ರಾಯಚೂರು | ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸಲು ಆಗ್ರಹ

Date:

ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ.

ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು. ಕರ್ನಾಟಕಕ್ಕೆ ಬರಗಾಲದ ಅನುದಾನ ಬಿಡುಗಡೆ ಮಾಡಬೇಕು. ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ಮಧ್ಯ ಪ್ರವೇಶ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಒಕ್ಕೂಟ ಸರ್ಕಾರ ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರ್ಕಾರಗಳು ಸಾಲ ಪಡೆಯುವುದನ್ನು ನಿಲ್ಲಿಸಬೇಕು. ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಒಕ್ಕೂಟ ಸರ್ಕಾರ ಆದಾಯ ತೆರಿಗೆ ವಿಭಾಗಗಳ ದುರ್ಬಳಕೆ ಮಾಡುವುದನ್ನು ನಿಲ್ಲಿಸಬೆಕು. ರಾಜ್ಯ ಸರ್ಕಾರಗಳ ವಿಷಯದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಸಂವಿಧಾನಾತ್ಮಕ ಸ್ಥಾನದ ದುರುಪಯೋಗ ತಡೆಯಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದು, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ್, ತಾಲೂಕು ಕಾರ್ಯದರ್ಶಿ ಡಿ.ಎಸ್. ಶರಣಬಸವ ಸೇರಿದಂತೆ ಅನೇಕರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಮೇಲೆ ಹಿಂದುತ್ವವಾದಿಗಳಿಂದ ಹಲ್ಲೆ

ಜಾನುವಾರುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ 15-20ಜನರ ಗುಂಪೊಂದು ದಾಳಿ ಮಾಡಿರುವ...

ಹಾವೇರಿ | ಪ್ರೀತಿಸಿದ ಯುವತಿ ಜೊತೆ ಹೋದ ಮಗ: ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; 6 ಮಂದಿಯ ಬಂಧನ

ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ...

ಹಾಸನ | ಮೀನು ತಿಂದು ಇಬ್ಬರು ಸಾವು, 15 ಮಂದಿ ಅಸ್ವಸ್ಥ; ಬಸವಹಳ್ಳಿ ಗ್ರಾಮದ ಜನರಲ್ಲಿ ಆತಂಕ

ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾಗಿರುವ ಘಟನೆ ಹಾಸನ...

ದಾವಣಗೆರೆ | ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಆಕಸ್ಮಿಕ ಬೆಂಕಿ

ದಾವಣಗೆರೆ ನಗರದ ಹೊರವಲಯದಲ್ಲಿರುವ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಆಕಸ್ಮಿಕವಾಗಿ ಕಸದ...