ರಾಯಚೂರು | ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Date:

Advertisements

ದರ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಬಡ ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ಸಂಘಟನೆ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರದ ಎನ್‌ಡಿಎ ಮತ್ತು ರಾಜ್ಯ ಕಾಂಗ್ರೆಸ್ ಸರಕಾರ ಮೇಲಿಂದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ನೋಡಿದರೆ ಜನರನ್ನು ಒಕ್ಕಲೆಬ್ಬಿಸುವ ಸರ್ಕಾರಗಳ ಹುನ್ನಾರವಾಗಿದೆ ಎಂದು ಕಿಡಿಕಾರಿದರು.

ಸಿಪಿಐಎಂಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿ, “ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆಯಾಗಿದ್ದು, ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರ ಇಂಧನದ ಬೆಲೆ ಏರಿಕೆ ಮೂಲಕ ಮತ್ತೊಮ್ಮೆ ಬರೆ ಎಳೆದಿದೆ. ಇಷ್ಟು ಪ್ರಮಾಣದ ಬೆಲೆ ಏರಿಕೆಯಾಗಿರುವುದು ಇದುವರೆಗಿನ ಇತಿಹಾಸದಲ್ಲಿಯೇ ಇಲ್ಲ.ಎರಡು ಸರ್ಕಾರಗಳು ಸೇರಿ ಮನಬಂದಂತೆ ಇಂಧನ ಬೆಲೆ ಹೆಚ್ಚಿಸುವುದರಿಂದ ಸಾರಿಗೆ, ಸರಕು ಸಾಗಣೆ, ವ್ಯಾಪಾರ ವಹಿವಾಟು, ಕೃಷಿ, ಕೈಗಾರಿಕೆ ಸೇರಿ ಇನ್ನಿತರೆ ವಲಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಜನಸಾಮಾನ್ಯರು ಮತ್ತಷ್ಟು ಸಂಕಷ್ಟ ಎದುರಿಸಬೇಕಿದೆ” ಎಂದು ಆಪಾದಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಕುರಿಗಾಯಿ ಸಾವು

“ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹಾಲು, ನೀರು, ವಿದ್ಯುತ್, ಡೀಸೆಲ್ ಮತ್ತು ಮೆಟ್ರೋ ದರ ಸೇರಿದಂತೆ ಹಲವಾರು ಅಗತ್ಯ ಸೇವೆಗಳ ಬೆಲೆ ಏರಿಕೆ ಮಾಡಿದೆ. ಜೊತೆಗೆ, ತ್ಯಾಜ್ಯ ಸಂಗ್ರಹ, ಟೋಲ್ ಶುಲ್ಕ ಮತ್ತು ಆಸ್ತಿ ತೆರಿಗೆಯ ಮೇಲಿನ ತೆರಿಗೆಗಳನ್ನೂ ಸಹ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯಿಂದ ಸರ್ಕಾರಗಳು ಬಡವರು ಮತ್ತು ಮಧ್ಯಮ ವರ್ಗದವರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಆರ್ಥಿಕ ನೀತಿಗಳು ಜಾರಿ ಮಾಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು” ಎಂದರು.

“ರಾಜ್ಯದಲ್ಲಿ ನಿರಂತರ ವಿಪರೀತ ಬೆಲೆ ಏರಿಕೆ, ಗಗನಕ್ಕೇರುತ್ತಿರುವ ನಿರುದ್ಯೋಗ ಬೆಲೆ ಏರಿಕೆಗಳು ಜನರ ಜೀವನೋಪಾಯವನ್ನು ಮತ್ತಷ್ಟು ಹಾಳು ಮಾಡುತ್ತವೆ. ಸರ್ಕಾರದ ಈ ನೀತಿ ಬಡ, ಮಧ್ಯಮ ವರ್ಗದವರ ಬದುಕುವ ಹಕ್ಕನ್ನು ಬಲವಂತವಾಗಿ ಕಿತ್ತುಕೊಳ್ಳುವುದಾಗಿದೆ. ಅಲ್ಲದೇ ಬಡವರ ಮೇಲೆ ಹೆಚ್ಚು ತೆರಿಗೆ ಹೇರಿ, ಶ್ರೀಮಂತರ ತೆರಿಗೆ ಮತ್ತು ಸಾಲ ಮನ್ನಾ ಮಾಡುವ ಹುನ್ನಾರದ ಭಾಗವಾಗಿದೆ. ಈ ಕೂಡಲೇ ಜನದ್ರೋಹಿ ನೀತಿಗಳನ್ನು ಕೈಬೀಡಬೇಕು” ಎಂದು ಆಗ್ರಹಿಸಿದರು.

