ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕನೊಬ್ಬ ಅತ್ಯಾಚಾರ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದ್ದು, ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.
ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ವರದಿಯಾಗಿದ್ದು, ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆರೋಪಿ ತಿಮ್ಮನಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ತಿಮ್ಮನಗೌಡ ಸಂತ್ರಸ್ತ ಮಹಿಳೆಗೆ ಸಂಬಂಧದಲ್ಲಿ ಮಾವನಾಗಬೇಕು ಎನ್ನಲಾಗಿದ್ದು, ಮಹಿಳೆಯು ತೀವ್ರ ಹೊಟ್ಟೆ ನೋವು ಎಂದು ಗೋಳಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ ಅತ್ಯಾಚಾರವಾಗಿರುವ ವಿಷಯ ತಿಳಿದುಬಂದಿವುದಾಗಿ ವರದಿಯಾಗಿದೆ.
ಕೆಲವು ದಿನಗಳಿಂದ ಮಹಿಳೆಯ ಪೋಷಕರು ದುಡಿಯಲು ಬೇರೆ ಕಡೆ ಹೋದಾಗ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಂದಿದ್ದ ಆರೋಪಿ ತಿಮ್ಮನಗೌಡ, ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಎಂದು ತಿಳಿದು ಬಂದಿದೆ.
ಇದನ್ನು ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್ ಮಾತು ತಪ್ಪಿದೆ: ಹರಿರಾಮ್
ಪ್ರಕರಣದ ಸಂಬಂಧ ಮಾನ್ವಿ ಪೊಲೀಸರು ಆರೋಪಿ ತಿಮ್ಮನಗೌಡನನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
