ರಾಯಚೂರು | ಪೊಲೀಸರ ಕಿರುಕುಳ ತಪ್ಪಿಸುವಂತೆ ಡಿವೈಎಸ್‌ಪಿಗೆ ಮನವಿ

Date:

Advertisements

ಬೀದಿ ಬದಿಯ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಿದ್ದರಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಕೂಡಲೇ ರಕ್ಷಣೆ ನೀಡಬೇಕು ಮತ್ತು ಬೀದಿ ಬದಿ ವ್ಯಾಪಾರಿಗಳ ಮೇಲೆ ಪೊಲೀಸರ ಕಿರುಕುಳ ತಪ್ಪಿಸಬೇಕು ಎಂದು ಒತ್ತಾಯಿಸಿ ಬೀದಿ ಬದಿಯ ವ್ಯಾಪಾರಸ್ಥರು ಸಿಂಧನೂರು ಡಿವೈಎಎಸ್‌ಪಿಗೆ ಮನವಿ ಸಲ್ಲಿಸಿದರು.

“ಸಿಂಧನೂರು ನಗರದ ರಾಯಚೂರು, ಕುಷ್ಟಗಿ ಹಾಗೂ ಗಂಗಾವತಿ ಮಾರ್ಗದ ರಸ್ತೆ ಸೇರಿದಂತೆ ಇನ್ನಿತರೆ ಸರ್ಕಾರಿ ಜಾಗಗಳಲ್ಲಿ ಸಣ್ಣಪುಟ್ಟ ಅಂಗಡಿಗಳನ್ನಿಟ್ಟುಕೊಂಡು ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ವ್ಯಾಪಾರಸ್ಥರನ್ನು ಏಕಾಏಕಿ ತೆರವುಗೊಳಿಸಲಾಗಿದೆ. ಅವರನ್ನು ಅವಲಂಬಿಸಿದ ಸಾವಿರಾರು ಕುಟುಂಬಗಳು ಕಂಗಾಲಾಗಿವೆ. ನಗರದಲ್ಲಿ ಸಾಮಾಜಿಕ-ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಅಷ್ಟು ಕುಟುಂಬಗಳ ಮೇಲೆ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಿದಂತಾಗಿದೆ” ಎಂದು ಅಳಲು ತೋಡಿಕೊಂಡರು.

ನಗರದ ಪ್ರಮುಖ ರಸ್ತೆ ಬದಿಗಳಲ್ಲಿನ ಬೀದಿ ವ್ಯಾಪಾರಿಗಳು ಮುನಿಸಿಪಲ್, ಪಿಡಬ್ಲ್ಯುಡಿ, ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸ್ ಅಧಿಕಾರಿಗಳಿಂದ ಎದುರಿಸುತ್ತಿದ್ದ ದಿನನಿತ್ಯದ ಕಿರುಕುಳದ ನಡುವೆಯೂ ಬಡವರಿಗೆ, ಮಧ್ಯಮ ವರ್ಗದವರಿಗೆ ಉತ್ತಮ ಸರಕು-ಸೇವೆಗಳನ್ನು ಒದಗಿಸುತ್ತಾ ಬಂದಿದ್ದರೂ, ಇತ್ತೀಚೆಗೆ ಜಿಲ್ಲಾ, ತಾಲೂಕು ಆಡಳಿತ ಹಾಗೂ ನಗರಸಭೆಯಿಂದ ತೆರವು ಕಾರ್ಯಾಚರಣೆ ನಡೆಸಿ, ಏಕಾಏಕಿ ಬೀದಿ ಬದಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸಲಾಗಿದೆ. ಬೀದಿ ವ್ಯಾಪಾರಿಗಳ ಜೀವನೋಪಾಯ ರಕ್ಷಣೆ ಹಾಗೂ ಬೀದಿ ವ್ಯಾಪಾರದ ನಿಯಂತ್ರಣ ಕಾಯ್ದೆಯನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ. ಯಾವುದೇ ಕಾರಣಕ್ಕೂ ಪೊಲೀಸ್ ಕಿರುಕುಳ ನೀಡಬಾರದು ಎಂದು ಸಂಚಾಲಕ ನಾಗರಾಜ ಪೂಜಾರ್ ಆಗ್ರಹಿಸಿದರು.

“ಬೀದಿ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಲು ಅಥವಾ ನೋಟಿಸ್ ನೀಡಲು ಸಿಂಧನೂರು ಸಿಎಂಸಿ ಹಾಗೂ ಪಟ್ಟಣ ವ್ಯಾಪಾರ ಸಮಿತಿಗೆ ಮಾತ್ರ ಅಧಿಕಾರವಿದೆ. ಕಲಂ 18ರ ಪ್ರಕಾರ ಆಯಾ ನಗರಸಭೆಯಲ್ಲಿನ ಪಟ್ಟಣ ವ್ಯಾಪಾರ ಸಮಿತಿ ಈ ಕುರಿತು ಕ್ರಮ ತೆಗೆದುಕೊಳ್ಳಬಹುದೇ ಹೊರತು, ಬೇರೆ ಯಾವ ಅಧಿಕಾರಿಗಳೂ ಅವರನ್ನು ಸ್ಥಳಾಂತರಿಸುವಂತಿಲ್ಲ. ಹಾಗಾಗಿ ಲೋಕೋಪಯೋಗಿ ಇಲಾಖೆಯಿಂದ ಬೀದಿ ವ್ಯಾಪಾರಸ್ಥರಿಗೆ ನೀಡಿರುವ ನೋಟಿಸ್ ಕಾನೂನು ಬಾಹಿರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಯಚೂರು | ವಿವಿಧೆಡೆ ದಾಳಿ; 20 ಬಾಲ ಕಾರ್ಮಿಕರ ರಕ್ಷಣೆ

ಈ ಸಂದರ್ಭದಲ್ಲಿ ಟಿ. ಹುಸೇನಸಾಬ, ಮಂಜುನಾಥ ಗಾಂಧಿನಗರ, ವಾಸಿಮ್, ಬಸವರಾಜ ಬಾದರ್ಲಿ, ಶಾಮೀದ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರು ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X