ರಾಯಚೂರು | ಏಮ್ಸ್ ಮಂಜೂರಾತಿ ಕುರಿತು ಪ್ರಾಣ ತ್ಯಾಗಕ್ಕೂ ಸಿದ್ಧ: ಕಾಂಗ್ರೆಸ್ ಮುಖಂಡ

Date:

ಏಮ್ಸ್ ಮಂಜೂರಾತಿ ವಿಷಯದಲ್ಲಿ ಕಲಬುರಗಿ ಜಿಲ್ಲೆಯ ನಾಯಕರು ಕಾಂಗ್ರೆಸ್ ತೀರ್ಮಾನ ಉಲ್ಲಂಘಿಸಿ ಮಾತನಾಡುತ್ತಿದ್ದಾರೆ. ಏಮ್ಸ್ ಮಂಜೂರಾತಿಗೆ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಾರಸಮಲ್ ಸುಖಾಣಿ ಹೇಳಿದರು.

ರಾಯಚೂರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆಯವರು‌, ಏಮ್ಸ್ ಮಂಜೂರಾತಿಗೆ ಸಂಸದರು ಒತ್ತಡ ಹಾಕಬೇಕೆಂದು ಹೇಳಿ ಕಲಬುರಗಿಯಲ್ಲಿ ಏಮ್ಸ್ ಸ್ಥಾಪಿಸಲು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ರಾಯಚೂರಿನಲ್ಲಿ ಸ್ಥಾಪಿಸಲು ಘೋಷಣೆ ಮಾಡಿದೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರಕ್ಕೆ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸುವಂತೆ ಒತ್ತಾಯಿಸಿದ್ದಾರೆ” ಎಂದರು.

“ಪಕ್ಷ ಹಾಗೂ ಮುಖ್ಯಮಂತ್ರಿಯವರ ನಿರ್ಧಾರದ ವಿರುದ್ದ ಕಲಬುರಗಿಯಲ್ಲಿ ಏಮ್ಸ್ ಸ್ಥಾಪಿಸಬೇಕೆಂಬ ಒತ್ತಾಯ ಮಾಡಿರುವುದು ಖಂಡನೀಯ. ಸಚಿವರುಗಳು ಪಕ್ಷದ ತೀರ್ಮಾನದ ವಿರುದ್ಧ ಮಾತನಾಡುತ್ತಿರುವುದು ಮುಂದುವರೆದಿದೆ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯಲ್ಲಿ ಕಲಬುರಗಿಯಲ್ಲಿ ಏಮ್ಸ್ ಸ್ಥಾಪಿಸಬೇಕೆಂದು ಒತ್ತಾಯಿಸಿದ್ದರು. ಕಲಬುರಗಿಯವರಾದ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರೂ ಕಲಬುರಗಿಯಲ್ಲಿಯೇ ಏಮ್ಸ್ ಸ್ಥಾಪಿಸಬೇಕೆಂದಿದ್ದರು. ಈಗ ಪ್ರಿಯಾಂಕ ಖರ್ಗೆಯೂ ಹಾಗೆಯೇ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಕಾಂಗ್ರೆಸ್ ರಾಜಕಾರಣಗಳಿಂದ ರಾಯಚೂರು ಜಿಲ್ಲೆಗೆ ಅನ್ಯಾಯವಾಗುತ್ತಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಯಚೂರು | ತುಂಗಭದ್ರಾ ಎಡದಂಡೆ; ನೀರಿನ ಪ್ರಮಾಣ ಕಾಯ್ದಿರಿಸಲು ಸಚಿವ ಎನ್ ಎಸ್ ಬೋಸರಾಜು ಸೂಚನೆ

“ಜಿಲ್ಲೆಯ ಶಾಸಕರುಗಳು ಗುದ್ದಾಟದಲ್ಲಿ ನಿರತರಾಗಿದ್ದಾರೆಯೇ ಹೊರತು ಜಿಲ್ಲೆಗೆ ಆಗುತ್ತಿರುವ ಅನ್ಯಾಯದ ವಿರುದ್ದ ಧ್ವನಿ ಎತ್ತುವಲ್ಲಿ ವಿಫಲರಾಗಿದ್ದಾರೆ. ಕಲಬುರಗಿ ಜಿಲ್ಲೆಯ ರಾಜಕಾರಣಿಗಳು ರಾಯಚೂರಿಗೆ ಏಮ್ಸ್ ವಿಚಾರದಲ್ಲಿ ಅನ್ಯಾಯ ಮಾಡಿದರೆ ಜೀವ ತ್ಯಾಗಕ್ಕೂ ಸಿದ್ದ. ಈ ಕುರಿತು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಯವರು ಸಚಿವರಿಗೆ ಕೂಡಲೇ ನಿರ್ದೇಶನ ನೀಡಬೇಕು. ಇಲ್ಲದೇ ಹೋದರೆ ಪ್ರಾಣತ್ಯಾಗಕ್ಕೂ ಸಿದ್ದರಿದ್ದೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಮಳೆ, ಪ್ರವಾಹದಿಂದ ಯಾವುದೇ ಅನಾಹುತ ಸಂಭವಿಸದಂತೆ ಉಡುಪಿ ಜಿಲ್ಲಾಡಳಿತ ದಿನದ 24...

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...