ರಾಯಚೂರು | ಮುಖ್ಯ ಶಿಕ್ಷಕನ ಅಮಾನತಿಗೆ ಎಸ್‌ಎಫ್‌ಐ ಆಗ್ರಹ

Date:

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಾಗಲವಾಡ ಕ್ಲಸ್ಟರ್ ವ್ಯಾಪ್ತಿಯ ನಡುಗಡ್ಡೆ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶಿವರಾಜ್ ಎಂಬಾತನನ್ನು ಅಮಾನತು ಮಾಡುವಂತೆ ಎಸ್ಎಫ್ಐ ಜಿಲ್ಲಾ ಸಮಿತಿ ಮುಖಂಡರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಪ್ರಭಾರಿ ಮುಖ್ಯ ಶಿಕ್ಷಕ ಶಿವರಾಜ್ ನಿರಂತರವಾಗಿ ಶಾಲೆಗೆ ಅನಧಿಕೃತ ಗೈರಾಗುತ್ತಿದ್ದಾರೆ. ಕಳೆದ ಶುಕ್ರವಾರ(ಜೂ 30), ಶನಿವಾರ(ಜು 01)ವೂ ಗೈರಾಗಿದ್ದಾರೆ. ಯಾವುದೇ ಸಿಎಲ್ ಇಲ್ಲದೆ, ಬಿಇಒ ಅನುಮತಿ ಇಲ್ಲದೆ ರಜೆ ತೆಗೆದುಕೊಂಡಿದ್ದಾರೆ. ಅಲ್ಲದೇ  ಸೋಮವಾರದಂದು 2 ಗಂಟೆ  ತಡವಾಗಿ ಶಾಲೆಗೆ ಬಂದಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸರ್ಕಾರಿ ಸಂಬಳ ತಿಂದು ಶಾಲೆಗೆ ಗೈರಾಗುವ ಮೂಲಕ ಮಕ್ಕಳಿಗೆ ಮತ್ತು ಶಾಲೆಗೆ ದ್ರೋಹವೆಸಗಿದ್ದಾರೆ. ಹಾಗಾಗಿ  ಈತನನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದರು.

“ಪ್ರಭಾರಿ ಮುಖ್ಯ ಶಿಕ್ಷಕ ಶಿವರಾಜ್ ಈ ಹಿಂದಿನಿಂದಲೂ ಶಿಕ್ಷಣ ಇಲಾಖೆಯ ಮತ್ತು ಸ್ಥಳೀಯ ಪಾಲಕ ಪೋಷಕರ ಯಾವುದೇ ಭಯವಿಲ್ಲದೆ ಶಾಲೆಗೆ ಅನಧಿಕೃತವಾಗಿ ಗೈರಾಗುತ್ತಾ ನಿರ್ಭಯವಾಗಿ ತಿರುಗಾಡುತ್ತಿರುತ್ತಾರೆ. ಈ ಕುರಿತು ಗ್ರಾಮಸ್ಥರು ಎಷ್ಟೋ ಬಾರಿ ಶಾಲೆಗೆ ಹೋಗಿ ಗಲಾಟೆ ಮಾಡಿ ಬೈದು ಬುದ್ದಿ ಹೇಳಿದರೂ ಶಿಕ್ಷಕ ತಿದ್ದಿಕೊಂಡಿಲ್ಲ” ಎಂದು ಆರೋಪಿಸಿದರು.

