ರಾಯಚೂರು | ರಂಜಾನ್ ಹಾಗೂ ಯುಗಾದಿ ಶಾಂತಿಯುತವಾಗಿ ಆಚರಿಸಿ; ಜಿ.ಹರೀಶ

Date:

ಯುಗಾದಿ ಮತ್ತು ರಂಜಾನ ಹಬ್ಬಗಳನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು, ಯಾವುದೇ ಅಹಿತಕರ ಘಟನೆ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ಪೋಲಿಸ್ ಅಧೀಕ್ಷಕ ಜಿ.ಹರೀಶ ಹೇಳಿದರು.

ನಗರದ ಸದರ ಬಜಾರ ಪೋಲೀಸ್ ಠಾಣೆಯಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬ ನಿಮಿತ್ತ ಹಮ್ಮಿಕೊಂಡಿದ್ದ ಸರ್ವಧರ್ಮೀಯರ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುಗಾದಿ ಮತ್ತು ರಂಜಾನ ಹಬ್ಬಗಳು ದೇಶದ ದೊಡ್ಡ ಹಾಗೂ ಮಹತ್ವದ ಹಬ್ಬಗಳಾಗಿದ್ದು, ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಈ ಎರಡು ಹಬ್ಬಗಳು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡುತ್ತಾರೆ. ಸಮಾಜದಲ್ಲಿ ಸರ್ವರಿಗೂ ಸುಖ, ಶಾಂತಿ, ಆರೋಗ್ಯ, ನೆಮ್ಮದಿಯನ್ನು ಬಯಸುವ ಈ ಹಬ್ಬಗಳನ್ನು ಯಾವುದೇ ಅಹಿತಕರ ಗಟನೆಗಳು ಜರುಗದಂತೆ ಶಾಂತಿ ಸುವ್ಯವಸ್ಥೆಯಿಂದ ಆಚರಣೆ ಮಾಡಬೇಕು ಎಂದರು.

- Advertisement -

ಈ ಸುದ್ಡಿ ಓದಿದ್ದೀರಾ? ರಾಯಚೂರು |ಮಹಿಳೆಯರ ಮೇಲೆ ಕೊಲೆ,ಅತ್ಯಾಚಾರ ಕಡಿವಾಣಕ್ಕೆ ದೆಹಲಿಗೆ ಕಾಲ್ನಡಿಗೆ ಜಾಥಾ ; ಪ್ರಧಾನಿಗೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...



ಈ ಎರಡೂ ಹಬ್ಬಗಳಿಗೆ ಪೋಲೀಸ್ ಇಲಾಖೆ ಯಿಂದ ಸೂಕ್ತ ಬಂದೋಬಸ್ತು ಒದಗಿಸಿಕೊಡಲಾಗುವುದು, ಏನಾದರೂ ಸಣ್ಣಪುಟ್ಟ ಘಟನೆಗಳು ಸಂಭವಿಸಿದಲ್ಲಿ ಮಾಹಿತಿ ನೀಡಲು ತಿಳಿಸಿದರು.

ಡಿವೈಎಸ್‌ಪಿ ಶಾಂತವೀರ ಮಾತನಾಡಿ, ದೇಶವು ಸಂಸ್ಕೃತಿ ಸಂಪ್ರದಾಯಗಳನ್ನು ಆಚರಣೆ ಮಾಡಿಕೊಂಡು ಬರುತ್ತಿದ್ದು, ಪ್ರತಿಯೊಬ್ಬರೂ ಯಾವುದೇ ಹಬ್ಬಗಳನ್ನು ತಮ್ಮ ಸಂಪ್ರದಾಯದ ಪ್ರಕಾರ ಶಾಂತಿ ಸೌಹಾರ್ಧತೆ ಯೊಂದಿಗೆ ಆಚರಿಸಿ ಮತ್ತೊಬ್ಬರಿಗೆ ಮಾದರಿಯಾಗಬೇಕಾಗಿದೆ ಎಂದು ಹೇಳಿದರು.

ಈ ವೇಳೆ ಹಿರಿಯ ಮುಖಂಡರಾದ ಶ್ರೀನಿವಾಸ ಪತಂಗೆ, ಅಶೋಕ ಜೈನ್, ನಜೀರ ಪಂಜಾಬಿ, ರಸೂಲ ಸಾಬ್ ಮಾತನಾಡಿದರು. ಹಬ್ಬದ ದಿನಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ವೆಸ್ಟ್ ಸಿಪಿಐ ನಾಗರಾಜ ಮೇಕಾ, ಪಿಎಸ್‌ಐಗಳಾದ ಮಂಜುನಾಥ, ಚಂದ್ರಪ್ಪ, ಅಮಿತಾ, ನರಸಮ್ಮ, ಹಾಗೂ ವಕ್ಫ್ ಬೋರ್ಡ್ ಅಧಿಕಾರಿ ಫರೀದ್ ಖಾನ್, ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...