ರಾಯಚೂರು | ದಲಿತ ಬಾಲಕಿಯ ಕ್ರೂರ ಹತ್ಯೆ ಖಂಡಿಸಿ ; ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Date:

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ಬನೋಶಿ ಗ್ರಾಮದಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಅವಳನ್ನು ಕೊಲೆಗೈದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ದೇವದುರ್ಗ ಘಟಕ ವತಿಯಿಂದ ತಹಶೀಲ್ದಾರ್ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ಬಾಲಕಿಯನ್ನು ಅತ್ಯಾಚಾರ ಮಾಡಿ 12 ತಾಸು ನಿರಂತರ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ. ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರು ವಿಕೃತ ಕಾಮಿಗಳನ್ನು ಯಾವುದೇ ಕಠಿಣ ಶಿಕ್ಷೆಗೆ ಒಳಪಡಿಸುತ್ತಿಲ್ಲ ಎಂದು ಸಂಘಟನಕಾರರು ಆರೋಪಿಸಿದರು.

ಮಹಿಳೆ ರಾತ್ರಿ ವೇಳೆ ಭಯವಿಲ್ಲದೆ ಸಂಚರಿಸಿದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂದು ಮಹಾತ್ಮ ಗಾಂಧಿಜಿ ಹೇಳಿದ್ದರು.” ಆದರೆ ಇಂದಿನ ದಿನಮಾನಗಳಲ್ಲಿ ಆ ಮಾತುಗಳು ಕೇವಲ ಆದರ್ಶವಾಗಿಯೇ ಉಳಿದಂತಾಗಿದೆ. ನಗರಗಳಿಂದ ಗ್ರಾಮಾಂತರ ಪ್ರದೇಶಗಳವರೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಇನ್ನೆಷ್ಟು ಅಮಾಯಕ ಮಕ್ಕಳು ಬಲಿಯಾಗಬೇಕು ಎಂದು ಅವರ ಸುರಕ್ಷತೆ ಗಂಭೀರ ಚಿಂತನೆಯ ವಿಷಯವಾಗಿದೆ ಎಂದು ಕಿಡಿಕಾರಿದರು.

ಪ್ರತಿಭಟನೆ ಉದ್ದೇಶಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪುರಿ ಮಾತನಾಡಿ, ದಲಿತ ಬಾಲಕಿಯನ್ನು ಕ್ರೂರವಾಗಿ ಅತ್ಯಾಚಾರಕ್ಕೆ ಒಳಪಡಿಸಿ ಚಿತ್ರಹಿಂಸೆ ನೀಡಿ ಕೊಲೆಗೈದಿದ್ದಾರೆ. ಆದರೆ ಈ ದುರಂತದ ಬಳಿಕ ಸ್ಥಳೀಯ ಶಾಸಕರು, ಸಂಸದರು ಅಥವಾ ರಾಜ್ಯದ ಕಾಂಗ್ರೆಸ್ ಮುಖಂಡರು ಯಾರೂ ಕೂಡಾ ಆ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿಲ್ಲ,” ಎಂದು ಅವರು ಆರೋಪಿಸಿದರು.

“ಮೇಲ್ವರ್ಗದ ಕುಟುಂಬದ ಬಾಲಕಿಯಾಗಿದ್ದರೆ ಎಲ್ಲಾ ಪಕ್ಷಗಳ ನಾಯಕರು, ಅಧಿಕಾರಿಗಳು ತಕ್ಷಣ ಧಾವಿಸಿ ಸಾಂತ್ವನ ಹೇಳುತ್ತಿದ್ದರು. ಆದರೆ ದಲಿತ ಬಾಲಕಿಯ ಪ್ರಕರಣದಲ್ಲಿ ಎಲ್ಲರೂ ಮೌನ ವಹಿಸಿರುವುದು ನಾಚಿಕೆಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೋರ್ವ ಮುಖಂಡ ಭೀಮ್ ಆರ್ಮಿ ತಾಲ್ಲೂಕಾಧ್ಯಕ್ಷ ವಿಶ್ವನಾಥ್ ಬಲ್ಲಿದೇವ ಮಾತನಾಡಿ, ಇತ್ತೀಚೆಗಷ್ಟೇ ನೂರು ವರ್ಷದ ಸಂಭ್ರಮದ ಹೆಸರಿನಲ್ಲಿ ದೇಶಾದ್ಯಂತ ಹಿಂದೂ ಏಕತೆಯ ಘೋಷಣೆ ನೀಡುತ್ತ, ಕರಿಟೋಪಿ ಮತ್ತು ದೊಣ್ಣೆ ಹಿಡಿದು ಮಾತಿಗೆ ರಕ್ಷಣೆ ಎಂದು ಹೇಳಿದವರು ಇಂದು ಎಲ್ಲಿ ಹೋದರು? ಬಾಲಕಿಯ ಮೇಲಿನ ಅತ್ಯಾಚಾರದ ಘಟನೆ ನಡೆದರೂ ಒಂದೇ ಒಂದು ಪ್ರತಿಭಟನೆಯೂ ಕಾಣಿಸಲಿಲ್ಲ,” ಎಂದು ತೀವ್ರವಾಗಿ ಪ್ರಶ್ನಿಸಿದರು.

“ಇಂತಹ ಮನುವಾದಿ ಮನೋಭಾವದವರು ಕೇವಲ ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ನೂರು ವರ್ಷದ ಪಥ ಸಂಚಲನದಲ್ಲಿ ಮಹನೀಯರರಾದ ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿ ಇನ್ನಿತರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ನಿಜವಾದ ಮಾನವೀಯತೆ ಅಂದರೆ ದುರ್ಬಲರಿಗೆ ನ್ಯಾಯ ಒದಗಿಸುವುದು, ಧರ್ಮದ ಹೆಸರಿನಲ್ಲಿ ಮೌನವಾಗಿರುವುದು ಅಲ್ಲ” ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತರು ಆರೋಪಿಗಳಿಗೆ ತಕ್ಷಣ ಕಠಿಣ ಶಿಕ್ಷೆ ವಿಧಿಸಲು ಹಾಗೂ ಸರ್ಕಾರವು ದಲಿತ ಸಮುದಾಯದ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಗಂಭೀರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | RSS ಪಥಸಂಚಲನದಲ್ಲಿ ಭಾಗಿಯಾದ ಪಿಡಿಒ ಅಮಾನತು : ಶಾಸಕ ಮಾನಪ್ಪ ವಜ್ಜಲ್ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರತಿಭಟನೆಯಲ್ಲಿ ಮೋಹನ ಬಿಲ್ಲಿದೇವ್, ಬಾಬು ಕವಾಸ, ಮಹಾಂತೇಶ ಭವಾನಿ, ಮಲ್ಲಯ್ಯ ಕಟ್ಟಿಮನಿ, ಪರಶುರಾಮ, ಪ್ರಸಾದ್ ಕುಮಾರ, ಕ್ರಾಂತಿ ಕುಮಾರ, ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...