ರಾಯಚೂರು | ಸಾರ್ವಜನಿಕರಿಂದ ಕವಿತಾಳ ಪಟ್ಟಣಕ್ಕೆ ಅಗ್ನಿ ಶಾಮಕ ಠಾಣೆಯ ಬೇಡಿಕೆ

Date:

Advertisements

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಬೆಂಕಿ ಅವಘಡದ ಪ್ರಕರಣಗಳು ಹೆಚ್ಚುತ್ತಿದು, ಸಕಾಲಕ್ಕೆ ಅಗ್ನಿ ಶಾಮಕ ವಾಹನದ ಸಹಾಯ ಸಿಗದೇ ಬಹುತೇಕ ಬೆಂಕಿ ಪ್ರರಕಣಗಳಲ್ಲಿ ಭಾರಿ ನಷ್ಟವಾಗುತ್ತಿದ್ದು ಅಗ್ನಿಶಾಮಕ ಠಾಣೆಗೆ ಸಾರ್ವಜನಿಕರು ಬೇಡಿಕೆ ಇಟ್ಟಿದ್ದಾರೆ.

ಸದ್ಯದ ಪೊಲೀಸ್ ಠಾಣಾ ವ್ಯಾಪ್ತಿಗೆ ಮಾನ್ವಿ, ಸಿರವಾರ ಮತ್ತು ಮಸ್ಕಿ ತಾಲೂಕಿನ ಸುಮಾರು 52 ಹಳ್ಳಿಗಳು ಮತ್ತು 19 ಕ್ಯಾಂಪ್‌ಗಳು ಬರುತ್ತವೆ. ನೂತನ ತಾಲೂಕು ರಚನೆಯಾಗಿ 7 ವರ್ಷಗಳು ಕಳೆದರೂ ಮಸ್ಕಿ ಮತ್ತು ಸಿರವಾರ ಪಟ್ಟಣಗಳಲ್ಲಿ ಅಗ್ನಿ ಶಾಮಕ ಠಾಣೆ ತೆರೆಯಲಾಗಿಲ್ಲ.

ಆದ್ದರಿಂದ, ಈ ಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದರೆ, ಲಿಂಗಸುಗೂರು ಪಟ್ಟಣದಿಂದಲೇ ವಾಹನ ಬರಬೇಕು. ಲಿಂಗಸುಗೂರುನಿಂದ ಕವಿತಾಳ 30 ಕಿ.ಮೀ. ದೂರದಲ್ಲಿದ್ದು, ಇಲ್ಲಿಂದ ಸುತ್ತಮುತ್ತಲಿನ ಹಳ್ಳಿಗಳಿಗೆ ತೆರಳಬೇಕಾದರೆ ಮತ್ತೆ 30 ಕಿ.ಮೀ. ಕ್ರಮಿಸಬೇಕು. ಹದಗೆಟ್ಟ ರಸ್ತೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಅಗ್ನಿ ಶಾಮಕ ವಾಹನ ಘಟನಾ ಸ್ಥಳಕ್ಕೆ ತಲುಪಲು ಸಮಯವಾಗುತ್ತದೆ.

Advertisements

ಕವಿತಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2023-24ಈ ಒಂದು ವರ್ಷದಲ್ಲಿ 24 ಬೆಂಕಿ ಅವಘಡಗಳು ಸಂಭವಿಸಿರುವ ಬಗ್ಗೆ ಅಗ್ನಿ ಶಾಮಕ ಠಾಣೆಯಲ್ಲಿ ಮಾಹಿತಿ ಇದೆ.

ಕವಿತಾಳದಲ್ಲಿ ಈಚೆಗೆ ಅಂದಾಜು 16 ಟ್ರ್ಯಾಕ್ಟರ್ನಷ್ಟು ಭತ್ತದ ಹುಲ್ಲಿನ ಬಣವಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋಗಿದೆ. ಬಹುತೇಕ ಪ್ರಕರಣಗಳಲ್ಲಿ ಬೆಂಕಿ ಸಂಪೂರ್ಣ ಆವರಿಸಿದ ನಂತರವೇ ವಾಹನಗಳು ಸ್ಥಳಕ್ಕೆ ಆಗಮಿಸಿವೆ.

ತುಂಗಭದ್ರ ಎಡದಂಡೆ ಕಾಲುವೆಯ ನೀರನ್ನು ಬಳಕೆ ಮಾಡಲು ಅವಕಾಶವಿದ್ದು ಪಟ್ಟಣದಲ್ಲಿಯೇ ಅಗ್ನಿ ಶಾಮಕ ಠಾಣೆಯಾದರೆ, ಸುತ್ತಮುತ್ತಲಿನ 30 ಕಿ.ಮೀ. ವ್ಯಾಪ್ತಿಯಲ್ಲಿ ಸಂಭವಿಸುವ ಅವಘಡಗಳನ್ನು ನಿಯಂತ್ರಿಸಬಹುದು. ಆದ್ದರಿಂದ ಕವಿತಾಳದಲ್ಲಿ ಅಗ್ನಿ ಶಾಮಕ ಠಾಣೆ ತೆರೆಯಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X