ರಾಯಚೂರು | ಸನ್ನತಿ ಪಂಚಶೀಲ ಪಾದಯಾತ್ರೆ; ಜ.24ರಂದು ಬೆಂಗಳೂರಿನಲ್ಲಿ ಸಮಾರೋಪ

Date:

ಬೌದ್ಧ ಸಮುದಾಯದ ಹಲವು ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ನವೆಂಬರ್ 15ರಿಂದ ನಡೆದ ಸನ್ನತಿ ಪಂಚಶೀಲ ಪಾದಯಾತ್ರೆಯು ಜನವರಿ 24ರಂದು ಬೆಂಗಳೂರಿಗೆ ತಲುಪಲಿದ್ದು, ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ಮೂಲಕ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಧಮ್ಮದೀಪ ಚಾಲನಾ ಸಮಿತಿ ಹಿರಿಯ ಮುಖಂಡ ಮಲ್ಲೇಶಪ್ಪ ಹುನುಗುಂದಬಾಡ್ ಹೇಳಿದರು.

- Advertisement -

ರಾಯಚೂರು ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ನಾಡಿನ ಭಿಕ್ಕು ಮತ್ತು ಬಿಕ್ಕುಣಿ ಸಂಘದ ಪೂಜ್ಯ ಭಂತೆ ಭೋಧಿದತ್ತ ನೇತೃತ್ವದಲ್ಲಿ ಡಿಸೆಂಬರ್‌ 15 ರಂದು ಸನ್ನತಿಯಿಂದ ಪ್ರಾರಂಭವಾದ ಪಂಚಶೀಲ ಪಾದಯಾತ್ರೆ ಕಲಬುರಗಿ, ಯಾದಗಿರ, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಗ್ರಾಮದಿಂದ ಸರಿ ಸುಮಾರು 800 ಕಿಮೀ ಜನಜಾಗೃತಿ ಮೂಡಿಸುವ ಮೂಲಕ 23ರಂದು ಯಶವಂತಪುರ ಮಾರ್ಗವಾಗಿ ಡಾ ಬಿ ಆರ್ ಅಂಬೇಡ್ಕರ್‌ ಅವರ ಕನಸಿನ ದಕ್ಷಿಣ ಭಾರತ ಧಮ್ಮ ಕೇಂದ್ರವಾದ ನಾಗಸೇನ ಬುದ್ಧ ವಿಹಾರ ಸದಾಶಿವ ನಗರ ತಲುಪಿ ವಾಸ್ತವ್ಯ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ಸನ್ನತಿ ಅಭಿವೃದ್ಧಿ ಪ್ರಾಧಿಕಾರದ ಯೋಜನೆಯನ್ನು ಆಂಧ್ರಪ್ರದೇಶದ ಬುದ್ಧವನ ಮಾದರಿಯಲ್ಲಿ ಕನಿಷ್ಠ 200 ಎಕರೆ ಪ್ರದೇಶದಲ್ಲಿ ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಪಡಿಸಿ ಸನ್ನತಿಯನ್ನು 7 ಸ್ಟಾರ್ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಮಾಡಬೇಕು” ಎಂದು ಒತ್ತಾಯಿಸಿದರು.

“ಪರಿಶಿಷ್ಟ ಜಾತಿಯ ಬೌದ್ಧರ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಬೌದ್ಧರ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬೌದ್ಧ ಕ್ಷೇತ್ರಗಳ ಅಭಿವೃದ್ಧಿಗಾಗಿ ಕನಿಷ್ಠ ₹1000 ಕೋಟಿ ಅನುದಾನವನ್ನು ಈ ಬಜೆಟ್‍ನಲ್ಲಿ ಘೋಷಣೆ ಮಾಡಬೇಕು. ಪ್ರತಿವರ್ಷ ಮಹಾತ್ಮ, ಗೌತಮ ಬುದ್ಧ ಜಯಂತಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಗವಿಮಠದ ಜಾತ್ರೆ ಸಂಪನ್ನ | ಭಕ್ತರ ಮುಂದೆ ಕಣ್ಣೀರಿಟ್ಟು ಮೂರು ಮನವಿ ಮುಂದಿಟ್ಟ ಗವಿಸಿದ್ದೇಶ್ವರ ಶ್ರೀಗಳು

“ಬೋಧ ಗಯಾ ಟೆಂಪಲ್ ಕಾಯಿದೆ-1949ನ್ನು ರದ್ದುಗೊಳಿಸಿ ಬೋಧ ಗಯಾದ ಮಹಾಬೋಧಿ, ಮಹಾ ವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮತ್ತು ಬಿಹಾರ ಸರ್ಕಾರಕ್ಕೆ ಸೂಕ್ತ ಶಿಫಾರಸು ಮಾಡಬೇಕು” ಎಂದು ಹೇಳಿದರು.

“ಕರ್ನಾಟಕ ಸರ್ಕಾರ ಪ್ರತಿ ವರ್ಷ ಫೆಬ್ರವರಿ 12ರಂದು ಸಾಮ್ರಾಟ್ ಅಶೋಕ ಸನ್ನತಿ ಉತ್ಸವವನ್ನು ಸರ್ಕಾರದಿಂದ ಆಚರಣೆ ಮಾಡಬೇಕು ಎಂಬುದು ಸೇರಿದಂತೆ ಸರಿ ಸಮಾರು 10 ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರು ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಈ ಸಮಾವೇಶಕ್ಕೆ ಹೋಗಲು ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ” ಎಂದು ತಿಳಿಸಿದರು.

“ಸಮಾರೋಪ ಸಮಾರಂಭದಲ್ಲಿ ಸುಮಾರು ಹತ್ತುಸಾವಿರ ಜನಸಂಖ್ಯೆ ಸೇರಲಿದೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನರಸಪ್ಪ ವಕೀಲ ಚಿಂಚೋಡಿ, ಮಹಾಂತೇಶ ಭವಾನಿ, ಮಲ್ಲಿಕಾರ್ಜನ್ ಮಸರಕಲ್, ರಾಮಣ್ಣ ಭವಾನಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...