ರಾಯಚೂರು | ಶಾಲಾ ಬಸ್‌ ಅಪಘಾತ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

Date:

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ನಡೆದಿತ್ತು.

- Advertisement -

ಈ ಘಟನೆಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆ ಗುಂಡಿಗಳನ್ನು ಮುಚ್ಚಿಸದಿರುವುದೇ ಕಾರಣ ಎಂದು ಆರೋಪಿಸಿ, ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಾರಿಗೆ ಬಸ್ ಹಾಗೂ ಶಾಲಾ ಬಸ್ ನಡುವಿನ ಅಪಘಾತ ನಡೆಯಲು ಇಲ್ಲಿನ ರಸ್ತೆ ಗುಂಡಿಗಳು ಕಾರಣ. ಈ ಘಟನೆಗೆ ಸ್ಥಳೀಯ ಅಧಿಕಾರಿಗಳು ನೇರ ಹೊಣೆ ಹೊರಬೇಕು. ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ನಿತೀಶ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯ ವೇಳೆ ಮಾತನಾಡಿದ ಜನಸೇವಾ ಮುಖ್ಯಸ್ಥ ಜಾವೇದ್ ಖಾನ್‌, “ಹೆದ್ದಾರಿಯು ಸಂಪೂರ್ಣ ಹದೆಗಟ್ಟಿರುವುದರಿಂದ ಗುಂಡಿಗಳು ಬಿದ್ದಿದೆ. ಹಲವು ಅಪಘಾತಗಳು ಸಂಭವಿಸಿ ಸಾವು ನೋವು ಕೂಡ ಸಂಭವಿಸಿದೆ. ಖಾಸಗಿ ಶಾಲಾ ಬಸ್‌ ಚಾಲಕ ರಸ್ತೆಯ ಗುಂಡಿಯನ್ನು ತಪ್ಪಿಸಲು ಹೋದಾಗ ಎದುರಿಗೆ ಬರುತ್ತಿರುವ ಬಸ್‌ಗೆ ಡಿಕ್ಕಿಯಾಗಿ, ಅಪಘಾತ ಸಂಭವಿಸಿದೆ. ಇದಕ್ಕೆ ನೇರ ಕಾರಣ ಅಧಿಕಾರಿಗಳು ಎಂದು ವಾಗ್ದಾಳಿ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯನ್ನು ನಿರ್ವಹಿಸುತ್ತಿರುವ ಕೆಆರ್‌ಡಿಐಎಲ್ ಅವರು ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ. ಹಾಗಾಗಿ, ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಬೇಕು. ಶಾಲಾ ಮಕ್ಕಳ ಕುಟಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಇನ್ಸೂರೆನ್ಸ್ ಕ್ಷೇಮ ಮಾಡಿ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಶಾಲಾ ಬಸ್‌ಗೆ ಸಾರಿಗೆ ಬಸ್‌ ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸಾವು; ಹಲವರಿಗೆ ಗಾಯ

ಲೋಕೋಪಯೋಗಿ ಇಲಾಖೆ ಅಧಿಕಾರಿ ಶ್ಯಾಮಿಲಪ್ಪ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ: ಸಿಎಂ ಸಿದ್ದರಾಮಯ್ಯ ಭರವಸೆ

ರಾಯಚೂರು ಘಟನೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ, “ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು. ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು. ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...