ರಾಯಚೂರು | ಬೀಡಾಡಿ ದನಗಳ ಹಾವಳಿ; ಸ್ಥಳೀಯರಿಗೆ ಕಿರಿಕಿರಿ

Date:

Advertisements

ರಾಯಚೂರು ನಗರದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಅಡ್ಡಾದಿಡ್ಡಿಯಾಗಿ ತಿರುಗಾಡುವುದರಿಂದ ತರಕಾರಿ ವ್ಯಾಪಾರಿಗಳಿಗೆ, ಹಣ್ಣು ಹಂಪಲ ವ್ಯಾಪಾರಸ್ಥರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆ ಎದುರಾಗಿದೆ.

“ನಗರದ ಮುಖ್ಯ ರಸ್ತೆಗಳಲ್ಲಿ, ಕೇಂದ್ರ ಬಸ್ ನಿಲ್ದಾಣದಿಂದ ತೀನ್ ಖಂದಿಲ್ ಹೋಗುವ ರಸ್ತೆ, ಸ್ಟೇಶನ್ ರಸ್ತೆ, ಗಂಜ್ ರಸ್ತೆ ಸೇರಿದಂತೆ ಮಾರ್ಕೆಟ್ ಮುಂಭಾಗ ಸೇರಿ ಪ್ರಮುಖ ರಸ್ತೆಗಳಲ್ಲಿ ಬೀಡಾಡಿ ದನಗಳು ಅಡ್ಡಾದಿಡ್ಡಿಯಾಗಿ ಓಡಾಡುತ್ತವೆ. ಹಲವು ಬಾರಿ ವಾಹನ ಸವಾರರ ಮೇಲೆ ದಾಳಿ ಮಾಡಿದ್ದು, ಬೀಡಾಡಿ ದನಗಳಿಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ” ಎಂದು ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದರು.

“ರಾಯಚೂರು ನಗರಸಭೆಯಿಂದ ಜುಲೈ 11ರಂದು ಆದೇಶ ನೀಡಿ 24 ತಾಸಿನೊಳಗೆ ದನಗಳನ್ನು ಸುಪರ್ದಿಗೆ ಪಡೆಯಲು ಹೇಳಿತ್ತು.‌ 26 ದಿನಗಳಾದರೂ ಒಂದೇ ಒಂದು ಬೀಡಾಡಿ ದನವನ್ನು ಹಿಡಿದು ಗೋಶಾಲೆಗೆ ಒಪ್ಪಿಸುವ ಕಾರ್ಯಾಚರಣೆ ನಡೆದಿಲ್ಲ” ಎಂದು ವ್ಯಾಪಾರಸ್ಥರು ಆರೋಪಿಸಿದರು.

Advertisements

“ಬೀಡಾಡಿ ದನಗಳು ರಾತ್ರಿ ಹಗಲೆನ್ನದೆ ರಸ್ತೆಯ ಮೇಲೆ ಮಲಗಿರುವುದರಿಂದ ಅಪಘಾತಗಳು ಸಂಭವಿಸಿ ಹಲವಾರು ದ್ವಿಚಕ್ರ ವಾಹನ ಸವಾರರು ಗಾಯಗೊಂಡಿದ್ದಾರೆ. ಈ ಕುರಿತು ಎಚ್ಚರ ವಹಿಸಬೇಕಾದ ಪೊಲೀಸ್‌ ಇಲಾಖೆ ಮತ್ತು ನಗರಸಭೆ ನಿದ್ರೆಗೆ ಜಾರಿದೆ. ಬೀದಿ ಬದಿಯ ವ್ಯಾಪಾರಿಗಳು ಬೀಡಾಡಿ ದನಗಳ ಹಾವಳಿಗೆ ತತ್ತರಿಸಿ ಹೋಗಿದ್ದಾರೆ” ಎಂದು ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚಿಗೆ ಪಶು ಪಶುಪಾಲನೆ ಇಲಾಖೆ ಸಚಿವ ವೆಂಕಟೇಶ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಒಂದು ಬಾರಿ ಮಾಲೀಕರಿಗೆ ನೋಟೀಸ್ ನೀಡಿ ಎರಡನೇ ಬಾರಿಗೆ ಗೋಶಾಲೆಗೆ ಹಾಕುವುದಕ್ಕೆ ನಿರ್ದೇಶನ ನೀಡಿದ್ದಾರೆ. ಸಭೆ ನಡೆಸಿ ಒಂದು ವಾರವಾದರೂ ನಗರಸಭೆ ಅಧಿಕಾರಿಗಳು ಬೀಡಾಡಿ ದನಗಳ ನಿಯಂತ್ರಣ ಮಾಡಲು ಮುಂದಾಗುತ್ತಿಲ್ಲ.

ದ್ವಿಚಕ್ರ ವಾಹನ ಓಡಿಸುವಾಗ ಬೀಡಾಡಿ ದನ ಢಿಕ್ಕಿಯಾಗಿ ಅಪಘಾತ ಎದುರಿಸಿದ ಅಜೀಜ್ ಜಾಗಿರದಾರ ಈ‌ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬೀಡಾಡಿ ದನಗಳ ಹಾವಳಿಯಿಂದ ಜನರು, ವ್ಯಾಪಾರಸ್ಥರು ಸೋತು ಹೋಗಿದ್ದಾರೆ. ನಾನು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ದನಗಳ ಗುಂಪು ಅಡ್ಡಾದಿಡ್ಡಿ ರಸ್ತೆ ಮೇಲೆ ಬಂದವು. ಇದರಿಂದ ನನ್ನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತು. ಹೀಗೆ ನಿತ್ಯ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಅಪಘಾತದಿಂದ ಎಷ್ಟೋ ದನಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇದನ್ನು ಸಂಬಂಧಪಟ್ಟ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಆದಷ್ಟು ಬೇಗ ಎಚ್ಚೆತ್ತುಕೊಂಡು ಕಡಿವಾಣ ಹಾಕಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕನ್ನಡ ಸಾಹಿತ್ಯ ಪರಿಷತ್;‌ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾ‌ರ್ ನೇಮಕ

ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಾರ್ವಜನಿಕರಿಗೆ ನೋಟಿಸ್ ನೀಡಿ ಒಂದು ವಾರದಲ್ಲಿ ಬೀಡಾಡಿ ದನಗಳನ್ನು ಗೋಶಾಲೆಗೆ ಒಪ್ಪಿಸುವ ಕೆಲಸ ಮಾಡಲಾಗುವುದು” ಎಂದು ಭರವಸೆ ನೀಡಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X