ರಾಯಚೂರು | ರಿಮ್ಸ್‌ ನಿರ್ದೇಶಕರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

Date:

ರಿಮ್ಸ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಅಗತ್ಯ ಸೌಲಭ್ಯಗಳು ಇಲ್ಲ. ವೈದ್ಯರು ಆಸ್ಪತ್ರೆ ಯಲ್ಲಿ ಇರುವುದಿಲ್ಲ. ಆಸ್ಪತ್ರೆಯನ್ನು ಅವ್ಯವಸ್ಥೆಯ ತಾಣವಾಗಿಸಿರುವ ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ ಅವರನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿ ರಾಯಚೂರಿನಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ-ಭೀಮವಾದ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ರಿಮ್ಸ್‌ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿರುವ ಕಾರ್ಯಕರ್ತರು, “ಆಸ್ಪತ್ರೆ ಅವ್ಯವಸ್ಥೆಗಳ ಬಗ್ಗೆ ಈ ಹಿಂದೆಯೇ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಧಿಕಾರಿಗಳು ಮತ್ತು ಸಚಿವರ ಗಮನಕ್ಕೆ ತಂದಿದ್ದೆವು. ಆದರೂ, ಈವರೆಗೆ ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ನರಸಿಂಹಲು, “ಆಸ್ಪತ್ರೆ ಸಮಸ್ಯೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರಿಮ್ಸ್‌ನ ವ್ಯವಸ್ಥೆ ಸುಧಾರಣೆಯಾಗದ ಕಾರಣ ಹಾಗೂ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸೌಲಭ್ಯ ದೊರೆಯದ ಕಾರಣ ಧರಣಿ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಹೊರ ರೋಗಿ ಹಾಗೂ ಒಳ ರೋಗಿಗಳಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡುವುದಿಲ್ಲ. ತರಬೇತಿ ಪಡೆಯುತ್ತಿರುವ ವೈದ್ಯರೇ ಚಿಕಿತ್ಸೆ ನೀಡುತ್ತಿದ್ದಾರೆ. ತಜ್ಞ ವೈದ್ಯರು ಬಯೋಮೆಟ್ರಿಕ್ ಹಾಜರಾತಿ ಹಾಕಿ, ತಮ್ಮ ಖಾಸಗಿ ಕ್ಲಿನಿಕ್‌ಗೆ ಹೋಗುತ್ತಾರೆ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಎಲ್ ವಿ ಸುರೇಶ್, ನರಸಪ್ಪ, ಆಂಜನೇಯ, ತಿಮ್ಮಪ್ಪ, ಸೈಯದ್, ಅನಿಲ್ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ...

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...