ರಾಯಚೂರು | ಗ್ರಾಮಗಳ ಸಮಗ್ರ ಅಭಿವೃದ್ಧಿ ಒತ್ತಾಯಿಸಿ ಪ್ರತಿಭಟನೆ

Date:

ಲಿಂಗಸೂಗೂರು ತಾಲೂಕಿನ ರೊಡಲಬಂಡಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಡ್ಡೋಣ ತವಗ ಸೇರಿದಂತೆ ಎಲ್ಲ ಗ್ರಾಮಗಳ ಸಮಗ್ರ ಅಭವೃದ್ಧಿಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ), ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ), ಕರ್ನಾಟಕ ಪ್ರಾಂತ ರೈತ ಸಂಘಟನೆ (ಕೆಪಿಆರ್‌ಎಸ್), ಕರ್ನಾಟಕ ಪ್ರಾಂತ ಕೂಲಿಕಾರ ಸಂಘಟನೆ ಸಂಘಟನೆಗಳ ಕಾರ್ಯಕರ್ತರು ಲಿಂಗಸೂಗೂರು ಎಸಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದ್ದಾರೆ.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, “ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಪ್ರತಿಭಟನೆ ಬಗ್ಗೆ ಅಧಿಕಾರಿಗಳಿಗೆ, ಶಾಸಕರಿಗೆ ಮಾಹಿತಿ ನೀಡಿದ್ದರೂ, ಸ್ಥಳಕ್ಕೆ ಬಂದಿಲ್ಲ. ಶಾಸಕರು ವೋಟು ಖರೀದಿ ಮಾಡಿ ಚುನಾವಣೆಯಲ್ಲಿ ಗೆದ್ದಿರಬಹುದು. ಆದರೆ, ಮತದಾರರ ಕುಂದು ಕೊರತೆ ಆಲಿಸದ ಈ ಭ್ರಷ್ಟ ಶಾಸಕ ನಮಗೆ ಬೇಕೆ?” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರತಿಭಟನಾ ಸ್ಥಳಕ್ಕೆ ಸಹಾಯಕ ಆಯುಕ್ತರು ಶಿಂಧೆ ಅವಿನಾಶ್, ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಅಮರೇಶ, ಜೆಸ್ಕಾಂನ ಎಇಇ ಕೆಂಚಪ್ಪ ಬಾವಿಮನಿ, ಕೆಕೆ ಎಸ್ಆರ್ ಟಿಸಿ ಡಿಪೋ ವ್ಯವಸ್ಥಾಪಕ ಆರ್. ವಾಯ್ ವನಸೋರೆ, ಪ್ರಧಾಮಂತ್ರಿ ಗ್ರಾಮ ಸಡಕ್, ಯೋಜನೆಯ ಉಪ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಮನವಿ ಸ್ವೀಕರಿಸಿದರು. ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು, ಸಿಐಟಿಯು ಮುಖಂಡ ಮಹಮ್ಮದ್ ಹನೀಫ್, ಕೆ ಪಿ ಆರ್ ಎಸ್ ನ ಮುಖಂಡ ಶಿವಣ್ಣ ಆಂಜನೇಯ, ಶಿವಕುಮಾರ್ ಪಲ್ಲೇ ದ್, ಬಸವರಾಜ ಯಡ್ಡಳ್ಳಿ, ಮುತ್ತಣ್ಣ ಕಂಬಳಿ, ಬಾಬಾ ಜಾನಿ, ಅಲ್ಲಾಭಕ್ಷ, ರಂಗಪ್ಪ ದೊರೆ ದುರ್ಗಪ್ಪ ಪಾಟೀಲ್, ದಾವಲ್ ಸಾಬ್, ಶಂಕರ್, ಸಿದ್ದಣ್ಣ, ರುದ್ರಗೌಡ, ಶಂಭುನಾಥ್, ಡಿವೈಎಫ್ಐ ಮುಖಂಡ ಕಾಶಿಪತಿ, ತೋಟೆಂದ್ರ ಅಂಗಡಿ, ಕೂಲಿಕಾರ ಸಂಘಟನೆಯ ನಾಗರತ್ನಾ ನೀರಲಕೇರಿ, ಮಹಿಬೂಬ್ ನಿಂಗಪ್ಪ ಎಂ., ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...