ಬೇಸಿಗೆ ಕಾಲದಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದರೆ ಸಮಸ್ಯೆ ನಿವಾರಣೆಗೆ ಎಲ್ಲ ಮುಂಜಾಗೃತಾ ಕ್ರಮವಹಿಸಬೇಕು ಹಾಗೂ ನೀರಿನ ಸಮಸ್ಯೆ ಎದುರಾದರೆ ನಮ್ಮ ಗಮನಕ್ಕೆ ತರಬೇಕು ಎಂದು ಸಂಸದ ಜಿ ಕುಮಾರ್ ನಾಯ್ಕ ಹೇಳಿದರು.
ದೇವದುರ್ಗ ಪಟ್ಟಣದ ತಾಲೂಕು ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ತಾಲೂಕಿನ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಮಾತನಾಡಿದರು.
“ನಾನು ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಮೇಲಧಿಕಾರಿಗಳ ಗಮನ ಸೆಳೆದು ಪರಿಹಾರಕ್ಕೆ ಕ್ರಮ ಸೂಚಿಸುತ್ತೇನೆ. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸುವುದು ಅಧಿಕಾರಿಗಳ ಜವಾಬ್ದಾರಿ” ಎಂದರು.
“ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಅಡೆತಡೆಯಾಗದಂತೆ ಕ್ರಮವಹಿಸುವ ಜವಾಬ್ದಾರಿ
ಜೆಸ್ಕಾಂ ಅಧಿಕಾರಿಗಳದ್ದಾಳಗಿದೆ. ವಿದ್ಯುತ್ ಕಡಿತದಿಂದ ನೀರು ಸರಬರಾಜಿಗೆ ವ್ಯತ್ಯಯವಾದರೆ ಜೆಸ್ಕಾಂ ಅಧಿಕಾರಿಗಳೇ ಹೊಣೆ” ಎಂದು ಎಚ್ಚರಿಸಿದರು.
ಈ ವೇಳೆ ತಹಶೀಲ್ದಾರ್, ತಾಲೂ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.
