ರಾಯಚೂರು | ಎರಡು ತಿಂಗಳಿಂದ ಪಿಡಿಒ ಹುದ್ದೆ ಖಾಲಿ; ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಗ್ರಾಮಸ್ಥರ ಪ್ರತಿಭಟನೆ

Date:

ಗ್ರಾಮ ಪಂಚಾಯತ್‌ನಲ್ಲಿ ಕಳೆದ ಎರಡು ತಿಂಗಳಿಂದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕವಾಗಿಲ್ಲ. ಇದರಿಂದಾಗಿ ಪಂಚಾಯತ್ ಕಾರ್ಯಗಳಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಂಡ ಹಿನ್ನಲೆಯಲ್ಲಿ ಲಿಂಗಸೂಗೂರು ತಾಲ್ಲೂಕು ಕೋಠಾ ಪಂಚಾಯತಿಗೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಕಸದ ರಾಶಿ, ಒಳಚರಂಡಿ ಸಮಸ್ಯೆ, ಹಾಗೂ ಕುಡಿಯುವ ನೀರು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಕಚೇರಿಗೆ ಅಲೆದಾಟ ದಿನೇ ದಿನೇ ಹೆಚ್ಚುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಬಗ್ಗೆ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ತಾಲ್ಲೂಕು ಮುಖಂಡ ಮಲ್ಲೇಶ ಮ್ಯಾಗೇರಿ ಮಾತನಾಡಿ, ʼಗ್ರಾಮ ಪಂಚಾಯತ್ ಕಚೇರಿಯು ತಾತ್ಕಾಲಿಕವಾಗಿ ಬೇರೆ ಪಂಚಾಯತ್‌ನ ಪಿಡಿಒ ಸಹಾಯ ಪಡೆಯುತ್ತಿದ್ದರೂ, ಅದು ಸಮರ್ಪಕ ಪರಿಹಾರ ದೊರಕುತ್ತಿಲ್ಲ.
ಗ್ರಾಪಂನಲ್ಲಿ ಹಿಂದಿನ ಪಿಡಿಒ ಅಮಾನತುಗೊಂಡ ಬಳಿಕ, ಹೊಸ ಪಿಡಿಒ ನೇಮಕವಾಗದೇ ಹಲವು ದಿನಗಳಿಂದ ಪಂಚಾಯಿತಿ ಕಾರ್ಯಗಳು ಸ್ಥಗಿತಗೊಂಡಿವೆ. ದಿನನಿತ್ಯದ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ವ್ಯತ್ಯಯ ಉಂಟಾಗಿದೆʼ ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement -
1000165950

ಪಿಡಿಒ ಹುದ್ದೆ ಖಾಲಿಯಿಂದ ವಿವಿಧ ಸರ್ಕಾರಿ ಸೇವೆಗಳು, ನಿರ್ಮಾಣ ಕಾಮಗಾರಿಗಳು, ದಾಖಲೆ ಪತ್ರಗಳ ನವೀಕರಣ, ಹಿತಾಸಕ್ತಿ ಯೋಜನೆಗಳ ಜಾರಿ ಸೇರಿದಂತೆ ಹಲವು ಕೆಲಸಗಳು ನಿಂತು ಹೋಗಿವೆ. ಪಂಚಾಯಿತಿ ಕಚೇರಿಗೆ ತೆರಳಿದರೆ ಅಧಿಕಾರಿಗಳು ಇಲ್ಲ ಎನ್ನುತ್ತಾರೆ. ಇದರಿಂದ ನಮ್ಮ ಅರ್ಜಿಗಳು ತಿಂಗಳಿನಿಂದ ಬಾಕಿ ಇವೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
1000165953
1000165956

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರೀತಿ ವಿಚಾರದಲ್ಲಿ ಯುವಕನ ಹತ್ಯೆ ಖಂಡಿಸಿ – ಸಾಲಿಡಾರಿಟಿ ಪ್ರತಿಭಟನೆ

ಕೂಡಲೇ ಖಾಯಂ ಪಿಡಿಒ ನೇಮಕ ಮಾಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.





WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...