ರಾಯಚೂರು | ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಬೆಂಬಲಿಸಲು ಮನವಿ

Date:

ಸಂವಿಧಾನ ಸಂಪೂರ್ಣ ಜಾರಿಗೆ ಹಿಂದೇಟು ಹಾಕುತ್ತಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಸೋಲಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎನ್. ಮೂರ್ತಿ ಮನವಿ ಮಾಡಿದರು.

- Advertisement -

ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ದಲಿತ, ಕಾರ್ಮಿಕರ, ರೈತರ ವಿರೋಧಿಯಾಗಿ ನಡೆದುಕೊಳ್ಳುತ್ತಲಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ದಿ ಹೆಸರಿನಲ್ಲಿ ಅನ್ಯಾಯ ಮಾಡುತ್ತಲೇ ಬಂದಿವೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು ಹಣ, ಹೆಂಡ, ಆಮಿಷೆಗಳಿಗೆ ಬಲಿಯಾಗದೇ ಶೇ.80 ರಷ್ಟು ಇರುವ ಶೋಷಿತ ಸಮುದಾಯಗಳು ಆರ್‌ಪಿಐ ಪಕ್ಷದ  ಚಿಹ್ನೆ ಪೆನ್ನು ಗುರುತಿನ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಲದ ಹಣದಲ್ಲಿ ಬಜೆಟ್ ಮಂಡಿಸಿ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುತ್ತಲಿವೆ. ದೇಶದ ಸಾಲ 188 ಲಕ್ಷ ಕೋಟಿಯಾಗಿದ್ದರೆ, ರಾಜ್ಯ ಸರ್ಕಾರದ ಸಾಲ 5.65 ಲಕ್ಷ ಕೋಟಿಯಾಗಿದೆ. ವಜ್ರ, ಚಿನ್ನ ,ಬೆಳ್ಳಿಗೆ ತೆರಿಗೆ ಇಳಿಸಿರುವ ಕೇಂದ್ರ ಸರ್ಕಾರ ಬಡವರು ಉಣ್ಣುವ ಹಾಲು, ಮೊಸರು, ರಸಗೊಬ್ಬರ, ಇಂಧನಗಳ ತೆರಿಗೆ ಹೆಚ್ಚಿಸಿದೆ. ದೇಶದಲ್ಲಿ 9 ಕೋಟಿ  ಜನರು ಹಸಿವಿನಿಂದ ಸಾಯುತ್ತಿದ್ದಾರೆ. 67 ಲಕ್ಷ ಮಕ್ಕಳು ಒಪ್ಪೊತ್ತಿನ ಊಟವಿಲ್ಲದ ಸ್ಥಿತಿಯಲ್ಲಿದ್ದಾರೆ. 60 ಲಕ್ಷ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ರದ್ದುಗೊಳಿಸಲಾಗಿದೆ. ರೈತರ ಮೂರು ಕಾಯ್ದೆಗಳನ್ನು ರದ್ದುಗೊಳಿಸಿದ್ದರೂ ಅಧಿಕೃತವಾಗಿ ರೈತರ ರಕ್ಷಣೆಗೆ ಮುಂದಾಗುತ್ತಿಲ್ಲ ಎಂದು ದೂರಿದರು.

ಇನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನದ 11 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗೆ ಬಳಿಸಿಕೊಂಡು ಪರಿಶಿಷ್ಟ ಅಭಿವೃದ್ದಿ ಬದ್ದವೆಂದು ಹೇಳುತ್ತಲಿದೆ. ಅನುದಾನ ಅನ್ಯ ಕಾರ್ಯಗಳಿಗೆ ಬಳಸದಂತೆ ಕಾಯ್ದೆ ತಂದಿರುವುದಾಗಿ ಹೇಳುವ ಸರ್ಕಾರವೇ ಬೇರೆ ಯೋಜನೆಗಳಿಗೆ ಅನುದಾನ ಬಳಸಿದೆ. ವಸತಿ ನಿಲಯಗಳ ಅವ್ಯವಸ್ಥೆ ಸರಿಪಡಿಸುತ್ತಿಲ್ಲ. ಶಿಷ್ಯವೇತನ ನೀಡುತ್ತಿಲ್ಲ. ಮುಖ್ಯಮಂತ್ರಿಗಳ ಗಮನಕ್ಕೆ ತಂದರೂ, ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಕಾಂಗ್ರೆಸ್-ಬಿಜೆಪಿ ಪಕ್ಷಗಳಿಂದ ಡಾ. ಬಿ.ಆರ್. ಅಂಬೇಡ್ಕರ ಕನಸು ನನಸು ಮಾಡಲು ಸಾಧ್ಯವಿಲ್ಲ ಎಂದರು.

ಎರಡು ಪಕ್ಷಗಳನ್ನು ತಿರಸ್ಕರಿಸಿ ಪರ್ಯಾಯ ರಾಜಕೀಯಕ್ಕಾಗಿ ಆರ್‌ಪಿಐ ಬೆಂಬಲಿಸಬೇಕೆಂದರು. ಪರಿಶಿಷ್ಟರ ಕಲ್ಯಾಣಕ್ಕಾಗಿ ಮಾಡಿರುವ ಖರ್ಚು ವೆಚ್ಚದ ಕುರಿತ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

ಜನರಲ್ಲಿ ಜಾಗೃತಿ ಮೂಡಿಸಲು ನಾಲ್ಕು ತಂಡಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭೀಮ ಜಾಥಾ ಪ್ರಾರಂಭಿಸಿದೆ. ಆ.27ರಂದು ರಾಯಚೂರು ಜಿಲ್ಲೆಗೆ ಜಾಥಾ ಆಗಮಿಸಲಿದೆ. ಏ.15ರಂದು ದಲಿತ ಸಂಘರ್ಷ ಸಮಿತಿಯ 50ನೇ ವರ್ಷ ವಜ್ರಮಹೋತ್ಸವ ಐತಿಹಾಸಿಕ ಸಮಾವೇಶ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಬುದ್ದಿಜೀವಿಗಳು, ಪ್ರಗತಿಪರರು, ಸಾಹಿತಿಗಳು, ಹೋರಾಟಗಾರರು ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಹುಜನರ ಒಲುವು ನಿಲುವು ಕುರಿತು ಚರ್ಚಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಅಶೋಕ್ ನಂಜಲದಿನ್ನಿ, ಎಂ. ಮನೋಹರ, ಬಷೀರ್ ಅಹ್ಮದ್, ಬಸವರಾಜ, ರಂಗಪ್ಪ ಕೋತಿಗುಡ್ಡ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...