ರಾಯಚೂರು | ಕುಡಿಯುವ ನೀರು ಬೇಡಿಕೆಗೆ ಸ್ಪಂದನೆ; ಹೋರಾಟ ಮುಂದೂಡಿಕೆ

Date:

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗ್ಗೇರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಂಡೆಮೇಲೆ ಸಿಂಗೇರಿದೊಡ್ಡಿ ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಿನ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿರುವುದರಿಂದ ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

- Advertisement -

ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಅವರಿಗೆ ಮನವಿ ಸಲ್ಲಿಸಿ, ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ಒಂದು ಹೊಸ ಬೋರ್ವೆಲ್ ಕೊರೆಸಬೇಕು, ನೀರಿನ ಟ್ಯಾಂಕ್ ಸಂಪರ್ಕ ಒದಗಿಸಬೇಕು, ನೀರಿನ ವ್ಯವಸ್ಥೆ ಸುಗಮಗೊಳಿಸಲು ವಾಟರ್ ಮ್ಯಾನ್ ನೇಮಕ ಮಾಡಬೇಕು, ಬೋರ್ ನೀರು ಸರಬರಾಜು ಆಗುವವರಿಗೆ ಪ್ರತಿ ದಿನ ಎರಡು ಟ್ಯಾಂಕರ್ ನೀರು ಸರಬರಾಜು ಮಾಡಬೇಕು, ಗ್ರಾಮದಲ್ಲಿ ಬೀದಿ ದೀಪಗಳ ವ್ಯವಸ್ಥೆ ಮಾಡ ಬೇಕು ಹಾಗೂ ಗ್ರಾಮಕ್ಕೆ ರಸ್ತೆಯನ್ನು ಮಾಡಿಸಬೇಕು ಎಂಬ ಬೇಡಿಕೆ ಈಡೇರಿಕೆಗೆ ಪ್ರತಿಭಟನೆ ನಡೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಹರಿಸುವುದಾಗಿ ಹೇಳಿ ಸಂಜೆಯಿಂದಲೇ ಗ್ರಾಮಕ್ಕೆ ನೀರು ಸರಬರಾಜು ಆರಂಭವಾಗಿತ್ತು. ಕೂಡಲೇ ಹೊಸ ಬೋರ್ ಕೊರೆಸಲು ಸ್ಥಳ ಗುರುತಿಸಲಾಗಿದ್ದು, ಬೋರ್ ಯಂತ್ರ ಕರೆಸಿ ಕೊರೆಸುವುದಾಗಿ ತಿಳಿಸಿದ್ದಾರೆ ಸಂಘಟನೆಯ ಮುಖಂಡರುಗಳಿಗೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಬೀದಿ ದೀಪಗಳನ್ನು ಅಳವಡಿಸುವುದು, ಸೇರಿ ಉಳಿದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲಾಗುವುದಾಗಿ ಗ್ರಾಮದ ಜನರ ಮುಂದೆ ಬರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘಟನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ  ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಅಣ್ಣಾರಾವ್, ಅರಕೇರಾ ಉಪ ತಹಸೀಲ್ದಾರ್ ಮನೋಹರ್, ಕಂದಾಯ ನಿರೀಕ್ಷಕ ಉಮಾಶಂಕರ್, ಅಲ್ಲಾ ಬಾಕ್ಸ್ ಕ್ಯಾರಿಗ್ರಾ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜಶೇಖರ ನಾಯಕ್, ಮಾಜಿ ಅಧ್ಯಕ್ಷ ಕೃಷ್ಣ ನಾಯಕ್ ಪಾಟೀಲ್, ವಿ.ಎ.ಮಮತಾ ಹಾಗೂ ಎಐಕೆಕೆ ಎಂಎಸ್  ಜಿಲ್ಲಾ ಕಾರ್ಯದರ್ಶಿ ಮಲ್ಲನಗೌಡ, ಎ. ಐಡಿವೈಒ ಜಿಲ್ಲಾ ಅಧ್ಯಕ್ಷ ಚನ್ನಬಸವ ಜಾನೇಕಲ್ ರೈತ ಸಂಘದ ತಾಲೂಕು ಕಾರ್ಯದರ್ಶಿ ದುರ್ಗಣ್ಣ, ಅಡಕಲಗುಡ್ಡ, ಸಾಬಯ್ಯ, ಅಂಬರೀಶ, ಸಿಂಗೆರಿದೊಡ್ಡಿ ಗ್ರಾಮ ಘಟಕದ ಕಾರ್ಯದರ್ಶಿ, ತಿಮ್ಮಯ್ಯ ಸಿಂಗೆರಿದೊಡ್ಡಿ ಗ್ರಾಮ ಉಪಾಧ್ಯಕ್ಷ ನಾಗರಾಜ, ಗ್ರಾಮದ ಹಿರಿಯರು, ಮಹಿಳೆಯರು ನೂರಾರು ಜನರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...