ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಮಕ್ಕಳ ಕಳ್ಳತನಕ್ಕೆ ಯತ್ನ ; ಸಿಕ್ಕಿಬಿದ್ದ ಮಂಗಳಮುಖಿ

Date:

ಮಂಗಳಮುಖಿಯೊಬ್ಬರು ತಡರಾತ್ರಿ ಬಾಣಂತಿಯರ ಕೋಣೆಗೆ ನುಗ್ಗಿದ್ದು ಆಸ್ಪತ್ರೆ ರೋಗಿಗಳು ಮಕ್ಕಳ ಕಳ್ಳನೆಂದು ಆರೋಪಿಸಿ ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ರಾಯಚೂರು ತಾಲ್ಲೂಕಿನ ಯರಮರಸ್ ಗ್ರಾಮದಲ್ಲಿ ವಾಸವಾಗಿರುವ ಮಂಗಳಮುಖಿ ಶರಣಪ್ಪ ಮಕ್ಕಳ ಕಳ್ಳನೆಂದು ಆರೋಪಕ್ಕೆ ಗುರಿಯಾಗಿ ಸ್ಥಳೀಯರ ಕೈಗೆ ಸಿಕ್ಕಿ‌ ಬಿದ್ದಿದ್ದಾನೆ. ಮಂಗಳಮುಖಿ ಶರಣಪ್ಪ ಬಾಣಂತಿಯರ ವಾರ್ಡ್ ಬಳಿ ಮಧ್ಯರಾತ್ರಿ 2 ಗಂಟೆಗೆ ಬಂದು ಮಕ್ಕಳನ್ನು ಕಳ್ಳತನ ಮಾಡಲು ಯತ್ನಿಸಿದ್ದಾನೆ ಎಂದು ಕಳ್ಳನನ್ನು ಹಿಡಿದ ತರಾಟೆ ತೆಗೆದುಕೊಂಡರು ಎನ್ನಲಾಗಿದೆ.

ಮಂಗಳಮುಖಿ ಶರಣಪ್ಪ ನಿನ್ನೆ ತನ್ನ ಗೆಳೆಯನೊಂದಿಗೆ ರಿಮ್ಸ್ ಆಸ್ಪತ್ರೆಗೆ ನುಗ್ಗಿ ರಾತ್ರಿ ಹೊರಗಡೆ ಮಲಗಿಕೊಂಡಿದ್ದಾನೆ. ಎಲ್ಲರೂ ನಿದ್ರೆಯಲ್ಲಿರುವಾಗ ಮಗು ಕಳ್ಳತನ ಮಾಡುತ್ತಿದ್ದ ಎಂದು ಅಲ್ಲಿಯೇ ಇದ್ದ ರೋಗಿಯ ಸಂಬಂಧಿಕರು ಹಿಡಿದು ಹೋಮ್ ಗಾರ್ಡ್ ಗಳಿಗೆ ಕರೆದಿದ್ದಾರೆ. ಮಹಿಳೆಯಂತೆ ಸಿದ್ಧವಾಗಿ ಬಂದಿದ್ದು ಆತ ಮಂಗಳಮುಖಿಯಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ರಿಮ್ಸ್ ಆಡಳಿತ ಮಂಡಳಿ ಮತ್ತು ಗೃಹ ರಕ್ಷಕ ಸಿಬ್ಬಂದಿಗಳ ವಿರುದ್ಧ ರೋಗಿಗಳು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರಿಗಾಗಿ ಪಂಚಾಯಿತಿಗೆ ಬೀಗ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೆಳಿಗ್ಗೆ ನಗರದ ಮಾರ್ಕೆಟಿಯಾರ್ಡ್ ಪೊಲೀಸರು ಬಿಎನ್ಎಸ್ಎಸ್ ಕಾಯ್ದೆಯ ಸೆಕ್ಷನ್ 128 ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆತ ಮಂಗಳಮುಖಿಯಾಗಿದ್ದು ರಾತ್ರಿ ವೇಳೆ ತಡವಾಗಿದ ಕಾರಣ ಆಸ್ಪತ್ರೆಯಲ್ಲಿ ಮಲಗಿದ್ದಾನೆ ಆತನ ಸಹೋದ್ಯೋಗಿ ಪರಾರಿಯಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...