ರಾಯಚೂರು | ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣ: ತನಿಖೆಯನ್ನು ಖುದ್ದು ಪರಿಶೀಲಿಸಲು ಎಸ್‌ಪಿಗೆ ಸೂಚಿಸಿದ ಸಿಎಂ

Date:

ಕಳೆದ ಆಗಸ್ಟ್ 22 ರಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ದಲಿತ ಸಮುದಾಯದ ಸಂಜಯ್ ಕುರ್ಡೀಕರ್ ಎಂಬುವವರ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

- Advertisement -

ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು ಮತ್ತು ಸಂಪುಟ ಸದಸ್ಯರು ಬಸ್ ನಲ್ಲಿ ತೆರಳುವ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಕೊಲೆಯಾದ ಸಂಜಯ್ ಪತ್ನಿ ಶಾಂತಮ್ಮ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
sabhe 1

ಶಾಂತಮ್ಮ ಅವರ ಗೋಳಾಟ ನೋಡಿ ಮರುಗಿದ ಸಿಎಂ, ಸ್ಥಳದಲ್ಲೇ ದೂರವಾಣಿ ಮೂಲಕ ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಅವರನ್ನು ಸಂಪರ್ಕಿಸಿ ಕೊಲೆ ಪ್ರಕರಣದ ವಿವರಣೆ ಕೇಳಿದರು.

ಇದನ್ನು ಓದಿದ್ದೀರಾ? ಅನುಮತಿ ಇಲ್ಲದೆ ಬುಲ್ದೋಝರ್ ಕಾರ್ಯಾಚರಣೆಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಬಳಿಕ ಕೊಲೆ ಪ್ರಕರಣದ ತನಿಖೆಯನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು. ಈವರೆಗೂ ನಡೆದಿರುವ ತನಿಖೆ ಸಮರ್ಪಕವಾಗಿದೆಯೇ? ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದು ಅವರು ತಪ್ಪಿಸಿಕೊಂಡಿದ್ದಾರಾ? ನಿಜವಾದ ಆರೋಪಿಗಳು ಹೊರಗೆ ಇದ್ದರೆ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ದೊರಕಲು ಸಾಧ್ಯವಿಲ್ಲ. ಆದ್ದರಿಂದ, ಖುದ್ದಾಗಿ ಕೊಲೆ ಪ್ರಕರಣದ ತನಿಖೆಯ ಮೇಲೆ ನಿಗಾ ವಹಿಸಬೇಕು, ಬಳಿಕ ಈ ಬಗ್ಗೆ ನನಗೆ ವರದಿ ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...