ರಾಯಚೂರು ನಗರದ ಸಿಯಾತಲಾಬ ಬಡಾವಣೆಯಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ರಾಯಚೂರು ನಗರದ ಸಿಯಾತಲಾಬ ಬಡಾವಣೆಯು ಕಾರ್ಮಿಕರು ಹಾಗೂ ಆರ್ಥಿಕವಾಗಿ ತೀರಾ ಹಿಂದುಳಿದ ಜನಾಂಗದವರು ವಾಸಿಸುತ್ತಿರುವುದರಿಂದ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಸ್ಲಂ ಬಡಾವಣೆಯಾಗಿದ್ದು, ಇಲ್ಲಿ ವಾಸಿಸುವ ಜನರಿಗೆ ಇನ್ನೊಂದು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಅವಶ್ಯವಾಗಿದೆ ಎಂದು ಆಗ್ರಹಿಸಿದರು.
ಈ ಪ್ರದೇಶದಲ್ಲಿ ಬಡ ಜನರ ಹಾಗೂ ಆರೋಗ್ಯ ಕೇಂದ್ರದ ಅವಶ್ಯಕತೆಯನ್ನು ಖಾಸಗಿ ವೈದ್ಯರು ಅರಿತು ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಿದ್ದಾರೆ. ಕಾರಣ ಬಡ ಕಾರ್ಮಿಕರಿಗೆ ಸರ್ಕಾರದ ಆಶಯವಾದ ಉಚಿತ ಆರೋಗ್ಯ ಸೌಲಭ್ಯ ನೀಡುವ ನಿಟ್ಟಿನಲ್ಲಿ ಉತ್ತಮವಾದ ಸರ್ಕಾರಿ ಆರೋಗ್ಯ ಕೇಂದ್ರವನ್ನು ಸ್ಥಾಪಿಸಿ, ಬಡಜನರಿಗೆ ಆರೋಗ್ಯ ತಪಾಸಣೆಗೆ ಪ್ರಥಮ ಆದ್ಯತೆ ಮೇರೆಗೆ ಆರೋಗ್ಯ ಕೇಂದ್ರವನ್ನು ಸ್ಥಾಪಿಸಬೇಕು ಹಾಗೂ ಆರೋಗ್ಯ ಕೇಂದ್ರದಲ್ಲಿ ಮುಖ್ಯವಾಗಿ ಎಂ.ಬಿ.ಬಿ.ಎಸ್. ತರಬೇತಿಯಾದ ವೈದ್ಯರನ್ನು ನೇಮಿಸಬೇಕೆಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಉಡುಪಿ | ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಹೇಮರಾಜ ಅಸ್ಕಿಹಾಳ, ಜಿಲ್ಲಾಧ್ಯಕ್ಷ ಜಿ.ನರಸಿಂಹಲು ಮರ್ಚಟಹಾಳ, ಉರುಕುಂದಪ್ಪ ಜಗ್ಲಿ, ಎಸ್. ವೆಂಕಟಸ್ವಾಮಿ, ಉರುಕುಂದಿ ಸಯಾತಲಾಬ, ತಾಯಪ್ಪ ಗಧಾರ ಸೇರಿದರೆ ಇತರರು ಉಪಸ್ಥಿತರಿದ್ದರು.
