ರಾಯಚೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಟ್ಟು 1.30 ಕೋಟಿ ರೂ. ಪರಿಹಾರ ಧನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸ್‌ಸಿ/ಎಸ್‌ಟಿ ಸಮುದಾಯಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
“ಜಿಲ್ಲೆಯಲ್ಲಿ ಒಟ್ಟು ಜನವರಿಯಿಂದ ಸೆಪ್ಟೆಂಬರ್‌ವರೆಗೆ 63 ಪ್ರಕರಣಗಳು ದಾಖಲಾಗಿದ್ದು, ಅನಮೋದನೆ ಮೆರೆಗೆ ಫಲಾನುಭವಗಳಿಗೆ 1.30 ಕೋಟಿ ರೂ. ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 52 ಜಾತಿ ನಿಂದನೆ, ಬೆದರಿಕೆ ಪ್ರಕರಣಗಳು, 5 ಅತ್ಯಾಚಾರ ಪ್ರಕರಣಗಳು, 6 ಮೃತಪಟ್ಟ ಪ್ರಕರಣಗಳು ದಾಖಲಾಗಿವೆ. ಸರ್ಕಾರಿ ಉದ್ಯೋಗದಲ್ಲಿ ದೌರ್ಜನ್ಯ ಪ್ರಕರಣಗಳಲ್ಲಿ ಒಂದು ವರ್ಷದ ಬಳಿಕ ಅರ್ಜಿ ಸಲ್ಲಿಸಿದೆ” ಎಂದರು.
“ದೌರ್ಜನ್ಯ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ಒಟ್ಟು 8 ಮಂದಿಗೆ ಪಿಂಚಣಿ ಮಂಜೂರು ಮಾಡಲಾಗಿದೆ. ತಲಾ 6750 ಸೇರಿದಂತೆ ಒಟ್ಟು 54 ಸಾವಿರ ರೂ. ಮಂಜೂರು ಮಾಡಲಾಗಿದೆ” ಎಂದು ತಿಳಿಸಿದರು.
2018-19ನೇ ಸಾಲಿನಿಂದ 2023-24ನೇ ಸಾಲಿನ ದೌರ್ಜನ್ಯದಡಿ ಮೃತಪಟ್ಟ ಪ್ರಕರಣಗಳಲ್ಲಿ ಸರ್ಕಾರಿ ಉದ್ಯೋಗ ನೀಡಲು ಒಟ್ಟು 7 ಅರ್ಜಿಗಳನ್ನು ಸಲ್ಲಿಸಿದ್ದು, ಉದ್ಯೋಗ ನೀಡಲು ಬಾಕಿ ಇದೆ” ಎಂದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಎಸ್.ಆರ್ ತಲ್ಲೂರ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ನಿವೃತ್ತ ಐಎಎಸ್ ಅಧಿಕಾರಿ
ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಪಾಂಡ್ವೆ ತುಕಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ನಿಖಿಲ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಂದ್ರ ಜಲ್ದಾರ್, ರವಿ ಜಲ್ದಾರ್, ತ್ರಿವಿಕ್ರಮ ಜೋಷಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್, ರಾಯಚೂರು