ರಾಯಚೂರು | ಮಾ.6 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Date:

Advertisements

ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾ.6 ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ ಹೇಳಿದರು.

“ಮಾ.6 ರಂದು ಬೆಳಗ್ಗೆ 8:30ಕ್ಕೆ ಸಮ್ಮೇಳನಧ್ಯಕ್ಷರ ಮೆರವಣಿಗೆಗೆ ಮಹಾಪೌರರಾದ ನರಸಮ್ಮ ನರಸಿಂಹಲುಮಾಡಗಿರಿ ಚಾಲನೆ ನೀಡಲಿದ್ದಾರೆ. ನಂತರ ರಂಗಮಂದಿರದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದ ಸಾನಿಧ್ಯವನ್ನು ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರ ವಹಿಸಲಿದ್ದು, ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ, ನಗರ ಶಾಸಕ ಡಾ.ಶಿವರಾಜ ಪಾಟೀಲ್ ನೇತೃತ್ವದಲ್ಲಿ ನಡೆಯಲಿರುವ ಸಮ್ಮೇಳನವನ್ನು ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾಡೋಜ ಗೊ.ರು ಚನ್ನಬಸಪ್ಪ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಸಂಸದ ಜಿ.ಕುಮಾರನಾಯಕ ಬಿಡುಗಡೆಗೊಳಿಸಲಿದ್ದಾರೆ. ಚಿತ್ರಕಲಾ ಪ್ರದರ್ಶನವನ್ನು ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಉದ್ಘಾಟಿಸಲಿದ್ದಾರೆ. ಪುಸ್ತಕ ಮಳಿಗೆಗಳನ್ನು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಉದ್ಘಾಟಿಸಲಿದ್ದಾರೆ. ಹೊಸ ಕೃತಿಗಳನ್ನು ರಂಗಣ್ಣ ಪಾಟೀಲ್ ಅಳ್ಳುಂಡಿ ಬಿಡುಗಡೆಗೊಳಿಸಲಿದ್ದಾರೆ” ಎಂದು ಅವರು ಮಾಹಿತಿ ನೀಡಿದರು.

ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ನರಸಿಂಹಲು ಮಾಡಗಿರಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಹನುಮಂತಪ್ಪ, ಮಾಜಿ ಶಾಸಕ ಎ.ಪಾಪಾರೆಡ್ಡಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ನಂತರ ತಾಲೂಕ ಸಾಹಿತ್ಯ, ಸಂಸ್ಕೃತಿ ವಿಷಯವಾಗಿ ವಿಚಾರಗೋಷ್ಟಿ ನಡೆಯಲಿದೆ. ಅಧ್ಯಕ್ಷತೆಯನ್ನು ಚನ್ನಬಸವ ಹೀರೆಮಠ ವಹಿಸಲಿದ್ದಾರೆ. ಎರಡನೇ ಗೋಷ್ಠಿಯ ಆಧ್ಯಕ್ಷತಯನ್ನು ಹೋರಾಟಗಾರ ರಾಘವೇಂದ್ರ ಕುಷ್ಟಗಿವಹಿಸಲಿದ್ದಾರೆ. ನಂತರ ಕವಿಗೋಷ್ಟಿ ನಡೆಯಲಿದ್ದು ಪ್ರಜಾಕವಿ ರಮೇಶ ಗಬ್ಬೂರು ಅಧ್ಯಕ್ಷತೆಯಲ್ಲಿ ನಡೆಯಲಿದ್ದ ಯುವಕವಿಗಳು, ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ನಂತರ ಬಹಿರಂಗ ಅಧೀವೇಶನ, ನಂತರ ಸಮಾರೋಪ ಸಮಾರಂಭ ನಡೆಯಲಿದೆ. ಡಾ.ಶಿವರಾಜ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಸಮಾರೋಪ ನುಡಿಗಳನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಅಮರೇಶ ಯತಗಲ್ ಮಾತನಾಡಲಿದ್ದಾರೆ. ನಂತರ ಸಾಧಕರಿಗೆ ಗೌರವ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಕನ್ನಡ ಆಸ್ತಕರು, ಅಭಿಮಾನಿಗಳು, ವಿವಿಧ ಸಂಘಟನೆಗಳು ಭಾಗವಹಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: ರಾಯಚೂರು | ತುಂಗಾ ಎಡದಂಡೆ ಕಾಲುವೆಗೆ ನೀರು ಹರಿಸಲು ಸಂಯುಕ್ತ ಹೋರಾಟ ಸಮಿತಿ ಒತ್ತಾಯ

ಈ ವೇಳೆ ತಾಯಪ್ಪ ಹೊಸೂರು, ಜಿ.ಸುರೇಶ, ಆಂಜಿನೇಯ್ಯ ಕಾವಲಿ, ರಾವುತರಾವ್, ರೇಖಾ ಬಡಿಗೇರ, ಪ್ರತಿಭಾ ಗೋನಾಳ ಉಪಸ್ಥಿತರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X