ರಾಯಚೂರು | ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ಆಗ್ರಹಿಸಿ ಪ್ರತಿಭಟನೆ

Date:

Advertisements

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ವಿಚಾರಣೆ ನಡೆಸುವಂತೆ ಆಗ್ರಹಿಸಿ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದುಡಿಯುವ ಮಹಿಳೆಯರ ಹೋರಾಟ ಸಮನ್ವಯ ಸಮಿತಿ(ಸಿಐಟಿಯು ಸಂಯೋಜಿತ)ಯಿಂದ ಪ್ರತಿಭಟನೆ ನಡೆಸಲಾಯಿತು.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನ್ಯಾಯಾಲಯಗಳಲ್ಲಿ ತ್ವರಿತ ವಿಚಾರಣೆ ನಡೆಸಬೇಕು. ಹೆಚ್ಚಿನ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಹಾಗೂ ಅಗತ್ಯ ಹಣಕಾಸಿನ ನೆರವು ನೀಡಬೇಕು ಎಂದು ಒತ್ತಾಯಿಸಲಾಯಿತು.

ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

Advertisements

ದೇಶದ ಹಲವೆಡೆ ಮಹಿಳೆಯರ, ಮಕ್ಕಳ, ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ನೀತಿಯಿಂದ ಭಯಭೀತರಾಗಿದ್ದಾರೆ. ಮಹಿಳೆಯರಿಗೆ ಸುರಕ್ಷತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಕೊಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ, ಹತ್ಯೆ, ಮಹಾರಾಷ್ಟ್ರದ ಬದ್ಲಾಪುರ ಠಾಣೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ, ಉತ್ತರಪ್ರದೇಶ ನರ್ಸ್ ಮೇಲೆ ಅತ್ಯಾಚಾರ, ಕೊಲೆ, ಉತ್ತರಾಖಂಡ್ ನ ಡೆಹ್ರಾಡೂನ್ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಘಟನೆ ಹೀಗೆ ದೇಶದ ನಾನಾ ಭಾಗಗಳಲ್ಲಿ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ದೂರಿದರು.

ಆರ್ ಜಿ ಕರ್ ಪ್ರಕರಣದಲ್ಲಿ ಕೊಲ್ಕತ್ತಾದ ವೈದ್ಯೆಗೆ ನ್ಯಾಯ ದೊರೆಯಲು ನಿಷ್ಪಕ್ಷಪಾತ, ತ್ವರಿತ ವಿಚಾರಣೆ ನಡೆಸಬೇಕು. ಪ್ರಕರಣದ ಭಾಗಿಯಾದ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಿಬೇಕು. ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರ ಮಾನಸಿಕ ಆರೋಗ್ಯಕ್ಕೆ ಕಾಳಜಿ ವಹಿಸಬೇಕು. ಪುನರ್ವಸತಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಬೇಕು. ನ್ಯಾಯಮೂರ್ತಿ ವರ್ಮಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯ ಜತೆಗೆ ಕುಡಿಯುವ ನೀರು, ಕಾವಲು ವ್ಯವಸ್ಥೆ, ರಾತ್ರಿ ಸುರಕ್ಷತೆಗೆ ಸಾರಿಗೆ ವ್ಯವಸ್ಥೆ ಒದಗಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ರಾಮನಗರ | ನಿಯಮ ಉಲ್ಲಂಘಿಸಿ ರಾಯಸಂದ್ರದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಕ್ರಮಕ್ಕೆ ಆಗ್ರಹ

ವೈದ್ಯರ, ನರ್ಸ್, ಅರೆ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯ ಸುರಕ್ಷತೆ ಖಾತರಿಪಡಿಸಬೇಕು. ಮಹಿಳಾ ಸಬಲೀಕರಣಕ್ಕೆ ರೂಪಿಸಲಾದ ಕಾರ್ಯಕ್ರಮ, ಕಾನೂನುಗಳನ್ನು ಪರಿಣಾಮಕಾರಿ ಜಾರಿಗೊಳಿಸಬೇಕು ಹಾಗೂ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷೆ ಎಚ್ ಪದ್ಮಾ, ಪ್ರಧಾನ ಕಾರ್ಯದರ್ಶಿ ಡಿ.ಎಸ್ ಶರಣಬಸವ, ಕೆ.ಜಿ ವೀರೇಶ, ಸರೋಜಾ, ವಿರುಪಮ್ಮ ಪಾಲ್ಗೊಂಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X