ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸಚಿವ, ಶಾಸಕರ ಮನೆಯ ಮುಂದೆ ತಮಟೆ ಚಳುವಳಿ

Date:

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಜಿಲ್ಲೆಯ ಎಲ್ಲಾ ಶಾಸಕರ ಮನೆಯ ಮುಂದೆ ಮಾದಿಗ ಮತ್ತು ಮಾದಿಗ ಉಪ ಜಾತಿಗಳ ಸಂಘಟನೆಗಳ ಒಕ್ಕೂಟ ವತಿಯಿಂದ ತಮಟೆ ಚಳುವಳಿ ನಡೆಸಿದರು.

- Advertisement -

ನಗರದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ತಮಟೆ ಚಳುವಳಿ ಬೈಕ್ ಮೂಲಕ ಸಚಿವ ಎನ್.ಎಸ್. ಬೋಸರಾಜು , ನಗರ ಶಾಸಕ ಶಿವರಾಜ್ ಪಾಟೀಲ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಮನೆಯ ಮುಂದೆ ತಮಟೆ ಚಳುವಳಿ ನಡೆಸಿ ಬಳಿಕ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆ.1 ರಂದು ಸುಪ್ರೀಂ ಕೋರ್ಟ್ ಒಳಮೀಸಲಾತಿಯನ್ನು ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿ ನಾಲ್ಕು ತಿಂಗಳಾದರೂ ರಾಜ್ಯ ಸರ್ಕಾರ ಅಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾಯ ಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಿದ್ದು, ಬಿಟ್ಟರೆ ಬೇರೆ ಏನು ಮಾಡಿಲ್ಲ ಎಂದು ಆರೋಪಿಸಿದರು.

ಎರಡು ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆ ಎಂದು ಸರ್ಕಾರ ಹೇಳಿತ್ತು. ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ, ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವು ಕೂಡ ಕೊಡದೆ ಕಾಲಹರಣ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

2011ರಲ್ಲಿ ಜನಗಣತಿಯ ಅಂಕಿ-ಅಂಶಗಳ ವರ್ಗೀಕರಣ ಮಾಡಿದರೂ ಕೂಡ ಈಗ ಮತ್ತೆ ನಾಗಮೋಹನ್ ದಾಸ್ ಆಯೋಗಕ್ಕೆ ಹಿಂತಿರುಗಿ ಅಂಕಿ ಅಂಶಗಳ ಕೆಲಸ ಕೊಡಲಾಗಿದೆ. ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದರು.

ಒಳಮೀಸಲಾತಿ ಜಾರಿಯಾಗುವವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ನೀಡಿತ್ತು. ಆದರೆ ಆ ಭರವಸೆ ಜಾರಿಯಾಗಿಲ್ಲ. ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಯಿಂದ ನಡೆಯುತ್ತಿವೆ. ರಾಜ್ಯದಲ್ಲಿ ಒಳಮೀಸಲಾತಿಯನ್ನು ತಕ್ಷಣವೇ ಜಾರಿಗೆ ಕಾಂಗ್ರೆಸ್ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ವೈದ್ಯರ ನಿರ್ಲಕ್ಷ್ಯ ಆರೋಪ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಪ್ರತಿಭಟನೆಯಲ್ಲಿ ಮಾದಿಗ ದಂಡೋರ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ, ಸಂಘಟನೆಗಳ ಮುಖಂಡರುಗಳಾದ ರವೀಂದ್ರ ಜಲ್ದಾರ್, ಪಿ. ಯಲ್ಲಪ್ಪ, ಸುಭಾಷ್, ಶಂಶಾಲ, ಭೀಮಣ್ಣ ಮಂಚಾಲ್, ನಾಗರಾಜ, ರವಿ ಗಿಲ್ಲೆಸೂಗುರು, ರಂಜಿತ್ ದಂಡೋರಾ, ಶಾಂತಪ್ಪ ಮಿಡಗಲ್‌ದಿನ್ನಿ, ಎಂ.ಪಿ. ರೆಡ್ಡಿ ಗೋನ್ವಾರ್, ಅಶೋಕ ದುಗನೂರು, ದುಳ್ಳಯ್ಯ ಗುಂಜಹಳ್ಳಿ, ಜಕ್ರಪ್ಪ ಹಂಚಿನಾಳ, ಶರಣಪ್ಪ ಚಂದ್ರಬಂಡಾ, ಭೀಮೇಶ್ ತುಂಟಾಪೂರ, ದಾವೀದ್ ಮರ್ಚೆಟಾಳ, ನವೀನ್ ಕುಮಾರ ಉಪ್ರಾಳ, ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...