ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ರದ್ದುಗೊಳಿಸದೇ ಇರುವ ಕಾಂಗ್ರೆಸ್ ಸರ್ಕಾರ ನಡೆಯನ್ನು ಖಂಡಿಸಿ, ಕೃಷಿ ಪಂಪಸೆಟ್‌ಗಳಿಗೆ ಆಧಾರ ಜೋಡಣೆ ವಿರೋಧಿಸಿ ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ರೈತ ಸಂಘದ (ಕೋಡಿಹಳ್ಳಿ ಬಣ) ರಾಯಚೂರು ಜಿಲ್ಲಾಧ್ಯಕ್ಷ ಶಿವುಪುತ್ರಗೌಡ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತರ ಸಂಘಟನೆಗಳ ತೀವ್ರ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಮೂರು ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ. ಆದರೆ ರಾಜ್ಯ ಸರ್ಕಾರ ಇಂದಿಗೂ ಯಾವುದೇ ಕಾಯ್ದೆ ರದ್ದುಗೊಳಿಸಿಲ್ಲ. ಕಾಂಗ್ರೆಸ್ ಸರ್ಕಾರ ಕಾಯ್ದೆಗಳಿಗೆ ವಿರೋಧಿಸಿದ್ದರೂ ಜಾರಿಯನ್ನು ಮುಂದುವರೆಸಿದೆ ಎಂದು ಆರೋಪಿಸಿದರು.

ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಮಾಡುವುದಾಗಿ ಹೇಳುತ್ತಿದೆ. ರೈತರು ವಿದ್ಯುತ್ ಸಂಪರ್ಕ ಪಡೆಯುವಾಗಲೇ ಆಧಾರ ಕಾರ್ಡ್ ನೀಡಿರುತ್ತಾರೆ. ಉದ್ದೇಶ ಪೂರ್ವಕವಾಗಿ ರೈತರಲ್ಲಿ ಭಯ ಹುಟ್ಟಿಸಿ, ಬ್ಯಾಂಕ್ ಖಾತೆ ಮೂಲಕವೇ ವಿದ್ಯುತ್ ಬಿಲ್ ಪಡೆಯುವ ಹುನ್ನಾರ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ಕೃಷಿ ಇಲಾಖೆ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು!
ಈಗಾಗಲೇ ಐದು ಕಂಪನಿಗಳಾಗಿ ಕೆಇಬಿ ವಿಗಂಡಿಸಲಾಗಿದೆ. ರೈತರು ವಿದ್ಯುತ್ ಕಂಬ್, ಮೀಟರ್, ಸಂಪರ್ಕ, ಟಿಸಿ ಪಡೆಯಲು ಹಣ ನೀಡಬೇಕಿದೆ. ಕಾರ್ಪೋರೇಟ್ ಕಂಪನಿಗಳಿಗೆ ವಿದ್ಯುತ್ ಕಂಪನಿಗಳನ್ನು ನೀಡಲು ಸರ್ಕಾರ ಪ್ರಯತ್ನ ನಡೆಸಿದೆ. ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀಡಿ ಖಂಡಿಸಿ ನಡೆಯಲಿರುವ ಹೋರಾಟದಲ್ಲಿ ರೈತರು ಭಾಗವಹಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಹನುಮಂತಪ್ಪ, ಬಸವರಾಜ, ಲಕ್ಷ್ಮಣ, ಅಮರೇಶ ಮೇಟಿ ಇನ್ನಿತರರು ಉಪಸ್ಥಿತರಿದ್ದರು.
ವರದಿ : ಹಫೀಜುಲ್ಲ
