ರಾಯಚೂರು | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಕೈಗೊಳ್ಳಿ: ಬಸನಗೌಡ ದದ್ದಲ್‌

Date:

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಆಭಾವ ಉಂಟಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ರಾಯಚೂರು ನಗರದ ಗ್ರಾಮೀಣ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬೇಸಿಗೆ ಕಾಲ ಆರಂಭವಾಗಿದ್ದು, ನಾಲ್ಕು ತಿಂಗಳುಗಳ ಕಾಲ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರಿನ ಅಭಾವವಾಗಾದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.

“ಆರ್‌ಡಬ್ಲ್ಯೂಎಸ್ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಒಟ್ಟಾಗಿ ಸೇರಿ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ, ಕ್ಯಾಂಪ್‌ಗಳಲ್ಲಿ ಕೂಡಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಟ್ಯಾಂಕರ್ ಮಾಲೀಕರ ಜೊತೆ ಮಾತನಾಡಿ, ದರ ನಿಗದಿ ಮಾಡಿ ಅವುಗಳಿಗೆ ಜಿಪಿಎಸ್ ಅಳವಡಿಸಬೇಕು. ಗ್ರಾಮಗಳ ಜನರಿಗೆ ನೀರೊದಗಿಸುವ ಕೆಲಸ ಮಾಡನೇಕು” ಎಂದರು.

“ಅಗತ್ಯವಿದ್ದ ಕಡೆ ಖಾಸಗಿ ಬೊರ್‌ವೆಲ್ ಮಾಲೀಕರ ಜತೆಗೆ ಮಾತನಾಡಿ ಅವರ ಗ್ರಾಮಗಳ ಜನರಿಗೆ ಕುಡಿಯುವ ನೀರು ಒದಗಿಸಬೇಕು. ಬೋರ್‌ವೆಲ್ ಮಾಲೀಕರೊಂದಿಗೆ ಲೀಜ್ ಅಗ್ರಿಮೆಂಟ್ ಮಾಡಿಕೊಂಡು ಜನರಿಗೆ ನೀರು ಒದಗಿಸಬೇಕು. ಕೃಷ್ಣ ಮತ್ತು ತುಂಗಭದ್ರಾ ನದಿಗಳಲ್ಲಿ ಕೂಡ ನೀರು ಬತ್ತಿ ಹೋಗಿದೆ. ಜಲಮೂಲಗಳೂ ಕೂಡ ಬತ್ತಿ ಹೋಗಿವೆ. ಹಾಗಾಗಿ ನದಿ ಪಾತ್ರದ ಜನರಿಗೆ ನೀರಿನ ಆಭಾವವಾಗದಂತೆ ನೋಡಿಕೊಳ್ಳಬೇಕು” ಎಂದರು.

“ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಸಹಾಯವಾಣಿ ಆರಂಭಿಸಬೇಕು. ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಪಟ್ಟಿಯನ್ನು ಸಿದ್ಧಪಡಿಸಿ ತಾಲೂಕಿನ ಅಧಿಕಾರಿಗಳಿಗೆ ನೀಡಬೇಕು. ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಮೊದಲು ಕುಡಿಯುವ ನೀರು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತ ಮಾರುಕಟ್ಟೆ ಕರ ವಸೂಲಿಗೆ ಟೆಂಡರ್; ನಿಯಮ ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲು 

ಸಭೆಯಲ್ಲಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಷೀರ್ ಅಹ್ಮದ್, ಸಹಾಯಕ ಆಯುಕ್ತ ಸುಭಾಷ್, ತಹಶೀಲ್ದಾರ್ ಸುರೇಶ್ ವರ್ಮಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...