ರಾಯಚೂರು | ಶಾಖೋತ್ಪನ್ನ ಕೇಂದ್ರದಲ್ಲಿ ಆರು ಘಟಕಗಳ ಉತ್ಪಾದನೆ ಸ್ಥಗಿತ

Date:

ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲವೆಂದು ಒಂದು ಕಡೆ ಸರ್ಕಾರ ಹೇಳುತ್ತಿದ್ದರೆ, ಮತ್ತೊಂದು ಕಡೆಯಿಂದ ಶಾಖೋತ್ಪನ್ನ ಕೇಂದ್ರಗಳ ವಿದ್ಯುತ್ ಉತ್ಪಾದನೆ ಇಳಿಕೆಯಾಗಿದ್ದು, ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ಆರು ಘಟಕಗಳ ಉತ್ಪಾದನೆ ಸ್ಥಗಿತಗೊಂಡಿದೆ.

210 ಮೆ.ವ್ಯಾ ವಿದ್ಯುತ್ ಉತ್ಪಾದಿಸುವ ಐದು ಘಟಕ ಹಾಗೂ 250 ಮೆ.ವ್ಯಾ ವಿದ್ಯುತ್ ಉತ್ಪಾದಿಸುವ 8ನೇ ಘಟಕಗಳು ಸ್ಥಗಿತಗೊಂಡಿದ್ದ, ನಾಲ್ಕು ಮತ್ತು ಐದನೇ ಘಟಕ ಮಾತ್ರ ಉತ್ಪಾದನೆಯಲ್ಲಿ ತೊಡಗಿದ್ದು 1720 ಮೆ.ವ್ಯಾ ವಿದ್ಯುತ್ ಸಾಮರ್ಥ್ಯ ಹೊಂದಿರುವ ಕೇಂದ್ರದಲ್ಲಿ 250 ಮೆ.ವ್ಯಾ ವಿದ್ಯುತ್ ಉತ್ಪಾದಿಸಲಾಗುತ್ತಿದೆ.‌

ಕರ್ನಾಟಕ ವಿದ್ಯುತ್ ನಿಗಮ ಐದು ಘಟಕಗಳ ಸ್ಥಗಿತಗೊಳ್ಳಲು ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿದ್ದು, ಬಂಕರ್‌ ಸೇರಿದಂತೆ ಇತರೆ ಕಾರಣ ನೀಡಿ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. ಬಳ್ಳಾರಿ ಶಾಖೋತ್ಪನ್ನ ಕೇಂದ್ರದ ಮೂರು ಘಟಕಗಳಲ್ಲಿ ಎರಡನೇ ಘಟಕ ಸ್ಥಗಿತಗೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮೇಕೆದಾಟು | ಸಹಕಾರ ಕೋರಿ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡುವೆ: ಡಿಕೆ ಶಿವಕುಮಾರ್

ವೈಟಿಪಿಎಸ್‌ನ ಎರಡು ಘಟಕಗಳು ಉತ್ಪಾದನೆಯಲ್ಲಿ ತೊಡಗಿವೆ. ಜಲಾಧಾರಿತ ಘಟಕಗಳೂ ಕೂಡ ಸ್ಥಗಿತಗೊಂಡಿದ್ದರಿಂದ ರಾಜ್ಯ ಬೇಡಿಕೆ ಉತ್ಪಾದನೆಯಲ್ಲಿ ಕೊರತೆ ಕಂಡಿದೆ. 11 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ 3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಆದರೂ ಪರ್ಯಾಯ ಮೂಲಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ನಿಗಮ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...

ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್‌...

ದಾವಣಗೆರೆ | ಜಾತ್ಯತೀತ ಪಕ್ಷಕ್ಕೆ ಮತ ಹಾಕುವಂತೆ ಮಾನವ ಬಂಧುತ್ವ ವೇದಿಕೆ ಮನವಿ

ಮತದಾನದ ಹಕ್ಕು ಸಂವಿಧಾನ ನೀಡಿರುವ ಅತ್ಯಂತ ಶ್ರೇಷ್ಟವಾದದ್ದು ಮತ್ತು ಪವಿತ್ರವಾದ ಅವಕಾಶ....