ರಾಯಚೂರು | ಕಲುಷಿತ ನೀರು ಸೇವನೆ ಪ್ರಕರಣ: ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

Date:

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ ನಿಧಿ ಶಾಖೆ) ತಿಳಿಸಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್ ಒಡೆದು ಕುಡಿಯುವ ನೀರಿಗೆ ಚರಂಡಿ ನೀರು ಸೇರಿದ್ದು, ನೀರು ಕಲುಷಿತಗೊಂಡಿತ್ತು. ಈ ನೀರನ್ನು ಸೇವಿಸಿ 35ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದರು. ಅಲ್ಲದೇ ಐದು ವರ್ಷದ ಹನುಮಂತ ಎಂಬ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನ ಕುಟುಂಬಕ್ಕೆ ಕಾನೂನುಬದ್ಧ ವಾರಸುದಾರರಿಗೆ ಪರಿಹಾರನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಮಂಜೂರು ಮಾಡಲಾಗಿದೆ.

ಜಿಲ್ಲಾ ಪಂಚಾಯತ್ ಸಿಇಒಗೆ ನೋಟಿಸ್

ರಾಯಚೂರು ಜಿಲ್ಲೆಯ ದೇವದುರ್ಗ ಮತ್ತು ಲಿಂಗಸುಗೂರು ತಾಲೂಕುಗಳಲ್ಲಿ ಕಲುಷಿತ ನೀರು ಸರಬರಾಜಿನಿಂದ‌ ವಾಂತಿಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಅವರಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದ್ದಾರೆ.‌‌

ಏಳು ದಿನಗಳೊಳಗೆ ಸಮಜಾಯಿಷಿ ನೀಡುವಂತೆ ಸಿಇಒಗೆ ನೋಟೀಸ್

ದೇವದುರ್ಗದ ರೇಕಲಮರಡಿ ಹಾಗೂ ಲಿಂಗಸುಗೂರಿನ ಗೊರೇಬಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥಗೊಂಡಿದ್ದಾರೆ. ರೇಕಮರಡಿಯಲ್ಲಿ ಒಬ್ಬ ಬಾಲಕ ಸಾವನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಜಲಕಾಯ್ದೆ 1974 ನಿಯಮ 24 ಮತ್ತು 25ರ ಪ್ರಕಾರ ಕಲುಷಿತ ನೀರು ಸರಬರಾಜು ಶಿಕ್ಷಾರ್ಹವಾಗಿದ್ದು, ಘಟನೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ವಿರುದ್ಧ ಈವರೆಗೆ ಏಕೆ ಕ್ರಮ ಕೈಗೊಳ್ಳಬಾರದು ಎಂಬುವುದಕ್ಕೆ ಏಳು ದಿನಗಳೊಳಗೆ ಸಮಜಾಯಿಷಿಗಳನ್ನು ನೀಡಬೇಕು ಎಂದು ಮಂಡಳಿ ಸೂಚನೆ ನೀಡಿದೆ.

ಯೋಗ್ಯವಲ್ಲದ ನೀರು : ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮಕ್ಕೆ ಪೂರೈಸಿದ ನೀರು, ಕುಡಿಯಲು ಯೋಗ್ಯವಲ್ಲ ಎನ್ನುವ ವರದಿ ಬಯಲಾಗಿದೆ. ತಜ್ಞ ವೈದ್ಯರು ಗ್ರಾಮದಲ್ಲಿರುವ ಎರಡು ಕೊಳವೆ ಬಾವಿಯ ನೀರಿನ ಮಾದರಿಯನ್ನು ಪರೀಕ್ಷಿಸಿದ್ದು, ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜಾಗಿ ಜನ ಅಸ್ವಸ್ಥರಾಗಿರುವುದು ದೃಢಪಟ್ಟಿದೆ. ಇದೀಗ ಗ್ರಾಮಕ್ಕೆ ಕೊಳವೆಬಾವಿ ನೀರು ಸರಬರಾಜು ಮಾಡುವುದನ್ನು ಗ್ರಾಮ ಪಂಚಾಯತಿ ಸಿಬ್ಬಂದಿ ಸ್ಥಗಿತಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ದೇವದುರ್ಗ ತಾಲೂಕಿನ ರೇಕಲಮರಡಿಯಲ್ಲಿ ಕಲುಷಿತ ನೀರು ಕುಡಿದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 34 ಮಂದಿ ಈಗ ಚೇತರಿಸಿಕೊಂಡಿದ್ದಾರೆ. ಯೋಗ್ಯವಲ್ಲದ ನೀರನ್ನು ಕುಡಿದ ಗ್ರಾಮಸ್ಥರು ವಾಂತಿ-ಭೇದಿಯಿಂದ ಅರಕೇರಾ, ದೇವದುರ್ಗ, ಸಿರವಾರ ಮತ್ತು ರಿಮ್ಸ್ ಬೋಧಕ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಅವರೆಲ್ಲರೂ ತಮ್ಮ ಮನೆಗಳಿಗೆ ಹಿಂತಿರುಗಿದ್ದಾರೆ. ಲಿಂಗಸುಗೂರಿನ ಗೊರೇಬಾಳದಲ್ಲಿ ಅಸ್ವಸ್ಥರಾದವರಿಗೆ ನಿರಂತರ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿ ಅವರೂ ಕೂಡ ಗುಣಮುಖರಾಗುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...