“ಈ ಶಾಲೆ ಏಕೋಪಾಧ್ಯಾಯ ಶಾಲೆಯಾಗಿದ್ದು, ಒಬ್ಬರು ಅತಿಥಿ ಶಿಕ್ಷಕ ಮಾತ್ರ ಇದ್ದಾರೆ. ಶಾಲೆಯ ಜವಾಬ್ದಾರಿಯನ್ನು ಅತಿಥಿ ಶಿಕ್ಷಕರ ಮೇಲೆ ಹಾಕಿ ಪ್ರಭಾರಿ ಶಿಕ್ಷಕ ಅನಧಿಕೃತವಾಗಿ ಗೈರಾಗುತ್ತಿರುವುದು ಕಂಡುಬಂದಿದೆ. ಗೈರಾದ ಸಂದರ್ಭದಲ್ಲಿ ಎರವಲು ಸೇವೆಗೆ ಶಿಕ್ಷಕರನ್ನು ನೇಮಿಸಿ ಗೈರಾಗಬೇಕೆಂಬ ಯಾವ ನಿಯಮವನ್ನೂ ಈ ಪ್ರಭಾರಿ ಮುಖ್ಯ ಶಿಕ್ಷಕ ಶಿವರಾಜ್ ಪಾಲಿಸಿಲ್ಲ. ಅಲ್ಲದೆ ಈವರೆಗೆ ಯಾವುದೇ ತರಬೇತಿ ಪಡೆಯದ ಅತಿಥಿ ಶಿಕ್ಷಕರಿಂದ ನಲಿ ಕಲಿಗೆ ತರಗತಿ ನಡೆಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಳೆದ ಜನವರಿ ಫೆಬ್ರವರಿ ಮಾರ್ಚ್ ತಿಂಗಳಲ್ಲಿಯೂ ತನ್ನ ಮದುವೆಯ ಸಲುವಾಗಿ ನಿರಂತರವಾಗಿ ಗೈರಾಗಿ ಕೇವಲ 3 ಸಿಎಲ್ ಹಾಕಿಕೊಂಡು ತನ್ನ ವಿವಾಹ ಮಾಡಿಕೊಂಡಿದಾರೆ. ಈ ಸಂದರ್ಭದಲ್ಲೂ ಎರವಲು ಸೇವೆಗೆ ಶಿಕ್ಷಕರನ್ನು ನೇಮಿಸದೇ ಅತಿಥಿ ಶಿಕ್ಷಕರ ಮೇಲೆಯೇ ಅನಧಿಕೃತವಾಗಿ ಶಾಲೆಯನ್ನು ನಡೆಸಿದ್ದಾರೆ. ಈ ಬಗ್ಗೆ ಸಿಆರ್‌ಪಿ ಮತ್ತು ಬಿಇಒ ಗಮನಕ್ಕೆ ಇದ್ದರೂ ಯಾವುದೇ ಅಧಿಕಾರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳದಿರುವುದು ಖಂಡನೀಯ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಮದುವೆಯ ಸಂದರ್ಭದ ನಿರಂತರ ಗೈರಾಗಿ ಸರ್ಕಾರದ ವೇತನ ತಿಂದು ಮಕ್ಕಳ ಭವಿಷ್ಯದ ಜೊತೆಗೆ ಆಟ ಆಡಿರುವ ಪ್ರಭಾರಿ ಮುಖ್ಯ ಶಿಕ್ಷಕ ಶಿವರಾಜ್‌ನನ್ನು ಕೂಡಲೇ ಅಮಾನತು ಮಾಡಿ ಅವರ ಮುಂಬಡ್ತಿ, ವೇತನ ಹೆಚ್ಚಳ ಕಡಿತ ಮಾಡಿ ಆದೇಶ ಹೊರಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಬಾಬು ಜಗಜೀವನ್‌ರಾಂ ಅವರ 37ನೇ ಪುಣ್ಯಸ್ಮರಣೆ

“ಮಾನ್ವಿ ಕ್ಷೇತ್ರ ಶಿಕ್ಷಾಣಾಧಿಕಾರಿಗೆ ಈ ಕುರಿತು ಮೌಖಿಕ ದೂರು ನೀಡಿದ ಮೇಲೆಯೂ ಬಿಇಒ ಶಿಕ್ಷಕನಿಗೆ ನೋಟಿಸ್ ನೀಡುವುದು ಸೇರಿದಂತೆ ಯಾವುದೇ ಶಿಸ್ತು ಕ್ರಮ ಜರುಗಿಸಿಲ್ಲದಿರುವುದು ಖಂಡನೀಯ. ಸರ್ಕಾರದ ಸಂಬಳ ತಿಂದು ಬಡವರ ಮಕ್ಕಳಿಗೆ ದ್ರೋಹ ಎಸಗುವ ಇಂತಹ ಶಿಕ್ಷಕನನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.

“ಬೇಜವಾಬ್ದಾರಿ ಶಿಕ್ಷಕನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಮುಂದೆ ಯಾರೂ ಇಂತಹ ಕೃತ್ಯ ಎಸಗದ ರೀತಿಯಲ್ಲಿ ಎಚ್ಚರ ವಹಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಡಿಡಿಪಿಐ ಕಚೇರಿ ಮುಂದೆ ಧರಣಿ ನಡೆಸಲಾಗುವುದು” ಎಂದು ಎಸ್ಎಫ್ಐ ರಾಯಚೂರು ಜಿಲ್ಲಾ ಸಮಿತಿಯ ಮುಖಂಡರು ಎಚ್ಚರಿಸಿದ್ದಾರೆ.

ಈ‌ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ಜಿಲ್ಲಾ ಸಹ ಕಾರ್ಯದರ್ಶಿ ಚಿದಾನಂದ ಕರಿಗೂಳಿ, ಮುಖಂಡರುಗಳಾದ ಮೌನೇಶ್ ಬಿ, ವಿನಯ್ ಕುಮಾರ್ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...