ಮಾನ್ವಿ ತಾಲ್ಲೂಕು ಸುಂಕೇಶ್ವರ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ 15ನೇ ಹಣಕಾಸು ಯೋಜನೆಯ ಅನುದಾನದ ಬಳಕೆಯಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭೀಮಸೇನೆ ಕರ್ನಾಟಕ ಮುಖಂಡ ಪ್ರಶಾಂತ್ ಜಾಗೀರಪನ್ನೂರು ಆಗ್ರಹಿಸಿದ್ದಾರೆ.
ಸುಂಕೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ನೇ ಹಣಕಾಸು ಯೋಜನೆ ಅನುದಾನದಲ್ಲಿ ಮೂರು ಕಾಮಗಾರಿಗಳನ್ನು ಆಹ್ವಾನಿಸಲಾಗಿತ್ತು.ಇದಕ್ಕೆ ಸಂಬಂಧ ಪಿಡಿಒ ನಾಗಭೂಷಣ್ ಹಾಗೂ ಕಂಪ್ಯೂಟರ್ ಆಪರೇಟರ್ ಗೌರೀಶ್ ಇಬ್ಬರು ಸೇರಿ ಮೂರು ಟೆಂಡರ್ ವಿಷಯದಲ್ಲಿ ಇಬ್ಬರಿಗೆ ಕಾಮಗಾರಿ ನೀಡಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದರು.
15 ನೇ ಹಣಕಾಸು ಯೋಜನೆ ಅನುದಾನದಲ್ಲಿ 1,678,606 ಅಭಿವೃದ್ಧಿಗಾಗಿ ಹಣ ಬಿಡುಗಡೆಯಾಗಿತ್ತು.ಚರಂಡಿ ಸಂಸ್ಕರಿಸಿದ ವಿಧಾನ 2 ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್ ಗಾಗಿ ನಿರ್ಮಾಣ ಕರೆದಿದ್ದು, ಕಾನೂನು ಪಾಲಿಸದೇ ಕರ್ತವ್ಯಲೋಪ ಎಸಗಿದ್ದಾರೆ ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ಸಾರಿಗೆ ಬಸ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ; 15 ಪ್ರಯಾಣಿಕರಿಗೆ ಗಂಭೀರ ಗಾಯ
ಈ ಸಂಬಂಧ ದೂರಿನ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಭೇಟಿಯಾಗಿ ಸವಿಸ್ತಾರವಾಗಿ ದಾಖಲೆ ಸಮೇತ ಮಾಹಿತಿ ನೀಡಲಾಗಿದೆ.ಮೇಲಾಧಿಕಾರಿಗಳು ಕೂಡ ಪರಿಶೀಲಿಸಿಕೊಂಡು ಹೋಗಿದ್ದಾರೆ.ಒಂದು ವಾರದೊಳಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದರು ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದರು.ಹೀಗೆ ನಿರ್ಲಕ್ಷ್ಯ ಮುಂದುವರೆದರೆ ಪಂಚಾಯತ್ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
