ರಾಯಚೂರು | ಯಲಗಟ್ಟಾ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗನಗೌಡರ ಅಮಾನತಿಗೆ ಎಸ್‌ಎಫ್‌ಐ ಆಗ್ರಹ

Date:

ರಾಯಚೂರು ಜಿಲ್ಲೆಯ ಯಲಾಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಿರಂತರ ಗೈರಾಗುತ್ತಿರುವುದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಲಿಂಗಸಗೂರು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಲೆ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

- Advertisement -

ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಮಾತನಾಡಿ, “ಜಿಲ್ಲೆಯ ಲಿಂಗಸಗೂರು ತಾಲೂಕಿನ ಯಲಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗನಗೌಡ ಅವರು ಎರಡು ವರ್ಷಗಳಿಂದ ಶಾಲೆಗೆ ನಿರಂತರವಾಗಿ ಅನಧಿಕೃತವಾಗಿ ಗೈರಾಗುತ್ತಿದ್ದು, ಶಾಲೆಯ ಮಕ್ಕಳ ವಿದ್ಯಾಭ್ಯಾಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ಬಗ್ಗೆ ಅನೇಕ ಬಾರಿ ಎಸ್ಎಫ್ಐ, ಎಸ್‌ಡಿಎಂಸಿ ಹಾಗೂ ಅನೇಕ ಸಂಘಟನೆಗಳು ದೂರು ನೀಡಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಶಿಕ್ಷಣ ಇಲಾಖೆ ರಾಜಕೀಯ ಒತ್ತಡಕ್ಕೆ ಮಣಿದಿದ್ದು, ತಪ್ಪತಸ್ತ ಮುಖ್ಯಶಿಕ್ಷಕರ ವಿರುದ್ಧ ಯಾವುದೇ  ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ” ಎಂದು ಆರೋಪಿಸಿದರು.

“ಯಲಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಮುಖ್ಯ ಗುರುಗಳಾಗಿ ಬಂದ ದಿನದಿಂದಲೂ ಅವರು ನಿರಂತರ ಗೈರಾಗಿದ್ದಾರೆ. ಕೇವಲ ಧ್ವಜಾರೋಹಣ ಹಾಗೂ ಕೆಲವೊಂದು ಜಯಂತಿಗಳನ್ನು ಆಚರಿಸಲು ಮಾತ್ರ ಹಾಜರಿರುತ್ತಾರೆ. ಕೆಲ ಹೊತ್ತಿನಲ್ಲೇ ತರಾತುರಿಯಲ್ಲಿ ಜಾಗ ಖಾಲಿ ಮಾಡುತ್ತಾರೆ. ಇದರಿಂದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 68 ವಿದ್ಯಾರ್ಥಿಗಳ ಪೈಕಿ 33 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದರಿಂದ ಗ್ರಾಮದ ಶಾಲೆ ಅಳಿವಿನ ಅಂಚಿಗೆ ಹೋಗುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಎಸ್ಎಫ್ಐ ತಾಲೂಕು ಕಾರ್ಯದರ್ಶಿ ಪವನ್ ಕಮದಾಳ ಮಾತನಾಡಿ, “ಈ ಹಿಂದೆ ಬಿಇಒ ಅವರಿಗೆ ದೂರು ನೀಡಿದಾಗ ಆತನಿಗೆ ನಾವು ಏನೂ ಮಾಡೋಕೆ ಆಗುವುದಿಲ್ಲ. ಆತ ರಾಜಕೀಯ ಒತ್ತಡ ತರುತ್ತಾನೆ. ಆತನ ಸಮಸ್ಯೆ ಬಿಟ್ಟು ಬೇರೆ ಏನು ಬೇಕಾದರೂ ಹೇಳಿ ಎಂದು ಉಡಾಫೆ ಉತ್ತರ ನೀಡಿದ್ದರು. ಇಂತಹ ಬೇಜವಾಬ್ದಾರಿ ಅಧಿಕಾರಿಯಿಂದ ನಮ್ಮ ತಾಲೂಕಿನಲ್ಲಿ ಶಿಕ್ಷಣ ವ್ಯವಸ್ಥೆ ಹದಗೆಟ್ಟು ಹೋಗಿದೆ. ಆದ್ದರಿಂದ ಈ ಕೂಡಲೇ ಮುಖ್ಯಶಿಕ್ಷಕ ನಾಗನಗೌಡ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.

“ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಅಗತ್ಯ ಖಾಯಂ ಶಿಕ್ಷಕರನ್ನು ನೇಮಕ ಮಾಡಬೇಕು. ಶಾಲೆಗೆ ಬೇಕಾದ ಎಲ್ಲ ಅಗತ್ಯ ಮೂಲ ಸೌಕರ್ಯಗಳನ್ನು ನೀಡಬೇಕು” ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಪರವಾಗಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಲಿಂಗಸಗೂರು ತಾಲೂಕು ಮುಖಂಡರಾದ ವಿನಯ್ ಕುಮಾರ, ಮಹಾಲಿಂಗ, ಬಸವರಾಜ, ಒಡಕೇಶ್, ಶ್ರೀನಿವಾಸ್, ಕರಿಯಪ್ಪ ವಾಡಿಗೇರಿ, ವಿನೋದ್ ರಾಜ್, ಕೆಪಿಆರ್‌ಎಸ್ ತಾಲೂಕು ಮುಖಂಡ ನಿಂಗಪ್ಪ ಎಂ, ವಿವಿಧ ಸಂಘಟನೆಗಳ ಮುಖಂಡರಾದ ಅಣ್ಣಯ್ಯ, ಶಿವಶಂಕರ, ರಾಜು ನಾಯಕ, ಅಮರೇಶ, ಗ್ರಾಮಸ್ಥರಾದ ವೆಂಕಣ್ಣ ಕೋಲ್ಕರ್, ಶಿವು ಪಿ ಜಿ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...