ಶೌಚಾಲಯಕ್ಕೆ ತೆರಳಿದ್ದ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ 4 ವರ್ಷದ ಬಾಲಕಿ ಸಾವನ್ನಪ್ಪಿದ್ದು,ಇನ್ನೋರ್ವ 6 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು ಘಟನೆ ದೇವದುರ್ಗ ತಾಲ್ಲೂಕು ಗಲಗ ತಾಂಡದಲ್ಲಿ ನಡೆದಿದೆ.
ಸೂಲದಗುಡ್ಡ ಗ್ರಾಮದ ಅಂಜಲಿ (4) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಬಾಲಕಿ ರೂಪಾ (6) ಎಂದು ಗುರುತಿಸಲಾಗಿದ್ದು, ಆಕೆಯನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರು ಬಾಲಕಿಯರು ಒಂದೇ ಕುಟುಂಬದವರು. ಇಬ್ಬರು ಜೊತೆ ಸೇರಿ ಬಯಲು ಶೌಚಾಲಯಕ್ಕೆ ತೆರಳಿದ್ದರು. ಈ ವೇಳೆ ಹಾವು ಕಡಿದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದರು. ಜಾಲಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅತ್ಯಾಚಾರ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ
