ರಾಯಚೂರು | ಹುಚ್ಚು ನಾಯಿಗಳ ಹಾವಳಿಗೆ ಬೇಸತ್ತ ಜನ; ಕ್ರಮ ಕೈಗೊಳ್ಳದ ನಗರಸಭೆಯ ವಿರುದ್ಧ ಆಕ್ರೋಶ

Date:

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಬೀದಿ ನಾಯಿಗಳು ಮತ್ತು ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ಪಾದಚಾರಿಗಳಿಗೆ ಇದರಿಂದ ತುಂಬಾ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಕ್ಯಾರೇ ಎನ್ನುತ್ತಿಲ್ಲಾ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

- Advertisement -

ಎರಡು ದಿನಗಳ ಹಿಂದೆ ನಗರದ ಗೀತಾ ಕೆಫೆ ಹತ್ತಿರ ಶಾಪಿಂಗ್ ಮಾಡುವ ವೇಳೆ ಹುಚ್ಚು ನಾಯಿಯೊಂದು ಪೊಲೀಸ್‌ ಅಧಿಕಾರಿಯೋರ್ವರ ಪುತ್ರನ ಮೇಲೆ ರಸ್ತೆಯಲ್ಲಿ ದಾಳಿ ನಡೆಸಿ ಗಂಭೀರವಾಗಿ ಕಡಿದು ಗಾಯಗೊಳಿಸಿದ ಘಟನೆಯು ಸಿಂಧನೂರು ಜನತೆಯನ್ನು ಭಯಗೊಳಿಸಿದೆ. ಇದೊಂದು ಘಟನೆ ಮಾತ್ರವಲ್ಲ, ನಗರದ ಪ್ರತಿ ವಾರ್ಡ್‌, ಬಜಾರ್‍‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಬೈಕ್ ಸವಾರರು, ಪಾದಚಾರಿಗಳು ಸಿಂಧನೂರಿಗೆ ಬರಲು ಹಿಂದೇಟು ಹಾಕುವಂತಾಗಿದೆ ಎನ್ನುತ್ತಿದ್ದಾರೆ ಸ್ಥಳೀಯರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಜೀವಕ್ಕೆ ಮಾರಕವಾದ ಘಟನೆ ನಡೆಯುತ್ತಿದೆ. ಆದರೆ, ಬೀದಿ ನಾಯಿಗಳನ್ನು ನಿಯಂತ್ರಣ ಮಾಡಬೇಕಾದ ನಗರಸಭೆಯವರು ಮೌನವಹಿಸಿ, ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಕಳೆದ ಒಂದು ತಿಂಗಳದ ಹಿಂದೆ ಬೀದಿ ನಾಯಿಗಳನ್ನು ಹಿಡಿದು ಬೇರೆಡೆಗೆ ಸಾಗಿಸುತ್ತಿದ್ದಾರೆಂಬ ಸುದ್ದಿ ಹರಿದಾಡಿತ್ತಾದರೂ, ನಾಯಿಗಳು ಮಾತ್ರ ಸಿಂಧನೂರು ಪಟ್ಟಣದ ತುಂಬಾ ಓಡಾಟ ಮಾಡುತ್ತಲೇ ಇವೆ. ನಾಯಿಗಳ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವೈಫಲ್ಯಕ್ಕೀಡಾಗಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದ್ದಾರೆಯೇ? ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಬೀದಿ ನಾಯಿಗಳು ಮಾತ್ರವಲ್ಲದೇ, ಬಿಡಾಡಿ ದನಗಳ ಹಾವಳಿ ಕೂಡ ಹೆಚ್ಚಾಗಿದ್ದು, ರಸ್ತೆ ಸಂಚಾರಕ್ಕೆ ತುಂಬಾ ಸಮಸ್ಯೆಯಾಗಿದೆ. ಜೋರಾಗಿ ಬರುವ ವಾಹನಗಳಿಗೆ ಸಿಲುಕಿ ಈ ಹಿಂದೆ ಹಸುಗಳು ಸಾವನ್ನಪ್ಪಿದ್ದವು. ಕಾಲುಗಳು ಮುರಿದುಕೊಂಡ ಘಟನೆಗಳು ಕೂಡ ನಡೆದಿದೆ. ಆದರೂ, ಸೂಕ್ತ ಕ್ರಮ ಕೈಗೊಳುತ್ತಿಲ್ಲ ಎಂದು ನಾಗರಿಕರು ದೂರಿದ್ದಾರೆ.

ನಗರಸಭೆಯವರು ಬೀದಿ ನಾಯಿಗಳನ್ನು ಹಾಗೂ ಬಿಡಾಡಿ ದನಗಳನ್ನು ಕೂಡಲೇ ನಿಯಂತ್ರಣಗೊಳಿಸಲಿಕ್ಕೆ ಮುಂದಾಗಬೇಕೆಂದು ಪುರಸಭೆಗೆ ದೂರು ನೀಡಿದಾಗ, ಅವರು ಧ್ವನಿ ವರ್ಧಕ ಬೀಡಾಡಿ ದನಗಳು ಇದ್ದರೆ ಅವುಗಳನ್ನು ಗೋ ಶಾಲೆಗೆ ಕಳುಹಿಸಲಾಗುವುದು ಎಂದು ಹೇಳಿದ್ದರೇ ಹೊರತು, ಹೇಳಿದಂತೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ

ಕೂಡಲೇ ಸಂಬಂಧಿಸಿದ ನಗರಸಭೆಯವರು ಬೀದಿ ನಾಯಿಗಳನ್ನು ಹಾಗೂ ಬೀಡಾಡಿ ದನಗಳನ್ನು ಕೂಡಲೇ ನಿಯಂತ್ರಣಗೊಳಿಸಲಿಕ್ಕೆ ಮುಂದಾಗಬೇಕು ಎಂಬುದು ನಮ್ಮ ಸಂಘಟನೆಯ ಒತ್ತಾಯವಾಗಿದೆ. ಇಲ್ಲದೇ, ಹೋದಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕಾದ ಸ್ಥಿತಿ ಬರಬೇಕಾಗುತ್ತದೆಂದು ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರ ಅವರಿಗೆ ಆಗ್ರಹಿಸುತ್ತಿದ್ದೇವೆ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ಎಂ.ಗಂಗಾಧರ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...