ಸರಕಾರಿ ಒಡೆತನದ ಉಹಿಸಿ, ಬಿಪಿಸಿಎಲ್, ಎಚ್ ಪಿಸಿಎಲ್ ಕಂಪನಿಗಳ ಷೇರುಗಳು ಮಾರುಕಟ್ಟೆಯಲ್ಲಿದ್ದು,
ಖಾಸಗಿ ಕಂಪನಿಗಳು ಇಂಧನ ಮಾರಾಟ ಉದ್ಯಮದಲ್ಲಿರುವುದರಿಂದ ಕಚ್ಚಾತೈಲ ಬೆಲೆ ಕುಸಿದಾಗ ಅವೈಜ್ಞಾನಿಕ ಬೆಲೆ ಏರಿಕೆಯಿಂದ ದೇಶದ ಜನರ ಹಣವನ್ನು ಲೂಟಿ ಹೊಡೆಯುತ್ತವೆ. ಈ ನಡುವೆ ಕಚ್ಚಾ ತೈಲ ಬೆಲೆ ಕುಸಿದಾಗಲೂ ಜನಸಾಮಾನ್ಯರಿಗೆ ಯಾವುದೇ ಲಾಭ ಇಲ್ಲ, ಹೆಚ್ಚಾದಾಗ ಮಾತ್ರ ಅವರ ಮೇಲೆ ಹೊರೆ ಹಾಕುತ್ತ ಬರಲಾಗುತ್ತಿದೆ. ಕೊರೊನಾದಂತಹ ಬಿಗುವಿನ ವಾತಾವರಣದ ದುರ್ಲಾಭ ಪಡೆದು ಮನಬಂದಂತೆ ಇಂಧನ ಬೆಲೆ ಏರಿಕೆ ಮಾಡಿದ್ದಲ್ಲದೇ, ಕೇಂದ್ರದ ಎನ್ ಡಿ ಎ ಮತ್ತು ರಾಜ್ಯ ಸರಕಾರ ಜನವಿರೋಧಿ ನೀತಿಗಳನ್ನು ಜಾರಿಗೆಗೊಳಿಸಿದೆ. ಇದು ಖಂಡನಾರ್ಹ. ಹಾಗಾಗಿ ರೈತರು, ಕಾರ್ಮಿಕರು ಹಾಗೂ ಜನಸಾಮಾನ್ಯರಿಗೆ ಮಾರಕವಾಗಿರುವ ನೀತಿಗಳನ್ನು ಕೈಬಿಡಬೇಕು ಹಾಗೂ ಇಂಧನ ಬೆಲೆ ಏರಿಕೆಯನ್ನು ಸರಕಾರ ಇಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಜೀಜ್ ಜಾಗೀರದಾರ, ರವಿಚಂದ್ರನ, ಆರ್.ಎಚ್ ಕಲಮಂಗಿ, ಬಸವರಾಜ ಎಕ್ಕಿ, ಶ್ರೀ ನಿವಾಸ ಬುಕ್ಕನ್ನಟ್ಟಿ, ಅನೀಫ್ ಅಬಕಾರಿ, ಜಿಲಾನಿ, ಮೊಹಮ್ಮದ್ ಶಾಲಂ, ಪ್ರಕಾಶ್,ಬಸವರಾಜ ದೇವದುರ್ಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X