ರಾಯಚೂರು | ಮೊಲ ಬೇಟೆ ಪ್ರಕರಣ; ಶಾಸಕನ ಪುತ್ರ, ಸಹೋದರನ ವಿರುದ್ಧ ದೂರು ದಾಖಲು

Date:

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ತುರ್ವಿಹಾಳ ಪಟ್ಟಣದಲ್ಲಿ ನಡೆದ ಮೊಲದ ಬೇಟೆ ಪ್ರಕರಣ ಸಂಬಂಧ ಮಸ್ಕಿ ಶಾಸಕ ಆರ್‌ ಬಸನಗೌಡ ತುರ್ವಿಹಾಳ ಅವರ ಸಹೋದರ ಹಾಗೂ ಪುತ್ರನ ವಿರುದ್ಧ ದೂರು ದಾಖಲಾಗಿದೆ.

- Advertisement -

ಶಾಸಕರ ಪುತ್ರ ಸತೀಶಗೌಡ ತುರ್ವಿಹಾಳ ಹಾಗೂ ಸಹೋದರ ಸಿದ್ದನಗೌಡ ತುರ್ವಿಹಾಳ ಸೇರಿದಂತೆ ಘಟನೆಯಲ್ಲಿ ಪಾಲ್ಗೊಂಡಿದ್ದ ಇತರರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ರಾಯಚೂರು ಡಿಸಿಎಫ್‌ ಪ್ರವೀಣ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಾಸಕರ ಪುತ್ರ ಹಾಗೂ ಸಹೋದರ ಸೇರಿ ಯುಗಾದಿ ಹಬ್ಬದ ದಿನ ಬೇಟೆಯಾಡಿದ್ದ ಮೊಲಗಳನ್ನು ಕೆಲವರು ಕೊಡಲಿ ಹಾಗೂ ಭರ್ಜಿಗೆ ಸಿಕ್ಕಿಸಿಕೊಂಡು ಸಾವಿರಾರು ಜನರ ಎದುರು ಮೆರವಣಿಗೆ ಮಾಡಿ ವಿಜೃಂಭಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇನ್ನು ಘಟನೆ ಕುರಿತು “ಯುಗಾದಿ ಹಬ್ಬದಂದು ಕೆಲ ಸಂಪ್ರದಾಯಗಳನ್ನು ಪಾಲಿಸಿಕೊಂಡು ಬರಲಾಗುತ್ತಿದೆ. ನಮ್ಮ ಕುಟುಂಬದ ಸದಸ್ಯರು ಮೊಲಗಳನ್ನು ಬೇಟೆಯಾಡಿಲ್ಲ. ಆದರೆ, ಮೆರವಣಿಗೆಯಲ್ಲಿ ಬಂದ ಕೆಲವರು ನಮ್ಮವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡಿದ್ದಾರಷ್ಟೇ. ಇನ್ನು ಮುಂದೆ ಸಾರ್ವಜನಿಕರಿಗೆ ಮೊಲಗಳನ್ನು ಬೇಟೆಯಾಡುವುದು ತಪ್ಪು, ಇಂಥ ಕೃತ್ಯಗಳನ್ನು ಮರುಕಳಿಸದಂತೆ ತಿಳಿಸಲಾಗುವುದು” ಎಂದು ಶಾಸಕ ಬಸನಗೌಡ ತುರ್ವಿಹಾಳ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ರಾಯಚೂರು | ಮೊಲಗಳ ಬೇಟೆಯಾಡಿ, ಬೀದಿಯಲ್ಲಿ ಮಾರಕಾಸ್ತ್ರ ಹಿಡಿದು ಕ್ರೌರ್ಯ

ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸುವವರು ಯಾರೇ ಆಗಿದ್ದರೂ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...