ರಾಯಚೂರು | ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ: ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Date:

  • ‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ’ ವತಿಯಿಂದ ಹೋರಾಟ
  • ‘ಏಮ್ಸ್ ನೀಡಿರಿ ಇಲ್ಲವೇ ಮರಣವನ್ನಾದರೂ ನೀಡಿ’ ಎಂದು ಘೋಷಣೆ

ರಾಯಚೂರಿನಲ್ಲಿ ಏಮ್ಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸಬೇಕೆಂದು ಒತ್ತಾಯಿಸಿ, ‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ’ ಯಿಂದ ಶುಕ್ರಮಾರ ಕರೆಕೊಟ್ಟಿದ್ದ ರಾಯಚೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಯಚೂರು ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ಸಾಗಿ ‘ಏಮ್ಸ್ ನೀಡಿರಿ ಇಲ್ಲವೇ ಮರಣವನ್ನಾದರೂ ನೀಡಿರಿ’ ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚುವುದರ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದ್ದರು. ನಗರದ ಸರಾಫ್ ಬಜಾರ್, ಬಟ್ಟೆ ಬಜಾರ್, ತರಕಾರಿ ಮಾರುಕಟ್ಟೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು.

ಅಲ್ಲಲ್ಲಿ ಕೆಲ ಕಿರಾಣಿ ಅಂಗಡಿಗಳು ಸೇರಿದಂತೆ ಇತರೆ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿತ್ತು. ಆದರೆ, ಬಸ್ ಹಾಗೂ ಆಟೋ ಸಂಚಾರಕ್ಕೆ ಯಾವುದೇ ಅಡಚಣೆ ಇರಲಿಲ್ಲ.

ರಾಯಚೂರಿನಲ್ಲಿಯೇ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸ್ಥಾಪಿಸುವಂತೆ ಒತ್ತಾಯಿಸಿ ಕಳೆದ 316 ದಿನಗಳಿಂದ ಹೋರಾಟ ನಡೆಯುತ್ತಿದೆ. ಜೊತೆಗೆ ಸರದಿ ಉಪವಾಸ ಸತ್ಯಾಗ್ರಹ ಕೂಡ ನಡೆಯುತ್ತಿದ್ದು, 66ನೇ ದಿನಕ್ಕೆ ಕಾಲಿಟ್ಟಿದೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, “ಸರ್ಕಾರವು ರಾಯಚೂರಿಗೆ ನ್ಯಾಯಯುತವಾಗಿ ಏಮ್ಸ್ ನೀಡಬೇಕು. ಜಿಲ್ಲೆಯ ಶಾಸಕರು, ಸಂಸದರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು” ಎಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ರವಿ ಬೋಸರಾಜ್ ಮಾತನಾಡಿ, “ಸರ್ಕಾರವು ಏಮ್ಸ್ ನೀಡುವುದಾಗಿ ನಂಬಿಸಿ ದ್ರೋಹ ಮಾಡಿದೆ. ಏಮ್ಸ್ ಮಂಜೂರು ಮಾಡದಿದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಗೆ ಪಕ್ಷಾತೀತವಾಗಿ ಎಲ್ಲ ಪಕ್ಷದ ಮುಖಂಡರು, ವ್ಯಾಪಾರಸ್ಥರು, ವಿವಿಧ ಸಂಘಟನೆಗಳು, ಅಂಗನವಾಡಿ ಶಿಕ್ಷಕರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ವಿವಿಧ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹೋರಾಟ ಸಮಿತಿಯ ಮುಖಂಡ ಡಾ.ಬಸವರಾಜ್ ಕಳಸ, ಅಶೋಕ್ ಕುಮಾರ್, ಎನ್.ಮಹಾವೀರ್, ಎಂ.ಆರ್.ಬೇರಿ, ಸುಲೋಚನಾ ಸಂಘ, ವಿನಯ್ ಕುಮಾರ್, ಗುರುರಾಜ್, ಕಾಮರಾಜ ಪಾಟೀಲ್, ಬಸವರಾಜ್ ಮಿಮಿಕ್ರಿ, ಜಾನ್ ವೆಸ್ಲಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಈಗಲಾದರೂ ಚರ್ಚೆಗೆ ಬರುತ್ತದೆಯೇ ಪ್ರಾದೇಶಿಕ ಅಸಮಾನತೆ ಕೂಗು

ಕರ್ನಾಟಕ ಏಕೀಕರಣವಾಗಿ ಅರ್ಧ ಶತಮಾನ ಕಳೆದರೂ ಇಡೀ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಯ...

ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ....

ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30...