ರಾಯಚೂರು | ಉಸ್ತುವಾರಿ ಸಚಿವರಿಗೆ ಕಪ್ಪುಪಟ್ಟಿ ಪ್ರದರ್ಶನಕ್ಕೆ ಯತ್ನ; ಪ್ರತಿಭಟನಾಕಾರರ ಬಂಧನ

Date:

Advertisements
  • ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧ ಗೋಬ್ಯಾಕ್ ಚಳವಳಿ
  • ರಾಯಚೂರಿಗೆ ಸಿಗಬೇಕಾದ ಏಮ್ಸ್‌ಅನ್ನು ಕಲಬುರಗಿಗೆ ಕೊಂಡೊಯ್ಯುತ್ತಾರೆಂಬ ಆರೋಪ

ಕಾಂಗ್ರೆಸ್‌ ನೃತೃತ್ವದ ರಾಜ್ಯ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ರಾಯಚೂರು ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರ ವಿರುದ್ಧ ರಾಯಚೂರು ನಾಗರಿಕ ವೇದಿಕೆಯ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಗೋಬ್ಯಾಕ್ ಪ್ರತಿಭಟನೆ ನಡೆಸಿದ್ದಾರೆ.

ನಗರದ ಡಾ. ಬಿ.ಆರ್ ಅಂಬೇಡ್ಕ‌ರ್‌ ವೃತ್ತದಲ್ಲಿ ಸಚಿವರಿಗೆ ಪ್ರತಿಭಟನಾಕಾರರು ಫೇರಾವ್‌ ಹಾಕಲು ಯತ್ನಿಸಿದ್ದು, ಅವರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ.

ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಲು ಶರಣಪ್ರಕಾಶ ಪಾಟೀಲ ಕೇಂದ್ರ ಬಸ್ ನಿಲ್ದಾಣಕ್ಕೆ ಬರುವ ಮುಂಚೆ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.

Advertisements
ರಾಯಚೂರು

“ರಾಜ್ಯ ಸರ್ಕಾರವು ಜಿಲ್ಲೆಯ ಎನ್.ಎಸ್ ಬೋಸರಾಜು ಅವರಿಗೆ ಕೊಡಗು ಜಿಲ್ಲಾ ಉಸ್ತುವಾರಿ ನೀಡಿ ಕಲಬುರಗಿಯ ಶರಣಪ್ರಕಾಶ ಪಾಟೀಲ ಅವರಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ನೀಡಿದೆ. ಇದು ಸರಿಯಾದ ನಡೆಯಲ್ಲ. ಜಿಲ್ಲೆಗೆ ಸಿಗಬೇಕಾದ ಏಮ್ಸ್ಅನ್ನು ಕಲಬುರಗಿಗೆ ಮಂಜೂರು ಮಾಡಲಾಗುವುದು ಎಂದು ಶರಣಪ್ರಕಾಶ ಪಾಟೀಲ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಅವರಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ನೀಡುವುದರಿಂದ ಜಿಲ್ಲೆಗೆ ಏಮ್ಸ್ ಕೈತಪ್ಪಲಿದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಸರ್ಕಾರದ ಶಿಫಾರಸ್ಸಿನಂತೆ ವಿದ್ಯುತ್ ದರ ಹೆಚ್ಚಳವಾಗಿದೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸಚಿವ ಶರಣಪ್ರಕಾಶ ಪಾಟೀಲ ನಗರದ ಕ್ರೀಡಾಂಗಣ ಬಳಿ ರಾಯಚೂರು ಏಮ್ಸ್ ಹೋರಾಟ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತನಾಡಿದರು. “ರಾಯಚೂರಿಗೆ ಏಮ್ಸ್ ಮಂಜೂರು ಮಾಡಲಾಗುವುದು, ಗೊಂದಲ ಬೇಡ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಮುಖ್ಯಮಂತ್ರಿ ಜೊತೆ ಮಾತನಾಡಿ ಏಮ್ಸ್ ಮಂಜೂರಾತಿಗೆ ಪ್ರಯತ್ನಿಸುತ್ತೇನೆ” ಎಂದು ಭರವಸೆ ನೀಡಿದರು.

ಈ ವೇಳೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌, ಕೆಪಿಸಿಸಿ ಕಾರ್ಯದರ್ಶಿ ಎ. ವಸಂತಕುಮಾರ್, ಮುಖಂಡರಾದ ರಾಜಶೇಖರ ರಾಮಸ್ವಾಮಿ, ಹೋರಾಟಗಾರ ಅಶೋಕ ಕುಮಾರ್‌ ಜೈನ್‌, ಜಾನ್‌ ವೆಸ್ಲಿ, ನರಸಪ್ಪ ಬಾಡಿಯಾಲ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X