ಆಗಸ್ಟ್ 24 ರಂದು ಬೆಳಿಗ್ಗೆ 10 ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅರ್ಚನಾ ಸುಂಕಾರಿ ತಿಳಿಸಿದರು.
ಅವರಿಂದು ಸುದ್ದಿಗೋಷ್ಠಿ ಮಾತನಾಡಿ, ಛಲವಾದಿ ಸಮಾಜದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 70 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಸಮಾಜದ ವಿದ್ಯಾರ್ಥಿಗಳನ್ನು ಹೆಚ್ಚಿನ ಮಟ್ಟದಲ್ಲಿ ಸಾಧನೆ ಮಾಡಲು ಪ್ರೋತ್ಸಾಹಿಸುವ ದೃಷ್ಟಿಯಿಂದ ಮಹಿಳಾ ಘಟಕದಿಂದ ಈ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿಭಾವಂತ ಸಮುದಾಯ ವಿದ್ಯಾರ್ಥಿಗಳು ಆಗಸ್ಟ್ 17 ರ ಒಳಗಾಗಿ ದೂರವಾಣಿ ಸಂಖ್ಯೆ 9353659741, 9611308882, 9113677939, 8867465204 ಸಂಪರ್ಕಿಸಿ ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಹೆಸರನ್ನು ನೋಂದಾಯಿಸಬೇಕೆಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ
ಗೋಷ್ಠಿಯಲ್ಲಿ ಛಲವಾದಿ ಮಹಾಸಭಾ ಮಹಿಳಾ ಘಟಕ ಪದಾಧಿಕಾರಿಗಳಾದ ಲಲಿತಾ ಅರೋಲಿಕರ್, ಸಾವತ್ರಿ ಪುಲಿ, ಜಯಶ್ರೀ ಮಾರೆಪ್ಪ , ಮೀನಾಕ್ಷಿ , ಪ್ರಿಯದರ್ಶಿನಿ ನಂದಿನಿ,ಸುಜಾತ ದಾದಸ್, ನಾಗರತ್ನ ಆರ್ ಉಪಸ್ಥಿತರಿದ್ದರು
