ರಾಯಚೂರು | ಒಳ ಮೀಸಲಾತಿ ಜಾರಿಗೆ ನೀಡಿರುವ ಸಮ್ಮತಿ ರದ್ದತಿ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

Date:

ಸುಪ್ರಿಂಕೋರ್ಟಿನ ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐದು ಮಂದಿ ನ್ಯಾಯಮೂರ್ತಿಗಳ ಪೀಠವು ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಸಮ್ಮತಿಸಿದೆ. ಪೀಠದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸುಪ್ರಿಂಕೋರ್ಟಿಗೆ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಮಿತ್ರ ಹೇಳಿದ್ದಾರೆ.

- Advertisement -

ರಾಯಚೂರಿನಲ್ಲಿ ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಅವರು, “ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶವಿಲ್ಲ. ಪಂಜಾಬ್‌ನಲ್ಲಿ ಒಳ ಮೀಸಲಾತಿಯನ್ನು ಚಂಡೀಗಡ ಹೈಕೋರ್ಟ್‌ ರದ್ದುಗೊಳಿತ್ತು. ಅದನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ 2014ರಲ್ಲಿ ಸುಪ್ರಿಂಕೋರ್ಟ್‌ ಮೊರೆ ಹೋಗಿತ್ತು. ನ್ಯಾಯಾಲಯವು ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿತ್ತು. 2020ರಲ್ಲಿ ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಐದು ನ್ಯಾಯಮೂರ್ತಿ ಒಳ ಮೀಸಲಾತಿ ಜಾರಿಗೆ ಸಮ್ಮತಿ ನೀಡಿತ್ತು. ಆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ. ಅರ್ಜಿಯನ್ನು ಏಳು ಮಂದಿ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಲಾಗಿದೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಏಳು ಮಂದಿ ನ್ಯಾಯಮೂರ್ತಿಗಳ ಪೀಠದಲ್ಲಿ ವಿಚಾರಣೆ ನಡೆಯಬೇಕಿದೆ. ಒಳ ಮೀಸಲಾತಿ ಬೇಕೆನ್ನುವ ಸಂಘಟನೆಗಳು ಸುಪ್ರಿಂಕೋರ್ಟಿನಲ್ಲಿ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಮಾಧುಸ್ವಾಮಿ ನೇತೃತ್ವದ ಉಪ ಸಮಿತಿ ಶಿಫಾರಸ್ಸಿನ ಮೇರೆಗೆ ಒಳ ಮೀಸಲಾತಿ ನಿಗಧಿಗೊಳಿಸಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದೆ. ಆದರೆ, ಸಮಿತಿ ನೀಡಿರುವ ದತ್ತಾಂಶ ಪೂರಕವಾಗಿಲ್ಲ” ಎಂದು ಹೇಳಿದ್ದಾರೆ.

“ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ಬಿಜೆಪಿ ಸರ್ಕಾರ ಅಂಗೀಕರಿಸಿಲ್ಲ. ನೀಡಿರುವ ಅಂಕಿ ಅಂಶಗಳು ಪೂರಕವಾಗಿಲ್ಲದೇ ಇರುವುದರಿಂದ ಸಮಿತಿ ಶಿಫಾರಸ್ಸು ಮಾನ್ಯ ಆಗುವದಿಲ್ಲ. ಬಿಜೆಪಿ ಸರ್ಕಾರವೇ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿ ರದ್ದುಗೊಳಿಸಿರುವ ಶಿಫಾರಸ್ಸನ್ನು ಈಗಾಗಲೇ ಸುಪ್ರಿಂಕೋರ್ಟ ರದ್ದುಗೊಳಸಿದೆ. ಅದೇ ಮಾದರಿಯಲ್ಲಿ ಮಾಧುಸ್ವಾಮಿ ನೇತೃತ್ವದ ಉಪ ಸಮಿತಿ ಶಿಫಾರಸ್ಸು ಕೂಡ ರದ್ದುಗೊಳ್ಳುತ್ತದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...