ರಾಯಚೂರು | ಸಮಾಜ ಕಲ್ಯಾಣ ವಸತಿ ನಿಲಯಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು : ಡಿವಿಪಿ ಒತ್ತಾಯ

Date:

Advertisements

ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ಎಲ್ಲಾ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ವತಿಯಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಚಿದಾನಂದಪ್ಪ ಕುರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲೆಯ ಹಲವು ವಸತಿ ನಿಲಯಗಳಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ.ವಸತಿಗಳಲ್ಲಿ ಕುಡಿಯಲು ಶುಚಿಯಾದ ನೀರು ಸಿಗುತ್ತಿಲ್ಲ, ಪ್ರತಿ ತಿಂಗಳು ಪೇಪರ್ ಹಾಗೂ ಸ್ಪರ್ಧಾತ್ಮಕ ಮಾಸ ಪತ್ರಿಕೆಗಳು ಕೂಡ ಒದಗುತ್ತಿಲ್ಲ, ಮತ್ತು ಗ್ರಂಥಾಲಯಗಳು ಇಲ್ಲದೇ ಇದ್ದರೂ ಅದರಲ್ಲಿ ಪುಸ್ತಕಗಳು ದೊರಕದೆ ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟಾಗಿದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಆಗ್ರಹಿಸಿದರು.

ಎಲ್ಲಾ ವಸತಿ ನಿಲಯಗಳಲ್ಲಿ ದಿನಗೂಲಿ ನೌಕರರು ಹಾಗೂ ಅಡುಗೆ ಸಹಾಯಕರು ಮತ್ತು ಸಿಬ್ಬಂದಿಗಳನ್ನು ಟೆಂಡರ್ ಆಧಾರದಲ್ಲಿ ಅಥವಾ ಏಜೆನ್ಸಿ ಮುಖಾಂತರ ಆಯ್ಕೆಮಾಡಬೇಕು. ಅರ್ಹ ಫಲಾನುಭವಿಗಳನ್ನು ನೇಮಕ ಮಾಡುವಾಗ ಪತ್ರಿಕಾ ಪ್ರಕಟಣೆ ಹಾಗೂ ನೋಟಿಸ್ ಮತ್ತು ಜಾಹೀರಾತು ನೀಡುವ ನಿಯಮವಿದ್ದರೂ ಯಾವುದೇ ಅಧಿಕಾರಿಗಳು ಈ ನಿಯಮವನ್ನು ಪಾಲಿಸದೆ ತಮಗೆ ಬೇಕಾದವರಿಗೆ ಮಾತ್ರ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಮೆನು ಪಟ್ಟಿಯ ಪ್ರಕಾರ ಊಟವು ಮಕ್ಕಳಿಗೆ ಸಿಗುತ್ತಿಲ್ಲ ,ಹಾಜರಾತಿ ಮಾತ್ರ ನೂರಕ್ಕೆ ನೂರರಷ್ಟು ತಪ್ಪದೇ ಹಾಕಿಕೊಂಡು ವೇತನ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಗಳು ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಲು ಹಲವಾರು ಯೋಜನೆಗಳು ಜಾರಿಗೆ ತರುತ್ತಿದೆ ಹಲವಾರು ಇಂತಹ ಯೋಜನೆಗಳು ಸಮರ್ಪಕವಾಗಿ ವಿದ್ಯಾರ್ಥಿಯ ಜನರಿಗೆ ತಲುಪದೇ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ವಸತಿ ನಿಲಯಗಳು ಆಸ್ವಚ್ಚತೆ ತಾಂಡವಾಡಿವೆ.ತಕ್ಷಣ ಮೇಲಾಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಚರ್ಚಿಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸಬೇಕು.ಹೀಗೆ ಮುಂದುವರೆದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂವರು ಅಪ್ರಾಪ್ತ ಬಾಲಕರು ನಾಪತ್ತೆ

ಈ ವೇಳೆ ಜಿಲ್ಲಾಧ್ಯಕ್ಷ ಮೌನೇಶ್ ಜಾಲವಾಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾಲರಾಜ್ ಕುರ್ಡಿ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಕುಮಾರ ಬೈಲ್ ಮರ್ಚೆಡ್, ಅಶೋಕ್ ಜಾಲವಾಡಗಿ ಇನ್ನಿತರರು ಉಪಸ್ಥಿತರಿದ್ದರು .

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X