ರಾಯಚೂರು | ಬೈಪಾಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ಮನವಿ

Date:

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಬೆಂಗಳೂರು ಬೈಪಾಸ್ ರಸ್ತೆಯ ಕಾಮಗಾರಿ ತುಂಬಾ ನಿಧಾನಗತಿಯಲ್ಲಿ ಹಾಗೂ ಅಪೂರ್ಣವಾಗಿ ಅರ್ಧಕ್ಕೆ ನಿಂತಿದ್ದು, ಆದಷ್ಟು ಬೇಗ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

- Advertisement -

ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಓಡಾಡುತ್ತವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಈ ರಸ್ತೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಓಡಾಟ ಮಾಡುತ್ತಿದ್ದಾರೆ. ತ್ತೀಚೆಗೆ ಮಾನ್ವಿ ತಾಲೂಕಿನಲ್ಲಿ ನಡೆದ ಭೀಕರ ಅಪಘಾತ ಘಟನೆ ರಸ್ತೆ ಗುಂಡಿಗಳಿಂದ ಸಂಭವಿಸಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಆ ರೀತಿ ಘಟನೆಯಾಗದಂತೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಆ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸೋಲಿಡಾರಿಟಿ ಯೂತ್‌ ಮೂಮೆಂಟ್ ಕಾರ್ಯಕರ್ತರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತಾಲೂಕಿನ ಹಲವು ಕಡೆಗಳಲ್ಲಿ ಹದಗೆಟ್ಟ ರಸ್ತೆಗಳಿವೆ. ಅವುಗಳನ್ನು ಕೂಡಲೇ ದುರಸ್ತಿ ಮಾಡಬೇಕು. ಮುಖ್ಯ ರಸ್ತೆಗೆ ಇರುವ ಶಾಲೆ, ಆಸ್ಪತ್ರೆ, ಹತ್ತಿರ ಎಚ್ಚರಿಕೆ ಬೋರ್ಡ್ ಅಳವಡಿಸಿ, ರಸ್ತೆ ಕಾಮಗಾರಿ ಹೆಸರಿನಲ್ಲಿ ಬೋಗಸ್ ಬಿಲ್ ಬರೆದು ಸರ್ಕಾರದ ಹಣ ಲೂಟಿ ಮಾಡಿದ್ದಾರೆ. ಇದರ ಬಗ್ಗೆ ಸಿ.ಒ.ಡಿ ತನಿಖೆಯಾಗಬೇಕು. ಲೋಕೋಪಯೋಗಿ ಇಲಾಖೆಯಲ್ಲಿ ಅನೇಕರು ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂಥವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಸಂಪೂರ್ಣ ಹದಗೆಟ್ಟ ರಸ್ತೆ: ಶೀಘ್ರವೇ ದುರಸ್ತಿ ಪಡಿಸುವಂತೆ ಗ್ರಾಮಸ್ಥರು, ವಿದ್ಯಾರ್ಥಿಗಳ ಆಗ್ರಹ

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ಅಧ್ಯಕ್ಷ ಅಮ್ಮದ್ ಅಲಿ, ಮಹಾಂತೇಶ್ ಸ್ಪಂದನ ಶಾಲೆ, ದಾನಯ್ಯ ಜ್ಞಾನ ಗಂಗಾ ಶಾಲೆ, ಸೇವಿಯರ್ ಜೇಮ್ಸ್, ಅಬ್ದುಲ್ ಸಲಾಂ, ಅಬ್ದುಲ್ ನಾಯುಮ್, ಮೊಹಮ್ಮದ್, ಸೈಯದ್ ಮುನೀರ್, ಬಾಬಾ ಕೆ ಬಿ ಎನ್, ಅಹಮದ್ ಮೆಡಿಕಲ್, ಜಾವೇದ್, ಖಾಜಾ ಗೀರ್ಣಿ, ಪಾಷಾ ಗಿರ್ಣಿ, ನವಾಬ್, ಸಲೀಂ ಯೂನುಸ್, ಮೆಹಬೂಬ್, ರಾಜು, ಸದ್ದಾಂ, ವಾಹೀದ್, ಖಲೀಲ್, ಖಾಲಿದ್, ಆನಂದ, ಶಂಕರಪ್ಪ ಸೇರಿದಂತೆ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...