ರಾಯಚೂರು | ರೈತರ ಬೇಡಿಕೆ ಈಡೇರಿಸುವಂತೆ ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯ

Date:

ದೆಹಲಿಯಲ್ಲಿ ರೈತರು ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಪವಾಸ ಹೋರಾಟ ನಡೆಸುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಯಚೂರು ಸಂಯುಕ್ತ ಹೋರಾಟ ಕರ್ನಾಟಕದಿಂದ ಪ್ರತಿಭಟನೆ ನಡೆಸಿದರು.

- Advertisement -

ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವರ ಪ್ರತಿಕೃತಿ ದಹಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ಪ್ರಾಣ ಉಳಿಸಲು ಕ್ರಮ ವಹಿಸಬೇಕು. ಕೂಡಲೇ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ನಾಯಕತ್ವದ ಜತೆ ಹಾಗೂ ದೆಹಲಿ ಗಡಿಗಳಲ್ಲಿ ಹೋರಾಟ ನಿರತರ ಜತೆಗೆ ಮಾತುಕತೆ ಆರಂಭಿಸಬೇಕು. ಎಲ್ಲ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿ ಮಾಡಬೇಕು” ಎಂದು ಒತ್ತಾಯಿಸಿದರು.

“ಎಲ್ಲ ರೈತರ ಎಲ್ಲ ರೀತಿಯ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು. ವಿವಿಧ ಕಡೆ ನಡೆಯುತ್ತಿರುವ ಖಾಸಗೀಕರಣ ಹಾಗೂ ಪಂಪ್‌ಸೆಟ್ ಮೀಟರೀಕರಣದ ಪ್ರಯತ್ನ ಕೂಡಲೇ ನಿಲ್ಲಿಸಬೇಕು. 60 ವರ್ಷ ದಾಟಿರುವ ಎಲ್ಲ ಕೃಷಿಕರಿಗೆ ₹5,000 ಮಾಸಿಕ ಪಿಂಚಣಿ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮಠಾಧೀಶರು, ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗುವುದಿಲ್ಲ: ಸಾಹಿತಿ ಡಾ. ಬಿ ಎಲ್ ವೇಣು

“ಐತಿಹಾಸಿಕ ದೆಹಲಿ ರೈತ ಹೋರಾಟ ಮುಂದಿಟ್ಟಿದ್ದ ಎಲ್ಲ ಹಕ್ಕೊತ್ತಾಯಗಳನ್ನು ಈಡೇರಿಸಬೇಕು. ರೈತ ವಿರೋಧಿ, ಕರಾಳ ಕೃಷಿ ಕಾಯ್ದೆಯ ತದ್ರೂಪಾಗಿರುವ ಕೃಷಿ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ಧೋರಣೆ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್, ಯು ಬಸವರಾಜ, ಸಂಯುಕ್ತ ಕಿಸಾನ್ ಹೋರಾಟ ಕರ್ನಾಟಕದ ಜಿಲ್ಲಾ ಸಂಚಾಲಕ ಕೆ ಜಿ ವಿರೇಶ, ಕರಿಯಪ್ಪ ಅಚ್ಚೊಳ್ಳಿ, ಮಾರೆಪ್ಪ ಹರವಿ, ರಂಗನಾಥ ಮಾಸ್ತರ್, ಖಾಜಾ ಅಸ್ಲಂ, ಬಡೇಸಾಬ್ ಬಸಲಿಂಗಪ್ಪ, ಆಂಜನೇಯ ಕುರುಬದೊಡ್ಡಿ, ಈ ರಂಗನಾಥ ಕೊತ್ತದೊಡ್ಡಿ, ನರಸಣ್ಣ ನಾಯಕ, ಶಿವಾರ್ಜುನ ನಾಯಕ, ಹನುಮಂತ ಗುರಿಕಾರ, ಗೋವಿಂದ ದಾಸ್, ಡಿ ವೀರನಗೌಡ, ಹನುಮಂತ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...