ರಾಯಚೂರು | ಹಿಂದುಳಿದ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತರಲು ಮುಂದಾಗಬೇಕು: ಅಪರ ಜಿಲ್ಲಾಧಿಕಾರಿ

Date:

Advertisements

ಕಂದಾಯ ಇಲಾಖೆಯಿಂದ ಅನುಷ್ಠಾನಗೊಳಿಸುವ ಬೆಳೆಹಾನಿ, ವಿಪತ್ತು ನಿರ್ವಹಣೆ ಸೇರಿದಂತೆ ಇತರೆ ಯೋಜನೆಗಳ ಸಾಧನೆಯಲ್ಲಿ ರಾಯಚೂರು ಜಿಲ್ಲೆಯ ಹೆಸರನ್ನು ಪ್ರಥಮ ಸ್ಥಾನಕ್ಕೆ ತರಲು ಎಲ್ಲ ಹಂತದ ಅಧಿಕಾರಿಗಳು ಒಗ್ಗೂಡಿ ಕೆಲಸ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಪ್ಪ ಯಲ್ಲಪ್ಪ ಭಜಂತ್ರಿ ಮನವಿ ಮಾಡಿದರು.

ರಾಯಚೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಹಿಂದುಳಿದ ಹಣೆಪಟ್ಟಿ ಕಟ್ಟಿಕೊಂಡಿರುವ ಜಿಲ್ಲೆಯನ್ನು ಪ್ರಥಮ ಹಂತಕ್ಕೆ ತರಲು ಎಲ್ಲ ಹಂತದ ಅಧಿಕಾರಿಗಳ ತೊಡಗುಸುವಿಕೆ ಮಹತ್ವದ್ದಾಗಿದೆ” ಎಂದು ಸಲಹೆ ನೀಡಿದರು .

Advertisements

“ಆನ್‌ಲೈನ್ ಮೂಲಕ ಜಾರಿಗೊಳಿಸಬೇಕಾದ ಯೋಜನೆಗಳಲ್ಲಿ ಗ್ರಾಮಲೆಕ್ಕಾಧಿಕಾರಿ, ಗ್ರಾಮಸೇವಕರಿಂದ ಹಿಡಿದು ವಿಭಾಗ ಮಟ್ಟದ ಎಲ್ಲ ಅಧಿಕಾರಿಗಳು ಒಗ್ಗೂಡಿ ಕಾರ್ಯ ನಿರ್ವಹಿಸದಲ್ಲಿ ರಾಜ್ಯದಲ್ಲಿಯೇ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತರುವುದರಲ್ಲಿ ಸಂಶಯವಿಲ್ಲ. ಆಧಾರ್ ಜೋಡಣೆಯಲ್ಲಿ ಈಗಾಗಲೇ ಪ್ರತಿಶತ 61 ರಷ್ಟು ಸಾಧನೆಯಾಗಿದ್ದು, ಅನೇಕರು ನೂರಕ್ಕೆ ನೂರರಷ್ಟು ಸಾಧನೆ ಸಾಧಿಸಿದ್ದೇವೆ” ಎಂದರು.

“ಬೆಳೆಹಾನಿ, ಪರಿಹಾರ ವಿತರಣೆ, ಕಂದಾಯ ದಾಖಲೆಗಳ ನಿರ್ವಹಣೆ ಒಳಗೊಂಡಂತೆ ಎಲ್ಲವನ್ನೂ ಆನ್‌ಲೈನ್ ಮೂಲಕ ನಿರ್ವಹಿಸುತ್ತಿರುವುದರಿಂದ ಮತ್ತಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುವ ಅವಶ್ಯಕತೆಯಿದೆ. ಯೋಜನೆಗಳ ಪ್ರಗತಿಯನ್ನು ದಾಖಲಿಸಲು ಏನೇ ಸಂಶಯಗಳಿದ್ದರೂ ಅವುಗಳನ್ನು ನಿವಾರಿಸಿಕೊಂಡು ನಿಗದತ ಗುರಿ ಸಾಧಿಸುವುದಕ್ಕೆ ಶ್ರಮಿಸಬೇಕು” ಎಂದು ಕರೆ ನೀಡಿದರು.

ತಹಶೀಲ್ದಾರ್ ಸುರೇಶ ವರ್ಮಾ ಮಾತನಾಡಿ, “ಕಂದಾಯ ಇಲಾಖೆ ಎಲ್ಲ ಇಲಾಖೆಗಳಿಗೆ ಮಾತೃ ಇಲಾಖೆಯಾಗಿದ್ದು, ಗ್ರಾಮ ಲೆಕ್ಕಿಗರಿಂದ ಹಿಡಿದ ಎಲ್ಲ ಹಂತದ ಅಧಿಕಾರಿಗಳೂ ಕೂಡಾ ಕೆಲಸ ನಿರ್ವಹಿಸುತ್ತಿದ್ದಾರೆ. ಮತ್ತಷ್ಟು ಚುರುಕಾಗಿ ಕಾರ್ಯನಿರ್ವಹಿಸಿದಲ್ಲಿ ಜಿಲ್ಲೆ ರ‍್ಯಾಂಕಿಂಗ್ ಬದಲಾಗಲು ಸಾಧ್ಯವಿದೆ. ಭೂಮಿ ತಂತ್ರಾಂಶ ಸೇರಿದಂತೆ ವಿಪತ್ತು ನಿರ್ವಹಣೆ, ಬೆಳೆ ಪರಿಹಾರ, 1-5 ದಾಖಲೆಗಳ ನಿರ್ವಹಣೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ” ಎಂದರು.

ಕಾರ್ಯಾಗಾರದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದರು ವೇದಿಕೆಯಲ್ಲಿ ಸಹಾಯಕ ಆಯುಕ್ತೆ ಮಹಿಬೂಬಿ, ತಹಸೀಲ್ದಾರರುಗಳಾದ ಚನ್ನಪ್ಪ ಘಂಟಿ ಸೇರಿದಂತೆ ವಿವಿಧ ತಾಲೂಕಿನ ತಹಸೀಲ್ದಾರರು, ಗ್ರಾಮಲೆಕ್ಕಾಧಿಕಾರಿಗಳು, ಶಿರೆಸ್ತೇದಾರರು, ಕಂದಾಯ ನಿರೀಕ್ಷಕರು ಭಾಗಿಯಾದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X