ಭಾನುವಾರ ನಡೆದ ಪಿಡಿಒ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಪರೀಕ್ಷೆ ಬರೆಯದೆ ಮಕ್ಕಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಎದುರು ಪ್ರತಿಭಟನೆ ನಡೆಸಿರುವ ಘಟನೆ ಸಿಂಧನೂರಿನ ಸರ್ಕಾರಿ ಮಹಾವಿದ್ಯಾಲಯದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಸರ್ಕಾರಿ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು. ಒಂದು ಕೊಠಡಿಯಲ್ಲಿ 24 ಜನ ಇದ್ದರು. ಆದರೆ, ಎಲ್ಲರಿಗೂ ಪ್ರಶ್ನೆಪತ್ರಿಕೆ ನೀಡಲಾಗಿಲ್ಲ. ಕೆಲವರಿಗೆ ಮೊದಲೇ ಪ್ರಶ್ನೆಪತ್ರಿಕೆ ನೀಡಿಲಾಗಿದೆ ಎಂದು ಅಭ್ಯರ್ಥಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. 1 ಕೋಣೆಯಲ್ಲಿ 24 ಅಭ್ಯರ್ಥಿಗಳನ್ನು ಪರೀಕ್ಷೆಗೆ ಕೂರಿಸಲಾಗಿದೆ. 24 ಪ್ರಶ್ನೆಪತ್ರಿಕೆ ಬದಲು 12 ಪ್ರಶ್ನೆಪತ್ರಿಕೆ ಮಾತ್ರ ಕಳುಹಿಸಲಾಗಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.
ರಸ್ತೆ ತಡೆದು ಪ್ರತಿಭಟನೆ ನೆಡೆಸಿರುವ ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
