ರಾಯಚೂರು | ಸ್ವಾಭಿಮಾನಿ ಸಮಾವೇಶದ ಮೂಲಕ ಸಿಎಂಗೆ ಬೆಂಬಲ : ಕೆ. ಶಾಂತಪ್ಪ

Date:

Advertisements

ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ವಿರುದ್ದ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಹಿಂದುಳಿದ ವರ್ಗ ಸಮಾಜ ಬೆಂಬಲವಾಗಿ ಅ.5ರಂದು ಮಾನ್ವಿಯಲ್ಲಿ ಸ್ವಾಭಿಮಾನಿ ಸಮಾವೇಶ ನಡೆಯಲಿದೆ. ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಶಾಂತಪ್ಪ ಹೇಳಿದರು.

ರಾಯಚೂರು ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕ ಆಡಳಿತದಿಂದ ಸಹಿಸದೆ ಹೊಟ್ಟೆಕಿಚ್ಚು ಪಡುತ್ತಿರುವ ಕೆಲ ಹಿತಾಸಕ್ತಿಗಳು ಸುಳ್ಳು ಆರೋಪ ಮಾಡಿ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಳ್ಳುತ್ತಿವೆ. ಸುದೀರ್ಘ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಆಡಳಿತ ನಡೆಸಿರುವ ಹಿಂದುಳಿದ ವರ್ಗದ ನಾಯಕನಿಗೆ ಬೆಂಬಲವಾಗಿ ಹಿಂದುಳಿದ ಸಮಾಜಗಳು ಗಟ್ಟಿಯಾಗಿ ಸ್ವಾಭಿಮಾನಿ ಸಮಾವೇಶದ ಮೂಲಕ ಬೆಂಬಲ ನೀಡಲು ಸಮುದಾಯಗಳು ನಿರ್ಧರಿಸಿವೆ ಎಂದರು.

IMG 20241003 WA0005

ಹಿಂದುಳಿದ ವರ್ಗಗಳ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸುವದು. ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸುವುದು ಹಾಗೂ ರಾಯಚೂರಿನಲ್ಲಿ ದೇವರಾಜ ಭವನ , ಪುತ್ಥಳಿ ನಿರ್ಮಾಣ ಮಾಡಲು ಮುಖ್ಯರಸ್ತೆಗೆ ಹೊಂದಿಕೊಂಡಂತೆ ಎರಡು ಎಕರೆ ಭೂಮಿ ಮಂಜೂರು ಮಾಡುವ ಕುರಿತು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಲಾಗುತ್ತದೆ. ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಗೆ ಹೆಚ್ಚಿನ ಅನುದಾನ ಒದಗಿಸಲು ವಿನಂತಿಸಲಾಗುತ್ತದೆ ಎಂದರು.

Advertisements

ಇದನ್ನು ಓದಿದ್ದೀರಾ? ಮುಂದಿನ 5 ವರ್ಷಗಳಲ್ಲಿ ಭಾರತದ ತಲಾ ಆದಾಯವು 2,000 ಡಾಲರ್‌ಗಳಷ್ಟು ಹೆಚ್ಚುತ್ತದೆ: ನಿರ್ಮಲಾ ಸೀತಾರಾಮನ್

ಕಳೆದ ನಾಲ್ಕು ವರ್ಷಗಳಿಂದ ಹಿಂದುಳಿದ ಜಾತಿ ಒಕ್ಕೂಟ ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಮುಖ್ಯಮಂತ್ರಿಗಳು ಸೇರಿ ಅನೇಕ ಸಚಿವರಿಗೆ ಮನವಿ ಮಾಡಲಾಗಿದೆ. ಮತ್ತೊಮ್ಮೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.

ಕೆಪಿಎಸ್‌ಸಿ ಮಾಜಿ ಸದಸ್ಯ ಶ್ರಿಕಾಂತರಾವ್ ಮಾತನಾಡಿ, ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಗೆ ಅನುದಾನ ನೀಡುವಲ್ಲಿ ತಾರತಮ್ಯವಾಗಿದೆ. ಸಮರ್ಪಕ ಅನುದಾನ ನೀಡಲು ಸಿಎಂ ಬಳಿ ಮನವಿ ಮಾಡುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಕೆ.ಬಸವಂತಪ್ಪ, ಜಂಬಣ್ಣ ಯಕ್ಲಾಸಪುರು, ಖಾಜನಗೌಡ, ಕೆ.ಪಂಪಾಪತಿ, ಸುರೇಖಾ, ಈರಣ್ಣ ಹೂಗಾರ, ಪಾಗುಂಟಪ್ಪ, ಆಂಜಿನೇಯ್ಯ ಯಾದವ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X