ರಾಯಚೂರು | ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ; 1.30 ಕೋಟಿ ರೂ. ಪರಿಹಾರ

Date:

ರಾಯಚೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಟ್ಟು 1.30 ಕೋಟಿ ರೂ. ಪರಿಹಾರ ಧನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸ್‌ಸಿ/ಎಸ್‌ಟಿ ಸಮುದಾಯಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಜಿಲ್ಲೆಯಲ್ಲಿ ಒಟ್ಟು ಜನವರಿಯಿಂದ ಸೆಪ್ಟೆಂಬರ್‌ವರೆಗೆ 63 ಪ್ರಕರಣಗಳು ದಾಖಲಾಗಿದ್ದು, ಅನಮೋದನೆ ಮೆರೆಗೆ ಫಲಾನುಭವಗಳಿಗೆ 1.30 ಕೋಟಿ ರೂ. ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 52 ಜಾತಿ ನಿಂದನೆ, ಬೆದರಿಕೆ ಪ್ರಕರಣಗಳು, 5 ಅತ್ಯಾಚಾರ ಪ್ರಕರಣಗಳು, 6 ಮೃತಪಟ್ಟ ಪ್ರಕರಣಗಳು ದಾಖಲಾಗಿವೆ. ಸರ್ಕಾರಿ ಉದ್ಯೋಗದಲ್ಲಿ ದೌರ್ಜನ್ಯ ಪ್ರಕರಣಗಳಲ್ಲಿ ಒಂದು ವರ್ಷದ ಬಳಿಕ ಅರ್ಜಿ ಸಲ್ಲಿಸಿದೆ” ಎಂದರು.

“ದೌರ್ಜನ್ಯ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ಒಟ್ಟು 8 ಮಂದಿಗೆ ಪಿಂಚಣಿ ಮಂಜೂರು ಮಾಡಲಾಗಿದೆ. ತಲಾ 6750 ಸೇರಿದಂತೆ ಒಟ್ಟು 54 ಸಾವಿರ ರೂ. ಮಂಜೂರು ಮಾಡಲಾಗಿದೆ” ಎಂದು ತಿಳಿಸಿದರು.

2018-19ನೇ ಸಾಲಿನಿಂದ 2023-24ನೇ ಸಾಲಿನ ದೌರ್ಜನ್ಯದಡಿ ಮೃತಪಟ್ಟ ಪ್ರಕರಣಗಳಲ್ಲಿ ಸರ್ಕಾರಿ ಉದ್ಯೋಗ ನೀಡಲು ಒಟ್ಟು 7 ಅರ್ಜಿಗಳನ್ನು ಸಲ್ಲಿಸಿದ್ದು, ಉದ್ಯೋಗ ನೀಡಲು ಬಾಕಿ ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಎಸ್.ಆರ್ ತಲ್ಲೂರ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ನಿವೃತ್ತ ಐಎಎಸ್‌ ಅಧಿಕಾರಿ

ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಪಾಂಡ್ವೆ ತುಕಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ನಿಖಿಲ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಂದ್ರ ಜಲ್ದಾರ್, ರವಿ ಜಲ್ದಾರ್, ತ್ರಿವಿಕ್ರಮ ಜೋಷಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...