ರಾಯಚೂರು | ಸತೀಶ್ ಜಾರಕಿಹೊಳಿಗೆ ಅವಹೇಳನ; ಪ್ರಕರಣ ದಾಖಲು

Date:

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮೋಹಿತ್ ನರಸಿಂಹ ಮೂರ್ತಿ ವಿರುದ್ಧ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆಯಲ್ಲಿ ಜಾತಿ ದೌರ್ಜನ್ಯ ತಡೆ(ಅಟ್ರಾಸಿಟಿ) ಕೇಸ್ ದಾಖಲಾಗಿದೆ.

- Advertisement -

ಸಾಮಾಜಿಕ ಜಾಲತಾಣ ಫೇಸ್‌ಬುಕ್ ಪೇಜ್‌ನಲ್ಲಿ ಮೋಹಿತ್ ನರಸಿಂಹ ಸತೀಶ್ ಜಾರಕಿಹೊಳಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸದಲ್ಲದೆ, ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದೂರುದಾರ ಗೋವಿಂದ್ ರಾಜ್ ನಾಯಕ ಮಾತನಾಡಿ, “ಮೋಹಿತ್ ನರಸಿಂಹ ಮೂರ್ತಿ ಎನ್ನುವ ಫೇಸ್‌ಬುಕ್ ಪೇಜ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಸೇರಿ ಇನ್ನೂ ಕೆಲವರಿಗೆ ತುಂಬಾ ಕೆಟ್ಟ ಪದಗಳಿಂದ ನಿಂದಿಸಿ ಅವಮಾನ ಮಾತನಾಡಿದ್ದಾನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಬಾಬಾ ಸಾಹೇಬರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ: ಮಂಜು ಬುರುಡಿ

“ಸತೀಶ್ ಜಾರಕಿಹೊಳಿಯವರು ದಲಿತ ಸಮುದಾಯಕ್ಕೆ ಸೇರಿದ್ದಾರೆಂಬ ಕಾರಣಕ್ಕೆ ಉದ್ದೇಶ ಪೂರ್ವಕವಾಗಿ ಮಾತನಾಡಿದ್ದಾನೆಂದು ಎದ್ದು ಕಾಣುತ್ತಿದೆ. ವಿಡಿಯೊ ಮೂಲಕ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದರು.

ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ವೆಂಕಟೇಶ್ ಅವರು ಅಟ್ರಾಸಿಟಿ ದಾಖಲಿಸಿಕೊಂಡು ಆರೋಪಿಗೆ ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...