ಬಾಲಕಿಯ ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯವು ಆದೇಶಿಸಿದೆ.
2019 ರಲ್ಲಿ ನಗರದ ಮಹಿಳಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಲಾಗಿತ್ತು. ಈ ಮೇರೆಗೆ ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ ಸಂಬಂಧ, ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಇದನ್ನು ಓದಿದ್ದೀರಾ? ಬಸವಾನುಯಾಯಿಗಳ ಗೈರು-ವಿರೋಧದ ಮಧ್ಯೆಯೇ ವಿಜಯಪುರದಲ್ಲಿ ‘ವಚನ ದರ್ಶನ’ ಬಿಡುಗಡೆ
ಆರೋಪಿ ಮಲ್ಲಿಕಾರ್ಜುನ ಮುನಿನಾಯಕ ತಾಲೂಕಿನ ಆಶಾಪುರ ಗ್ರಾಮದ ನಿವಾಸಿ. ಬಾಲಕಿ ಮೇಲೆ ನಡೆದ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಪ್ರಭು ಹತ್ತಿಕಾಳ ಅವರು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದರು.
