ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸೆಂಟರ್ ಫಾರ್ ಎಂಪ್ಲಾಯ್‌ಮೆಂಟ್ ಅಪಾರ್ಚುನಿಟಿ ಮತ್ತು ಲರ್ನಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಉದ್ಘಾ ಟಿಸಿ ಮಾತನಾಡಿದರು. ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ನೀಡುತ್ತಿದ್ದು, ಇದು ವಿದ್ಯಾರ್ಥಿಗಳ ಜೀವನದಲ್ಲಿ ಮುಖ್ಯ ಘಟ್ಟವಾಗಿದೆ, ಉದ್ಯೋಗ ಅವಕಾಶ ಮಾಹಿತಿ ಪಡೆದುಕೊಂಡು ತಮ್ಮ ಜೀವನ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ರಾಜ್ಯದಲ್ಲಿ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಈ ಕೇಂದ್ರವನ್ನು ಸ್ಥಾಪಿಸಿದ್ದು, ಜಿಲ್ಲೆಯ ಪದವಿ ಹಂತದ ಯುವಕರು, ಯುವತಿಯರು ಹಾಗೂ ನಿರುದ್ಯೋಗಿಗಳಿಗೆ ಸಾಕಷ್ಟು ಉದ್ಯೋಗದ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಲು ಸಂಸ್ಥೆ ಮುಂದೆ ಬಂದಿದೆ ಎಂದರು.
ಯುವಕರು ಯವತಿಯರಿಗೆ ತರಬೇತಿ ಮತ್ತು ಉದ್ಯೋಗ ಮೇಳದಲ್ಲಿ ಭಾಗವಹಿಸಲು ತರಬೇತಿ ನೀಡಲು ಆಯೋಜಿಸಿದೆ. ಇದು ಕೋವಿಡ್ ಸಂದರ್ಭದಲ್ಲಿ ಬಂದ್ ಮಾಡಲಾಗಿತ್ತು. ಇದೀಗ ಸಂಸ್ಥೆವೊಂದು ಮುಂದೆ ಬಂದಿದೆ. ಈ ಸಂಸ್ಥೆಯಿಂದ ಸಿಎಸ್‌ಆರ್ ಅನುದಾನದಡಿ ಸೆಂಟರ್ ಫಾರ್ ಎಂಪ್ಲಾಯ್‌ಮೆಂಟ್ ಅಪಾರ್ಚುನಿಟಿ ಮತ್ತು ಲರ್ನಿಂಗ್ ಆರಂಭಿಸಿದೆ. ಈ ಸಂಸ್ಥೆ ಸಾಕಷ್ಟು ತರಬೇತಿ ನೀಡಿದ್ದಾರೆ. ಒಂದು ಉತ್ತಮ ವೇದಿಕೆ ಒದಗಿಸಿದೆ. ಇಲ್ಲಿ 25 ಕಂಪ್ಯೂಟರ್ ವ್ಯವಸ್ಥೆ ಮಾಡಿದ್ದು, ಪ್ರತಿದಿನ ಇಲ್ಲಿಗೆ ಬಂದು ತರಬೇತಿ ಮತ್ತು ಮಾಹಿತಿ ಪಡೆದುಕೊಳ್ಳಲು ತಿಳಿಸಿದರು.
ಉದ್ಯೋಗದಾರಿತ ಮಾಹಿತಿ ನೀಡುತ್ತಿದೆ, ಬೇರೆ ಕಡೆ ಹೋಗಿ ಕೆಲಸ ಮಾಡಲು ಅವಕಾಶಗಳಿದ್ದು, ಇಲ್ಲಿ ಮಾಹಿತಿ ಮತ್ತು ತರಬೇತಿ ಪಡೆಯಬಹುದಾಗಿದೆ. ಉತ್ತಮ ಕೆಲಸವನ್ನು ಪಡೆಯುವುದರ ಮೂಲಕ ತಮ್ಮ ಜೀವನ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಮಾತನಾಡಿ, “ಮಹಿಳೆಯರು ಜೀವನದ ಮುಂದೆ ಬರಲು, ಇರುವ ಅವಕಾಶ ಹುಡಿಕೊಂಡು ಹೋಗಬೇಕು, ಇಲ್ಲಿಯೇ ಇದ್ದು ಏನು ಸಾಧಿಸಲಾರರು, ಬೇರೆ ಕಡೆ ಹೋಗಿ ಕೆಲಸ ಮಾಡಿದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ” ಎಂದರು.
“ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಇಲ್ಲಿಗೆ ಬಂದು ಮಾಹಿತಿ ಪಡೆಯುವುದರ ಜೊತೆಗೆ ಉದ್ಯೋಗದ ಅವಕಾಶಗಳನ್ನು ಹುಡುಕಿಕೊಂಡು ಹೋಗಬೇಕು. ಮಾಹಿತಿ ತಂತ್ರಜ್ಞಾನ ಬೆಳೆಯುತ್ತಿದೆ. ನಾವು ಬೆಳೆಯಬೇಕು. ರಾಜ್ಯದಲ್ಲಿ ಸಾಕಷ್ಟು ಅವಕಾಶಗಳಿವೆ, ತರಬೇತಿ ಮತ್ತು ಮಾಹಿತಿ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬಹುದು” ಎಂದರು.
“ಈ ಭಾಗದಲ್ಲಿ ಇಂಡಸ್ಟ್ರೀಸ್‌ಗಳಿದ್ದು ಹೆಚ್ಚಿನ ಆದ್ಯತೆ ಈ ಸಂಸ್ಥೆಗೆ ನೀಡಿದೆ. ಈ ಸಂಸ್ಥೆಯಿಂದ ಸಾಕಷ್ಟು ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಮಾತನಾಡುವ ಕಲೆ ಬೆಳೆಸಿಕೊಳ್ಳಬೇಕು, ಮಾತೃಭಾಷೆಯ ಜೊತೆಗೆ ಇಂಗ್ಲಿಷ್ ಭಾಷೆ ಕಲಿತರೆ ಹೆಚ್ಚಿನ ಅವಕಾಶಗಳಿವೆ. ಕಂಪ್ಯೂಟರ್ ತರಬೇತಿ ಪಡೆಯಬೇಕು, ಉದ್ಯೋಗ ಕಲ್ಪಿಸುವ ಉದ್ದೇಶದಿಂದ ತರಬೇತಿ ನೀಡಲಾಗುತ್ತಿದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಈರೇಶ ನಾಯಕ, ಸಂಸ್ಥೆಯ ಅಧಿಕಾರಿ ಪಂಕಜ್, ಬೆಂಗಳೂರು, ಲರ್ನಿಂಗ್ ಫೌಂಡೇಶನ್ ಮಂಜುನಾಥ ಸೇರಿದಂತೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಇದ್ದರು.
