ ಸೇವೆಯಿಂದ ಅಮಾನತುಗೊಳಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಅತ್ಯಾಧುನಿಕ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಹೆಚ್ಚುವರಿ ತುರ್ತು ನಿಗಾ ಘಟಕಗಳನ್ನು ಸ್ಥಾಪಿಸುವ ಮೂಲಕ ಜನರಿಗೆ ಗುಣಮಟ್ಟ ಸೇವೆ ಒದಗಿಸಲು ಮತ್ತಷ್ಟು ಪ್ರಯತ್ನಗಳನ್ನು ಕೈಗೊಳ್ಳಬೇಕು” ಎಂದು ತಿಳಿಸಿದ ಸಚಿವರು, ವಿಭಾಗವಾರು ಪ್ರಗತಿಯ ಮಾಹಿತಿ ಪಡೆದುಕೊಂಡರು.

Advertisements

“ಹೃದಯಶಾಸ್ತ್ರ(ಕಾರ್ಡಿಯೋಲಾಜಿ) ಮತ್ತು ನರವಿಜ್ಞಾನ(ನ್ಯೂರಾಲಜಿ) ಸೇರಿದಂತೆ ಕಾರ್ಯನಿರ್ವಹಿಸುತ್ತಿರುವ ತುರ್ತು ಚಿಕಿತ್ಸಾ ನಿಗಾ ಘಟಕಗಳನ್ನು ಐದಕ್ಕೆ ಹೆಚ್ಚಿಸಿ ಡಯಾಲಿಸಿಸ್, ಮಕ್ಕಳ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಕೈಗೊಳ್ಳಬೇಕು. ಅಂತೆಯೇ ಕ್ಯಾತಲಾಬ್ ಸೇರಿ ಹೆಚ್ಚುವರಿ ತುರ್ತು ನಿಗಾ ಘಟಕ ಪ್ರಾರಂಭಿಸಲು ಅಂದಾಜು ಪಟ್ಟಿ ಸಲ್ಲಿಸಿ” ಎಂಉ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಹೃದಯ ಸಂಬಂಧಿ ರೋಗಿಗಳು ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್, ಬೆಂಗಳೂರಿಗೆ ರೋಗಿಗಳನ್ನು ಕಳುಹಿಸದೆ ಒಪೆಕ್ ಆಸ್ಪತ್ರೆಯಲ್ಲಿಯೇ ಲಭ್ಯವಿರುವ ಸೌಲಭ್ಯಗಳ ಮೂಲಕ ಜನರಿಗೆ ಗುಣಮಟ್ಟದ ಸೇವೆ ಒದಗಿಸಬೇಕು. ಅಗತ್ಯಬಿದ್ದರೆ ಕಲಬುರಗಿಯ ಜಯದೇವ ಆಸ್ಪತ್ರೆಗೆ ರವಾನಿಸಬೇಕು. ಜತೆಗೆ ಅಗತ್ಯವಿರುವ ಸಿಬ್ಬಂದಿಯನ್ನು ನೇಮಿಸಲು ನೇಮಕಾತಿ ನಡೆಸಬೇಕು” ಎಂದು ಸೂಚಿಸಿದರು.

ಒಪೆಕ್ ಆಸ್ಪತ್ರೆಯಲ್ಲಿಯೇ ಮೂತ್ರಕೋಶ ಅಳವಡಿಕೆ ವ್ಯವಸ್ಥೆ ಆರಂಭಿಸಿ ಸೌಲಭ್ಯಗಳ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

“ತಜ್ಞ ವೈದ್ಯರು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಬೇಕು. ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆಗೆ ಬೇಕಾದ ಯಂತ್ರೋಪಕರಣ ಹಾಗೂ ಸಿಬ್ಬಂದಿ ಒದಗಿಸಬೇಕು. ದಂತ ಚಿಕಿತ್ಸೆಗೆ ಒಪೆಕ್ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಿದೆ. ಆದ್ದರಿಂದ ಇಲ್ಲಿನ ವೈದ್ಯರ ಸೇವೆಯನ್ನು ರಿಮ್ಸ್‌ನಲ್ಲಿ ಪಡೆದುಕೊಳ್ಳಲು ಯೋಜಿಸಬೇಕು” ಎಂದರು.

“ನರ್ಸಿಂಗ್ ವಿದ್ಯಾರ್ಥಿಗಳ ವಸತಿ ನಿಲಯದ ಕಾಮಗಾರಿಯು ಪ್ರಗತಿಯಲ್ಲಿದೆ. ಔಷಧಿ ಉಗ್ರಾಣ ಕಾಮಗಾರಿ ಟೆಂಡರ್ ಹಂತದಲ್ಲಿದೆ. ಮಾರ್ಚ್‌ ಅಂತ್ಯದೊಳಗೆ ಎಲ್ಲ ಕಾಮಗಾರಿ ಪೂರ್ಣಗೊಳಿಸಬೇಕು. ಒಪೆಕ್ ಮತ್ತು ರಿಮ್ಸ್ ಕ್ಯಾಂಪಸ್ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಿ ಮಾಸ್ಟರ್ ಪ್ಲಾನ್ ಒಳಗೊಂಡಿರುವ ಆಕರ್ಷಣೀಯ ಸೌಲಭ್ಯ ಒದಗಿಸಬೇಕು” ಎಂದು ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ ನಿತೀಶ್ ಕೆ “ಭಾರತ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಸಿಎಸ್‌ಆರ್ ಅನುದಾನದಲ್ಲಿ ಡಯಾಲಿಸಿಸ್ ಯಂತ್ರಗಳನ್ನು ನೀಡಲು ಮುಂದೆ ಬಂದಿದ್ದು, ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿ ಸೇವೆ ಪ್ರಾರಂಭ ಮಾಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಜಿಲ್ಲಾಸ್ಪತ್ರೆಯ ಖಾಲಿ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು ಮಾತನಾಡಿ, “ಹೆಚ್ಚುವರಿಯಾಗಿ 4 ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಇನ್ನುಳಿದ ನಾಲ್ಕು ತಾಲೂಕು ಕೇಂದ್ರಗಳಲ್ಲಿಯೂ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಾಗುತ್ತದೆ” ಎಂದು.

ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಎ ವಸಂತಕುಮಾರ್, ರಿಮ್ಸ್ ನಿರ್ದೇಶಕ ಡಾ ರಮೇಶ್, ಒಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ ರಮೇಶ ಸಾಗರ್, ರಿಮ್ಸ್ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ. ಕೆ ಆರ್ ದುರುಗೇಶ್, ಹಣಕಾಸು ಅಧಿಕಾರಿ ಹನುಮೇಶ್ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X