ರಾಯಚೂರು | ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ

Date:

ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ, ಕಾರ್ಮಿಕ ಸಂಘಟನೆಗಳೊಂದಿಗೆ ದೇಶಾದ್ಯಂತ ಗ್ರಾಮೀಣ ಬಂದ್ ಮತ್ತು ಕೈಗಾರಿಕಾ ಮುಷ್ಕರಕ್ಕೆ ಎಸ್‌ಕೆಎಂ ಕರೆ ಕೊಟ್ಟಿದೆ. ಮುಷ್ಕರದ ಭಾಗವಾಗಿ, ರೈತ ಹೋರಾಟವನ್ನು ಬೆಂಬಲಿಸಿ ಟಿಯುಸಿಐ ನೇತೃತ್ವದಲ್ಲಿ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದೆ.

- Advertisement -

ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾವಣೆಗೊಂಡ ಸಂಘಟನೆ ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ, ಬಡವರ ಬ್ಯಾಂಕ್ ಖಾತೆಗಳಿಗೆ ₹15 ಲಕ್ಷ ಜಮಾ ಮಾಡುವುದಾಗಿ ಜೋರಾಗಿ ಘೋಷಣೆ ಮಾಡಿದ ಬಿಜೆಪಿ ನೇತೃತ್ವದ ಸರ್ಕಾರದ ದಶಕದ ಆಡಳಿತದಲ್ಲಿ ಜನರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸಿಗದಿರುವುದು ವಾಸ್ತವದಲ್ಲಿ ಇಂತಹ ಭರವಸೆಗಳಿಗೆ ದ್ರೋಹ ಬಗೆದಂತಿದೆ” ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

“ರೈತರ ಆದಾಯವನ್ನು ಕಾನೂನು ಬದ್ಧ ಖಾತರಿಯೊಂದಿಗೆ ದ್ವಿಗುಣಗೊಳಿಸಬೇಕು. ಬೀಜದ ಮೇಲಿನ ಸಬ್ಸಿಡಿಯನ್ನು ಶೇ.50ರಷ್ಟು ಹೆಚ್ಚಳ ಮಾಡಬೇಕು. ಉತ್ಪಾದನಾ ವೆಚ್ಚ ಕಡಿಮೆ ಮಾಡಲು ರಸಗೊಬ್ಬರ, ವಿದ್ಯುತ್ ಸಬ್ಸಿಡಿ ಒದಗಿಸಬೇಕು. ರಾಷ್ಟ್ರೀಯ ಕನಿಷ್ಠ ವೇತನ ತಿಂಗಳಿಗೆ ₹31,000  ನಿಗದಿಪಡಿಸಬೇಕು. ಕಾರ್ಮಿಕ ದ್ರೋಹಿ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಉದ್ಯೋಗ ಖಾತರಿ ಕಾರ್ಮಿಕರ ದಿನಗೂಲಿ ₹500 ಹಾಗೂ ವರ್ಷಪೂರ್ತಿ ಕೆಲಸ ಒದಗಿಸಬೇಕು” ಎಂದು ಒತ್ತಾಯಿಸಿದರು.

“ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಗೊಳಿಸಿ, ಖಾಯಂ ಕೆಲಸ ಒದಗಿಸಬೇಕು. ತೋಟದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕೆಲಸದ ಸುರಕ್ಷತೆ ಒದಸಬೇಕು. ಚಳವಳಿ ನಡೆಸುತ್ತಿರುವ ರೈತ ಕಾರ್ಮಿಕರನ್ನು ದೆಹಲಿ ಒಳಗಡೆ ಬಿಡಬೇಕು. ರೈತ ಕಾರ್ಮಿಕರು ಬರುವ ಹೆದ್ದಾರಿಗಳಿಗೆ ಮೊಳೆ ಹೊಡೆದು, ಹೊಗೆ ಬಾಂಬ್ ಸಿಡಿಸಿ, ರಬ್ಬರ್ ಗುಂಡುಗಳನ್ನು ಹೊಡೆದು, ದೌರ್ಜನ್ಯವೆಸುತ್ತಿರುವ ಕೇಂದ್ರ ಸರ್ಕಾರದ ಫ್ಯಾಸಿಸ್ಟ್ ಸರ್ಕಾರಿ ಭಯೋತ್ಪಾದನೆಯನ್ನು ನಿಯಂತ್ರಿಸಬೇಕು”‌ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕ್ರಮ: ಸಚಿವ ಶಿವಾನಂದ ಪಾಟಿಲ್‌ ಭರವಸೆ

“2020ರ ರೈತ ಚಳುವಳಿಯಲ್ಲಿ ಮೃತರಾಗಿರುವ 780 ಮಂದಿ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕು. ಪೊಲೀಸ್ ಮಿಲಿಟರಿ ಪಡೆಗಳಿಂದ ಗಾಯಗೊಂಡ ರೈತ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಟಿಯುಸಿಐ ಜಿಲ್ಲಾಧ್ಯಕ್ಷ ಜಿ ಅಮರೇಶ, ಮುಖಂಡರುಗಳಾದ ಅಜೀಜ್ ಜಾಗೀರದಾರ, ಮಲ್ಲಯ್ಯ ಕಟ್ಟಿಮನಿ, ಅಡವಿರಾವ್, ಸೈಯದ್ ಅಬ್ಬಾಸಲಿ, ಭಾಷಾ ಖಾನ್, ಲಕ್ಷ್ಮಣ್, ನಬಿಸಾಬ್, ಆಂಜನೇಯ ರಾಂಪುರ್, ಮಲ್ಲಿಕಾರ್ಜುನ್ ಗಣೆಕಲ್, ಬಸವರಾಜ್ ಗುಡಿಹಾಳ ಸೇರಿದಂತೆ ಕಾರ್ಮಿಕರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...